ನಟಿ ಚಂದನಾರಿಂದ ಬೆಂಗಳೂರು ಆರ್ಟ್ಸ್ & ಕ್ರಾಫ್ಟ್ ಮೇಳಕ್ಕೆ ಚಾಲನೆ
ಬೆಂಗಳೂರು ಸೆಪ್ಟೆಂಬರ್ 17: ಕೊರೊನಾ ಸಾಂಕ್ರಾಮಿಕ ಹಾಗೂ ಲಾಕ್‌ಡೌನ್‌ನಿಂದ ಮನೆಯಲ್ಲಿಯೇ ಇದ್ದು ಬೋರ್ ಆಗಿರುವ ಜನರಿಗೆ ಉತ್ತಮ ಶಾಪಿಂಗ್‌ನ ಅವಕಾಶ ದೊರಕಿಸಿಕೊಡುವ ನಿಟ್ಟಿನಲ್ಲಿ ಸೆಪ್ಟೆಂಬರ್ 17 ರಿಂದ 26 ರ ವರೆಗೆ ಕರ್ನಾಟಕ ಚಿತ್ರಕಲಾ ಪರಿಷತ್ ಆವರಣದಲ್ಲಿ ಬೆಳಿಗ್ಗೆ 11 ರಿಂದ ಸಂಜೆ 7 ಗಂಟೆಯವರೆಗೆ ಬೆಂಗಳೂರು ಆರ್ಟ್ಸ್ ಅಂಡ್ ಕ್ರಾಫ್ಟ್ ಕರಕುಶಲ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಆಯೋಜಿಸಲಾಗಿದೆ. ಕೋವಿಡ್ ಹರಡದಂತೆ ಎಲ್ಲಾ ರೀತಿಯ ಮುನ್ನೆಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಪ್ರವೇಶ ಉಚಿತವಾಗಿದೆ. ಈ ಮೇಳಕ್ಕೆ ಇಂದು ನಟಿ ಚಂದನ ರಾಘವೇಂದ್ರ ಚಾಲನೆ ನೀಡಿದರು.
ಕೊರೊನಾ ಲಾಕ್‌ಡೌನ್‌ನಿಂದಾಗಿ ಮನೆಯಲ್ಲಿಯೇ ಇದ್ದು ಬೋರ್ ಆಗಿರುವ ಜನರ ಶಾಪಿಂಗ್ ಥೆರಪಿಗೆ ಬೇಕಾಗಿರುವ ಎಲ್ಲಾ ರೀತಿಯ ವ್ಯವಸ್ಥೆಗಳನ್ನು ಇಲ್ಲಿ ಕಲ್ಪಿಸಲಾಗಿದೆ. ಅಲಂಕಾರಿಕ ವಸ್ತುಗಳ ಜೊತೆಯಲ್ಲಿಯೇ ಮನೆ ಮಂದಿಗೆ ಬೇಕಾಗಿರುವ ಬಟ್ಟೆಗಳು ಹಾಗೂ ಇನ್ನಿತರೆ ವಸ್ತುಗಳನ್ನು ಕೊಳ್ಳಬಹುದಾಗಿದೆ. 80 ಕ್ಕೂ ಹೆಚ್ಚು ಅಂಗಡಿಗಳಿದ್ದು ದೇಶದ ಎಲ್ಲಾ ಭಾಗಗಳಿಂದ ಆಗಮಿಸಿರುವ ಕಲಾವಿದರುಗಳು ತಮ್ಮ ಕಲೆಯನ್ನು ಪ್ರದರ್ಶನಕ್ಕೆ ಇಡಲಿದ್ದಾರೆ.

ಮಣ್ಣು, ಕಲ್ಲು, ಮರ ಹಾಗೂ ಲೋಹಗಳನ್ನು ಬಳಸಿ ತಯಾರಿಸಿರುವ ಗೊಂಬೆಗಳು ಪ್ರಮುಖ ಆಕರ್ಷಣೆಯಾಗಿರಲಿವೆ. ಇದರ ಜೊತೆಯಲ್ಲಿಯೇ, ದೇಶದ ವಿವಿಧ ಮೂಲೆಗಳ ಕಲಾವಿದರ ಕಲಾಕೃತಿಗಳು ಹಾಗೂ ಉತ್ಪನ್ನಗಳು ನೇರವಾಗಿ ಜನರಿಗೆ ತಲುಪಲಿವೆ.

ನಿಮ್ಮ ಮನೆಯ ಗಾರ್ಡನ್ ಅಲಂಕರಿಸಲು, ನಿಮಗೊಪ್ಪುವ ಹ್ಯಾಂಡ್ ಲೂಮ್ ಸ್ಯಾರಿಯನ್ನು ಸೆಲೆಕ್ಟ್ ಮಾಡಲು, ಕುರ್ತಿಗಳು ಮತ್ತು ಆಭರಣಗಳನ್ನು ಕೊಳ್ಳಲು ಅತ್ಯುತ್ತಮ ಮೇಳ ಇದಾಗಿರಲಿದೆ ಎಂದು ನಟಿ ಚಂದನಾ ರಾಘವೇಂದ್ರ ತಿಳಿಸಿದರು.

Recommended Video
ಈ ಮೇಳದಲ್ಲಿ ದೇಶದ ವಿವಿಧ ಭಾಗಗಳ ಕರಕುಶಲಕಾರರು ತಯಾರಿಸಿದ ತರಹೇವಾರಿ ಕರಕುಶಲ ವಸ್ತುಗಳು, ಆಟಿಕೆಗಳು, ಉಡುಪುಗಳು ಸೇರಿದಂತೆ ರಾಜಧಾನಿ ಬೆಂಗಳೂರಿನ ಜನತೆಗೆ ಮುದ ನೀಡುವಂತಹ ಉತ್ಪನ್ನಗಳು ಒಂದೇ ಸೂರಿನಡಿ ದೊರೆಯುತ್ತವೆ. ಮನೆಯನ್ನು ಅಲಂಕಾರ ಮಾಡುವ ಉತ್ಪನ್ನಗಳು, ಹ್ಯಾಂಡ್‍ಲೂಂಗಳು, ಕರಕುಶಲ ವಸ್ತುಗಳು, ಬಟ್ಟೆ, ಮರದ ಆಟಿಕೆಗಳು, ಹೆಂಗಳೆಯರ ಆಕರ್ಷಣೆಗೆಂದು ಆಭರಣಗಳು, ಬೆಡ್ ಲೈನೆನ್, ಕಲಾಕೃತಿಗಳು, ಪೀಠೋಪಕರಣಗಳು, ಮ್ಯಾಟ್‍ಗಳು, ಪಿಂಗಾಣಿ ವಸ್ತುಗಳು ಸೇರಿದಂತೆ ನೂರಾರು ಬಗೆಯ ಉತ್ಪನ್ನಗಳು ಈ ಪ್ರದರ್ಶನದಲ್ಲಿರಲಿವೆ.
-
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
Property Mutation: ಆಸ್ತಿ ನೋಂದಣಿ ನಂತರ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆ: ಸಚಿವ ಕೃಷ್ಣ ಬೈರೇಗೌಡ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
Karnataka: ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್? 'ಐಟಂ ಸಾಂಗ್' ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
RCB: ಆರ್ಸಿಬಿಯಲ್ಲಿ ಜೋಶ್ ಹ್ಯಾಜಲ್ವುಡ್ ಸ್ಥಾನ ತುಂಬುವ ಆಟಗಾರ ಇವರೇ ನೋಡಿ -
ಶೆಲ್ ಬಂಕ್ನಲ್ಲಿ ಪೆಟ್ರೋಲ್ ದರ ಏರಿಕೆ: ಬೆಂಗಳೂರಿನಲ್ಲಿ 10 ದಿನಗಳಲ್ಲಿ 4.50 ರೂಪಾಯಿ ಹೆಚ್ಚಳ; ಇಲ್ಲಿದೆ ದರಪಟ್ಟಿ -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್












Click it and Unblock the Notifications