Avare Mela 2024: ವರ್ಷಾರಂಭದಲ್ಲೇ ಬೆಂಗಳೂರಿನಲ್ಲಿ ಬೃಹತ್ 'ಅವರೆ ಮೇಳ', ಎಲ್ಲಿ? ಯಾವಾಗ? ಇಲ್ಲಿದೆ ಮಾಹಿತಿ
ಬೆಂಗಳೂರು, ಡಿಸೆಂಬರ್ 06: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಆಹಾರ ಪ್ರಿಯರಿಗಾಗಿ ಒಂದಲ್ಲಾ ಒಂದು ಮೇಳ ಇದ್ದೇ ಇರುತ್ತದೆ. ಋತುವಿಗೆ ತಕ್ಕಂತೆ ಪೂರೈಕೆಗೆ ತಕ್ಕಂತೆ ವಿವಿಧ ಆಹಾರ ಮೇಳಗಳನ್ನು ಇಲ್ಲಿ ಆಯೋಜಿಸಲಾಗುತ್ತದೆ. ಇಲ್ಲಿನ ವಾಸಿಗಳು ಅಷ್ಟೇ, ವಸ್ತು ಪ್ರದರ್ಶನ ಹಾಗೂ ಇತರ ಮೇಳಗಳಿಗಿಂತ, ಆಹಾರ ಮೇಳಗಳನ್ನು ಹೆಚ್ಚು ಇಷ್ಟಪಡುತ್ತಾರೆ ಹಾಗೂ ಭಾಗವಹಿಸುತ್ತಾರೆ.
ಹೀಗಾಗಿ ಚಳಿಗಾಲ ಈ ಸಮಯದಲ್ಲಿ ಮತ್ತೊಂದು ಬೃಹತ್ ಆಹಾರ ಮೇಳಕ್ಕೆ ಬೆಂಗಳೂರು ನಗರ ಸಿದ್ಧವಾಗುತ್ತಿದೆ. ಅವರೆ ಕಾಯಿ ದೋಸೆ, ಅವರೆ

ಮಂಚೂರಿಯನ್, ಅವರೆ ಪಫ್, ಅವರೆ ಹಲ್ವಾ, ಅವರೆ ಐಸ್‌ಕ್ರೀಂ ಹೆಸರು ಕೇಳುತ್ತಿದ್ದಂತೆ ಬಾಯಲ್ಲಿ ನೀರು ಬರುವುದಂತೂ ಗ್ಯಾರಂಟಿ. ಹೀಗಾಗಿ ಅವರೆ ಪ್ರಿಯರಿಗಾಗಿ ಬೆಂಗಳೂರು ಅವರೆ ಮೇಳಕ್ಕೆ ದಿನಾಂಕ ನಿಗದಿಯಾಗಿದೆ.
2024ರ ಜನವರಿ 5 ರಿಂದ 9 ರವರೆಗೆ 24ನೇ ಆವೃತ್ತಿಯ ಅವರೆ ಬೇಳೆ ಮೇಳ ನ್ಯಾಷನಲ್ ಕಾಲೇಜು ಮೈದಾನದಲ್ಲಿ ನಡೆಯಲಿದೆ. ಶ್ರೀ ವಾಸವಿ ಕಾಂಡಿಮೆಂಟ್ಸ್ ವತಿಯಿಂದ ಆಯೋಜನೆಗೊಳ್ಳುವ ಈ ಮೇಳದಲ್ಲಿ ಅವರೆ ಬೇಳೆಯ ವಿವಿಧ ಖಾದ್ಯಗಳು ಜನರಿಗೆ ಲಭ್ಯವಾಗಲಿದೆ.
ಪ್ರತಿ ವರ್ಷದಂತೆ ಈ ವರ್ಷವೂ ದೊಡ್ಡ ಮಟ್ಟದ ಅವರೆ ಮೇಳ ನಡೆಲಿದ್ದು, ಅವರೆ ಕಾಯಿ ಐಸ್‌ಕ್ರೀಂ, ಅವರೆ ಕಾಯಿ ದೋಸೆ, ಅವರೆ ಮಂಚೂರಿಯನ್, ಅವರೆ ಪಫ್, ಅವರೆ ಹಲ್ವಾ, ಅವರೆ ವಡೆ, ಅವರೆ ಪಾಯಸ ಸೇರಿದಂತೆ ಸುಮಾರು ನೂರಕ್ಕೂ ಹೆಚ್ಚು ತಿನಿಸುಗಳು ಈ ಮೇಳದಲ್ಲಿ ಸಿಗಲಿದೆ.

ಇನ್ನು ಈ ಬಗ್ಗೆ ಶ್ರೀ ವಾಸವಿ ಕಾಂಡಿಮೆಂಟ್ಸ್ ಮಾಲೀಕರು ಸ್ವಾತಿ ಕೆ.ಎಸ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, 'ಈ ವರ್ಷದ ಅವರೆ ಮೇಳದಲ್ಲಿ ವಿವಿಧ ಖಾದ್ಯಗಳನ್ನು ಸವಿಯದೆ ಯಾರೂ ವಾಪಸ್ ಹೋಗದಂತೆ ಉತ್ತಮ ತಯಾರಿ ನಡೆಸುತ್ತಿದ್ದೇವೆ. ಕಳೆದ ವರ್ಷ ನ್ಯಾಷನಲ್ ಕಾಲೇಜು ಮೈದಾನದ ಒಂದು ಭಾಗವನ್ನು ಮಾತ್ರ ಮೇಳಕ್ಕೆ ಬಳಸಿಕೊಳ್ಳಲಾಗಿತ್ತು. ಆದರೆ ಈ ವರ್ಷ ಸಂಪೂರ್ಣ ಸ್ಥಳವನ್ನು ಬಳಸಿಕೊಳ್ಳುವುದರೊಂದಿಗೆ ಪಾರ್ಕಿಂಗ್ ಸೌಲಭ್ಯವನ್ನು ಕೂಡ ಒದಗಿಸಲಾಗುತ್ತಿದೆ.
ಮೆಟ್ರೋ ನಿಲ್ದಾಣ ಸಮೀಪವಿರುವುದರಿಂದ ಜನರು ಸುಲಭವಾಗಿ ಈ ಅವರೆ ಮೇಳಕ್ಕೆ ಬರಬಹುದು. ಕಳೆದ ವರ್ಷ ಸುಮಾರು 40 ಅಂಗಡಿಗಳಿದ್ದವು. ಆದರೆ ಈ ವರ್ಷ ಸ್ಟಾಲ್‌ಗಳ ಸಂಖ್ಯೆ ಹೆಚ್ಚಿಸಿದ್ದು, ಸುಮಾರು 80 ಅಂಗಡಿಗಳಿರಲಿವೆ. ಹೆಚ್ಚು ಬೇಡಿಕೆಯಿರುವ ತಿನಿಸುಗಳಿಗೆ ಹೆಚ್ಚಿನ ಕೌಂಟರ್ ತೆರೆಯಲಾಗುತ್ತದೆ. ಹಿರಿಯ ನಾಗರಿಕರಿಗಾಗಿ ವಿಶೇಷ ಕೌಂಟರ್ ಜೊತೆಗೆ, ಅವರಿಗಾಗಿ ಪ್ರತ್ಯೇಕ ಆಸನ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ ಎಂದು ವಿವರಿಸಿದ್ದಾರೆ.
ಮೊದಲೆಲ್ಲಾ ಅವರೇ ಮೇಳವನ್ನು ಬೆಂಗಳೂರಿನ ವಿವಿ ಪುರಂ ಫುಡ್ ಸ್ಟ್ರೀಟ್‌ನಲ್ಲಿ ನಡೆಸಲಾಗುತ್ತಿತ್ತು. ಆದರೆ ನವೀಕರಣದ ಕಾರಣ ಕಳೆದ ವರ್ಷದಿಂದ ನ್ಯಾಷನಲ್ ಕಾಲೇಜಿನಲ್ಲಿ ಈ ಅವರೆ ಮೇಳವನ್ನು ನಡೆಸಲಾಗುತ್ತಿದೆ. ಕಳೆದ ಬಾರಿ ನಿರೀಕ್ಷೆಗೂ ಮೀರಿ ಜನರು ಭಾಗಿಯಾಗಿದ್ದರು. ಕಳೆದ ವರ್ಷ ಸುಮಾರು ಐದು ಲಕ್ಷಕ್ಕೂ ಹೆಚ್ಚು ಜನರು ಈ ಅವರೆ ಮೇಳದಲ್ಲಿ ಭಾಗಿಯಾಗಿದ್ದರು. ಹೀಗಾಗಿ ಕಾಲ್ತುಳಿತ ಉಂಟಾಗಿತ್ತು. ಆದರೆ ಈ ಬಾರಿ ಆಯೋಜಕರು ದೊಡ್ಡ ಮಟ್ಟದಲ್ಲೇ ಪ್ಲಾನ್ ಮಾಡಿದ್ದು, ಅವರೆ ಮೇಳಕ್ಕೆ ಬರುವ ಜನರಿಗೆ ತೊಂದರೆಯಾಗದಂತೆ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡು ಸಿದ್ಧತೆ ನಡೆಸುತ್ತಿದ್ದಾರೆ.
-
ನಾವು ಸೇವಿಸುವ ಈ ಆಹಾರಗಳಲ್ಲಿ ಆಲ್ಕೋಹಾಲ್ ಇರುತ್ತದೆ.. ಇದು ನಿಮಗೆ ಗೊತ್ತಿರಲಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಆಂಧ್ರಪ್ರದೇಶದಲ್ಲಿ ಕಲಬೆರಕೆ ಹಾಲು ಸೇವಿಸಿ 16 ಮಂದಿ ಸಾವು: ಹಲವು ರಾಜ್ಯಗಳಲ್ಲಿ ಅಧಿಕಾರಿಗಳಿಂದ ದಾಳಿ -
ರೈಲಿನಲ್ಲಿ ಆಹಾರ ಗುಣಮಟ್ಟ, ಅಧಿಕೃತ ವೆಂಡರ್ ಮಾಹಿತಿ ತಿಳಿಯಲು QR ಕೋಡ್ ವ್ಯವಸ್ಥೆ, ಏನಿದು? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್












Click it and Unblock the Notifications