ಚಿತ್ರಕಲಾ ಪರಿಷತ್ತಿನಲ್ಲಿ ಬೆಂಗಳೂರು ಆರ್ಟ್ಸ್ ಅಂಡ್ ಕ್ರಾಫ್ಟ್ ಮೇಳ
ಬೆಂಗಳೂರು ಡಿಸೆಂಬರ್ 29: ಕೊರೊನಾ ಸಂಕಷ್ಟ ಕಾಲದಲ್ಲಿ ತೀವ್ರ ತೊಂದರೆಗೆ ಈಡಾಗಿರುವ ದೇಶಾದ್ಯಂತ ಕರಕುಶಲ ಕರ್ಮಿಗಳಿಗೆ ಉತ್ತಮ ಮಾರುಕಟ್ಟೆಯನ್ನು ಒದಗಿಸುವ ದೃಷ್ಟಿಯಿಂದ, ಚಿತ್ತಾರ ಸಹಯೋಗದಲ್ಲಿ ಗ್ರಾಂಡ್ ಫ್ಲಿಯಾ ಮಾರ್ಕೆಟ್ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಆವರಣದಲ್ಲಿ ಜನವರಿ 1 ರಿಂದ ಬೆಂಗಳೂರು - ಆರ್ಟ್ ಅಂಡ್ ಕ್ರಾಫ್ಟ್ ಮೇಳವನ್ನು ಆಯೋಜಿಸಿದೆ.
ನಗರದ ಮಧ್ಯಭಾಗದ ಕರಕುಶಲ ವಸ್ತುಗಳಿಗೊಸ್ಕರವೇ ಬಹಳಷ್ಟು ಪ್ರಸಿದ್ದಿಯನ್ನು ಹೊಂದಿರುವ ಚಿತ್ರಕಲಾ ಪರಿಷತ್ ಆವರಣದಲ್ಲಿ ಇಂತಹದೊಂದು ವಿಶಿಷ್ಟ್ಯ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಆಯೋಜಿಸಲಾಗಿದೆ. ಮುಂಬರುವ ಹಬ್ಬದ ಹಾಗೂ ಮದುವೆಯ ಸೀಸನ್ ಗೆ ಶಾಪಿಂಗ್ ಮಾಡಲು ಹಾಗೂ ಒಂದು ಸಂಪೂರ್ಣ ದಿನದ ಶಾಪಿಂಗ್ ನ ಅನುಭವ ಪಡೆಯಲು ಈ ಮೇಳ ಸೂಕ್ತ ಆಯ್ಕೆಯಾಗಿರಲಿದೆ.
ನೂರಕ್ಕೂ ಹೆಚ್ಚು ಸ್ಟಾಲ್‌ಗಳಲ್ಲಿ ದೇಶದ ವಿವಿಧ ಮೂಲೆಗಳ ಕಲಾವಿದರ ಕಲಾಕೃತಿಗಳು ಹಾಗೂ ಉತ್ಪನ್ನಗಳು ನೇರವಾಗಿ ಜನರಿಗೆ ತಲುಪಲಿವೆ. ನಿಮ್ಮ ಮನೆಯ ಗಾರ್ಡನ್ ಅಲಂಕರಿಸಲು, ನಿಮಗೊಪ್ಪುವ ಹ್ಯಾಂಡ್ ಲೂಮ್ ಸ್ಯಾರಿಯನ್ನು ಸೆಲೆಕ್ಟ್ ಮಾಡಲು, ಕುರ್ತಿಗಳು ಮತ್ತು ಆಭರಣಗಳನ್ನು ಕೊಳ್ಳಲು ಅತ್ಯುತ್ತಮ ಮೇಳ ಇದಾಗಿರಲಿದೆ.
ಈ ಮೇಳದಲ್ಲಿ ದೇಶದ ವಿವಿಧ ಭಾಗಗಳ ಕರಕುಶಲಕಾರರು ತಯಾರಿಸಿದ ತರಹೇವಾರಿ ಕರಕುಶಲ ವಸ್ತುಗಳು, ಆಟಿಕೆಗಳು, ಉಡುಪುಗಳ ಸೇರಿದಂತೆ ರಾಜಧಾನಿ ಬೆಂಗಳೂರಿನ ಜನತೆಗೆ ಮುದ ನೀಡುವಂತೆಹ ಉತ್ಪನ್ನಗಳು ಒಂದೇ ಸೂರಿನಡಿ ದೊರೆಯುಲಿವೆ.
ಜನವರಿ 1 ರಿಂದ 10 ರ ವರೆಗೆ ಈ ಪ್ರದರ್ಶನವು ನಡೆಯಲಿದ್ದು, ಪ್ರತಿದಿನ 11 ರಿಂದ ಸಂಜೆ 7 ಗಂಟೆಯವರೆಗೆ ಪ್ರದರ್ಶನ ಮತ್ತು ಮಾರಾಟ ಮೇಳ ಇರಲಿದೆ.