ಬೆಂಗಳೂರು ಆರ್ಟ್ಸ್ ಅಂಡ್ ಕ್ರಾಫ್ಟ್ ಮೇಳಕ್ಕೆ ಚಾಲನೆ ನೀಡಿದ ನಿಧಿ
ಬೆಂಗಳೂರು, ಮೇ 06, 2022: ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಪ್ರಾರಂಭವಾಗಿರುವ ದೇಶದ ವಿವಿಧ ಭಾಗಗಳ ಕಲಾವಿದರ ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳ ಬೆಂಗಳೂರು ಆರ್ಟ್ಸ್ & ಕ್ರಾಫ್ಟ್ ಮೇಳಕ್ಕೆ ನಟಿಯರಾದ ಸಿಂಧೂ ಗೌಡ ಮತ್ತು ನಿಧಿ ರಾವ್ ಚಾಲನೆ ನೀಡಿದರು.
ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನಂತರ ನಟಿ ಸಿಂಧೂ ಗೌಡ ಮಾತನಾಡಿ ದೇಶದ ವಿವಿಧ ಭಾಗಗಳಿಂದ ಆಗಮಿಸಿರುವ ಕರಕುಶಲಕರ್ಮಿಗಳು ನಿರ್ಮಿಸಿರುವ ಕಲಾಕೃತಿಗಳು ಮತ್ತು ಕರಕುಶಲ ವಸ್ತುಗಳನ್ನು ಒಂದೇ ವೇದಿಕೆಯಲ್ಲಿ ಕೊಳ್ಳುವ ಅವಕಾಶ ಇಲ್ಲಿ ನಿರ್ಮಿಸಲಾಗಿದೆ. ಕಲಾವಿದರು ಮತ್ತು ಕರಕುಶಕರ್ಮಿಗಳಿಗೆ ಸೂಕ್ತ ವೇದಿಕೆಯನ್ನು ಒದಗಿಸುವ ನಿಟ್ಟಿನಲ್ಲಿ ಕರ್ನಾಟಕ ಚಿತ್ರಕಲಾ ಪರಿಷತ್ ದೇಶದಲ್ಲೇ ಮುಂಚೂಣಿಯಲ್ಲಿದೆ ಎಂದು ಹೇಳಿದರು.

ಈ ಕಾರ್ಯಕ್ರಮದ ಆಯೋಜಕರಾದ ಅಫ್ತಾಬ್
ಈ ಕಾರ್ಯಕ್ರಮದ ಆಯೋಜಕರಾದ ಅಫ್ತಾಬ್ ಮಾತನಾಡಿ, ''ಕರ್ನಾಟಕ ಚಿತ್ರಕಲಾ ಪರಿಷತ್ ಆವರಣದಲ್ಲಿ ಬೆಳಗ್ಗೆ 11 ರಿಂದ ಸಂಜೆ 7 ಗಂಟೆಯವರೆಗೆ ಕರಕುಶಲ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಆಯೋಜಿಸಲಾಗಿದ್ದು, ಪ್ರವೇಶ ಉಚಿತವಾಗಿದೆ. 80 ಕ್ಕೂ ಹೆಚ್ಚು ಅಂಗಡಿಗಳಿದ್ದು ದೇಶದ ಎಲ್ಲಾ ಭಾಗಗಳಿಂದ ಆಗಮಿಸಿರುವ ಕಲಾವಿದರುಗಳು ತಮ್ಮ ಕಲೆಯನ್ನು ಪ್ರದರ್ಶನಕ್ಕೆ ಇಡಲಿದ್ದಾರೆ. ದೇಶದ ವಿವಿಧ ಮೂಲೆಗಳ ಕಲಾವಿದರ ಕಲಾಕೃತಿಗಳು ಹಾಗೂ ಉತ್ಪನ್ನಗಳು ನೇರವಾಗಿ ಜನರಿಗೆ ತಲುಪಲಿವೆ. ನಿಮ್ಮ ಮನೆಯ ಗಾರ್ಡನ್ ಅಲಂಕರಿಸಲು, ನಿಮಗೊಪ್ಪುವ ಹ್ಯಾಂಡ್ ಲೂಮ್ ಸ್ಯಾರಿಯನ್ನು ಸೆಲೆಕ್ಟ್ ಮಾಡಲು, ಕುರ್ತಿಗಳು ಮತ್ತು ಆಭರಣಗಳನ್ನು ಕೊಳ್ಳಲು ಅತ್ಯುತ್ತಮ ಮೇಳ ಇದಾಗಿರಲಿದೆ,'' ಎಂದು ಹೇಳಿದರು.

ದೇಶದ ವಿವಿಧ ಭಾಗಗಳ ಕರಕುಶಲಕಾರರು
ಈ ಮೇಳದಲ್ಲಿ ದೇಶದ ವಿವಿಧ ಭಾಗಗಳ ಕರಕುಶಲಕಾರರು ತಯಾರಿಸಿದ ತರಹೇವಾರಿ ಕರಕುಶಲ ವಸ್ತುಗಳು, ಆಟಿಕೆಗಳು, ಉಡುಪುಗಳು ಸೇರಿದಂತೆ ರಾಜಧಾನಿ ಬೆಂಗಳೂರಿನ ಜನತೆಗೆ ಮುದ ನೀಡುವಂತಹ ಉತ್ಪನ್ನಗಳು ಒಂದೇ ಸೂರಿನಡಿ ದೊರೆಯುತ್ತವೆ. ಮನೆಯನ್ನು ಅಲಂಕಾರ ಮಾಡುವ ಉತ್ಪನ್ನಗಳು, ಹ್ಯಾಂಡ್‍ಲೂಂಗಳು, ಕರಕುಶಲ ವಸ್ತುಗಳು, ಬಟ್ಟೆ, ಮರದ ಆಟಿಕೆಗಳು, ಹೆಂಗಳೆಯರ ಆಕರ್ಷಣೆಗೆಂದು ಆಭರಣಗಳು, ಬೆಡ್ ಲೈನೆನ್, ಕಲಾಕೃತಿಗಳು, ಪೀಠೋಪಕರಣಗಳು, ಮ್ಯಾಟ್‍ಗಳು, ಪಿಂಗಾಣಿ ವಸ್ತುಗಳು ಸೇರಿದಂತೆ ನೂರಾರು ಬಗೆಯ ಉತ್ಪನ್ನಗಳು ಈ ಪ್ರದರ್ಶನದಲ್ಲಿರಲಿವೆ.

ಉತ್ಪನ್ನಗಳು ನೇರವಾಗಿ ಜನರಿಗೆ ತಲುಪಲಿವೆ
ದೇಶದ ಎಲ್ಲಾ ಭಾಗಗಳಿಂದ ಆಗಮಿಸಿರುವ ಕಲಾವಿದರುಗಳು ತಮ್ಮ ಕಲೆಯನ್ನು ಪ್ರದರ್ಶನಕ್ಕೆ ಇಡಲಿದ್ದಾರೆ. ಮಣ್ಣು, ಕಲ್ಲು, ಮರ ಹಾಗೂ ಲೋಹಗಳನ್ನು ಬಳಸಿ ತಯಾರಿಸಿರುವ ಗೊಂಬೆಗಳು ಪ್ರಮುಖ ಆಕರ್ಷಣೆಯಾಗಿರಲಿವೆ. ಇದರ ಜೊತೆಯಲ್ಲಿಯೇ, ದೇಶದ ವಿವಿಧ ಮೂಲೆಗಳ ಕಲಾವಿದರ ಕಲಾಕೃತಿಗಳು ಹಾಗೂ ಉತ್ಪನ್ನಗಳು ನೇರವಾಗಿ ಜನರಿಗೆ ತಲುಪಲಿವೆ.

ಬೆಂಗಳೂರು ಆರ್ಟ್ಸ್ ಅಂಡ್ ಕ್ರಾಫ್ಟ್ ಮೇಳ
ಸ್ಥಳ: ಕರ್ನಾಟಕ ಚಿತ್ರಕಲಾ ಪರಿಷತ್ (ಶಿವಾನಂದ ವೃತ್ತದ ಬಳಿ)
ದಿನಾಂಕ: ಮೇ 6 ರಿಂದ ಮೇ 15 ರ ರವರೆಗೆ
ಸಮಯ: ಬೆಳಗ್ಗೆ 11 ಗಂಟೆಯಿಂದ ಸಂಜೆ 7 ರ ವರೆಗೆ
ನಿಮ್ಮ ಮನೆಯ ಗಾರ್ಡನ್ ಅಲಂಕರಿಸಲು, ನಿಮಗೊಪ್ಪುವ ಹ್ಯಾಂಡ್ ಲೂಮ್ ಸ್ಯಾರಿಯನ್ನು ಸೆಲೆಕ್ಟ್ ಮಾಡಲು, ಕುರ್ತಿಗಳು ಮತ್ತು ಆಭರಣಗಳನ್ನು ಕೊಳ್ಳಲು ಅತ್ಯುತ್ತಮ ಮೇಳ ಇದಾಗಿರಲಿದೆ.
Recommended Video
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ












Click it and Unblock the Notifications