ಬಸ್ನ ಗಾಜು ಒಡೆದು ಪುಡಿಪುಡಿ ಮಾಡಿದ ಟ್ರಾಫಿಕ್ ಎಎಸ್ಐ, ಕಾರಣವೇನು?
ಬೆಂಗಳೂರು, ಡಿಸೆಂಬರ್ 15: ಟ್ರಾಫಿಕ್ ಉಲ್ಲಂಘಿಸಿದ ಕಾರಣಕ್ಕೆ ಟ್ರಾಫಿಕ್ ಎಎಸ್ಐ ಬಸ್ನ ಗಾಜನ್ನೇ ಒಡೆದು ಪುಡಿಪುಡಿ ಮಾಡಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ.
ಅನುಮತಿ ಇಲ್ಲದೆ ಮೇಲ್ಸೇತುವೆ ಮೇಲೆ ಸಂಚರಿಸುತ್ತಿದ್ದ ಚಾಲಕನಿಗೆ ಕೈ ತೋರಿಸಿದರೂ ಬಸ್ ನಿಲ್ಲಿಸಲಿಲ್ಲ ಅದಕ್ಕೆ ಕೋಪಗೊಂಡ ಟ್ರಾಫಿಕ್ ಎಎಸ್ಐ ಬಸ್ಗೆ ಹೆಲ್ಮೆಟ್ನಿಂದ ಹೊಡೆದು ಗಾಜು ಪುಡಿಪುಡಿ ಮಾಡಿದ್ದಾರೆ.
ಮಡಿವಾಳ ಠಾಣೆಯ ಸಹಾಯಕ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಕರೆದು ಎಚ್ಚರಿಕೆ ನೀಡಿ ಕಳುಹಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಬೆಳಗ್ಗೆ 11ರ ಸುಮಾರಿಗೆ ಚನ್ನಪಟ್ಟಣ ಡಿಪೋದ ಕೆಎಸ್ಆರ್ಟಿಸಿ ಬಸ್ ಹೊಸೂರು ಕಡೆಯಿಂದ ಕಲಾಸಿಪಾಳ್ಯಕ್ಕೆ ತೆರಳುತ್ತಿತ್ತು. ಸಿಲ್ಕ್ಬೋರ್ಡ್ ನ ಸಮೀಪ ಅಂಡರ್ಪಾಸ್ನಲ್ಲಿ ವಾಹನ ದಟ್ಟಣೆ ಹೆಚ್ಚಾಗಿದ್ದಲ್ದೆ, ವಾಹನಗಳು ಸಾಲುಗಟ್ಟಿ ನಿಂತಿದ್ದವು. ಇದೇ ರಸ್ತೆಯಲ್ಲಿ ಬಂದ ಬಸ್ ಚಾಲಕ ಮೇಲ್ಸೇತುವೆ ಮೇಲೆ ಓಡಿಸಿದ್ದಾನೆ.
ಅಲ್ಲಿಯೇ ಕರ್ತವ್ಯ ನಿರತ ಎಎಸ್ಐ ಗಿರಿಯಪ್ಪ ಬಸ್ ನಿಲ್ಲಿಸುವಂತೆ ಚಾಲಕನಿಗೆ ಸೂಚಿಸಿದ್ದರು, ಹಿಂದೆ ವಾಹನಗಳು ಹೆಚ್ಚಾಗಿದ್ದರಿಂದ ಚಾಲಕ ಸ್ವಲ್ಪ ಮುಂದಕ್ಕೆ ಹೋಗಿದ್ದಾನೆ. ಅದಕ್ಕೆ ಕೋಪಗೊಂಡ ಎಎಸ್ಐ, ಚಾಲಕ ಸೀಟು ಬಳಿಯ ಗ್ಲಾಸ್ಗೆ ಹೆಲ್ಮೆಟ್ನಿಂದ ಗಾಜು ಒಡೆದು ಹಾಕಿದ್ದಾರೆ.
ಅದನ್ನು ಪ್ರಶ್ನಿಸಿದ್ದಕ್ಕೆ ಎಷ್ಟು ಹೇಳಿದರೂ ಕೇಳುವುದಿಲ್ಲ ಬಸ್ ನಿಲ್ಲಿಸದೆ ಮುಂದಕ್ಕೆ ಹೋಗುತ್ತೀಯಾ ಠಾಣೆಗೆ ಹೋಗಿ ದೂರು ಕೊಡು ಎಂದು ಹೇಳಿದ್ದರು. ಅಲ್ಲಿಂದ ಹೊರಟ ಚಾಲಕ ಘಟನೆಯ ವಿವರವನ್ನು ಚಿತ್ರೀಕರಿಸಿದ ಚಾಲಕ ಸಾಮಾಜಿಕ ಜಾಲತಾಣ ಫೇಸ್ಬುಕ್ನಲ್ಲಿ ಅಪ್ಲೋಡ್ ಮಾಡಿದ್ದರು.
-
BMTC ಬಸ್ಗಳಲ್ಲಿ ಟಿಕೆಟ್ ಇಲ್ಲದೆ ಓಡಾಡುವವರೇ ಎಚ್ಚರ! ಫೆಬ್ರವರಿಯಲ್ಲೇ 5 ಲಕ್ಷ ರೂ.ದಂಡ ವಸೂಲಿ -
RCB: ಆರ್ಸಿಬಿಯಲ್ಲಿ ಜೋಶ್ ಹ್ಯಾಜಲ್ವುಡ್ ಸ್ಥಾನ ತುಂಬುವ ಆಟಗಾರ ಇವರೇ ನೋಡಿ -
ಶೆಲ್ ಬಂಕ್ನಲ್ಲಿ ಪೆಟ್ರೋಲ್ ದರ ಏರಿಕೆ: ಬೆಂಗಳೂರಿನಲ್ಲಿ 10 ದಿನಗಳಲ್ಲಿ 4.50 ರೂಪಾಯಿ ಹೆಚ್ಚಳ; ಇಲ್ಲಿದೆ ದರಪಟ್ಟಿ -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು











Click it and Unblock the Notifications