ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಜಕೀಯ ಮುಖಂಡರೊಂದಿಗೆ ಅಪಾರ್ಟ್ ಮೆಂಟ್ ನಿವಾಸಿಗಳ ಸಂವಾದ

|
Google Oneindia Kannada News

ಬೆಂಗಳೂರು, ಮಾರ್ಚ್ 29: ಅಪಾರ್ಟ್ ಮೆಂಟ್ ನಿವಾಸಿಗಳು ತಮ್ಮ ಸಮಸ್ಯೆಯನ್ನು ಬಗೆಹರಿಸಲು ರಾಜಕೀಯ ಪಕ್ಷಗಳಿಗೆ ಒತ್ತಾಯಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ.

ಬೆಂಗಳೂರು ಅಪಾರ್ಟ್ ಮೆಂಟ್ ಫೆಡರೇಷನ್ ನೇತೃತ್ವದಲ್ಲಿ ಸೇರಿರುವ 2 ಲಕ್ಷ ನಿವಾಸಿಗಳು ಸಂವಾದ ಕಾರ್ಯಕ್ರಮ ಏರ್ಪಡಿಸಿ ರಾಜಕೀಯ ಪಕ್ಷಗಳ ಮುಖಂಡರ ಜತೆ ಚರ್ಚಿಸಲು ನಿರ್ಧರಿಸಿದ್ದಾರೆ. ಏ.22ರಂದು ಚೌಡಯ್ಯ ಸ್ಮಾರಕ ಸಭಾಂಗಣದಲ್ಲಿ ಸಂವಾದ ಏರ್ಪಡಿಸಿದ್ದು, ಎಲ್ಲ ರಾಜಕೀಯ ಪಕ್ಷಗಳ ಮುಖಂಡರನ್ನು ಆಹ್ವಾನಿಸಿ ಚರ್ಚೆ ನಡೆಸಲಾಗುತ್ತದೆ.

ಹೊಸ ಅಪಾರ್ಟ್ ಮೆಂಟ್ ಗಳಿಗೆ ಮಾತ್ರ ಎಸ್ ಟಿಪಿ ಅಳವಡಿಕೆ ಸಾಧ್ಯತೆ!ಹೊಸ ಅಪಾರ್ಟ್ ಮೆಂಟ್ ಗಳಿಗೆ ಮಾತ್ರ ಎಸ್ ಟಿಪಿ ಅಳವಡಿಕೆ ಸಾಧ್ಯತೆ!

ಈ ಮೂಲಕ ನಿವಾಸಿಗಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಾಗುತ್ತದೆ. ಪ್ರಮುಖವಾಗಿ ಬಿಬಿಎಂಪಿ, ಜಲಮಂಡಳಿ ಮೊದಲಾದ ಸರ್ಕಾರಿ ಸಂಸ್ಥೆಗಳಿಂದ ಅನುಭವಿಸುತ್ತಿರುವ ಸಂಕಷ್ಟಗಳಿಗೆ ಪರಿಹಾರ ಕಂಡುಕೊಳ್ಳಲು ಈ ಚರ್ಚೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಅಪಾರ್ಟ್ ಮೆಂಟ್ ನಿವಾಸಿಗಳು ತಿಳಿಸಿದ್ದಾರೆ.

Bengaluru Apartment Federation will interact with politicos

ಬಿಎಎಫ್ ನಿಂದ ಎಎಆರ್ಎಎಂಬಿ(ಅರೈಸ್, ಅವೇಕ್, ರೆಸಿಡೆಂಟ್ಸ್ ಆಫ್ ಬೆಂಗಳೂರು) ಅಭಿಯಾನ ಹಮ್ಮಿಕೊಂಡಿದ್ದು, ಈಗಾಗಲೇ ಸಾವಿರಾಋಉ ನಿವಾಸಿಗಳು ಹೊಸ ಮತದಾರರಾಗಲು ಅರ್ಜಿ ಸಲ್ಲಿಸಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಲಿದ್ದಾರೆ ಎಂದು ನಿವಾಸಿಗಳು ಮಾಹಿತಿ ನೀಡಿದ್ದಾರೆ.

English summary
Around two lakhs people living in apartments with several problems with civic amenities like water, electricity, sanitation and many more. So to give them a voice Bengaluru Apartment Federation is organising an interaction program with all political parties leaders on April 22 at chowdaiah Memorial hall
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X