Bengaluru Bandh: ಬ್ರ್ಯಾಂಡ್ ಬೆಂಗಳೂರಿಗೆ ಹಾನಿ ಮಾಡಿದರೆ ಹೃದಯಕ್ಕೆ ಹಾನಿ: ಡಿಕೆ ಶಿವಕುಮಾರ್

ಬೆಂಗಳೂರು, ಸೆಪ್ಟಂಬರ್ 24: ಕಾವೇರಿ ನೀರು ಹಂಚಿಕೆ ವಿಚಾರ ಮತ್ತಷ್ಟು ತೀವ್ರಗೊಳ್ಳುವ ಲಕ್ಷಣಗಳು ಕಂಡು ಬರುತ್ತಿವೆ. ಕಾರಣ ಕೆಲವು ಸಂಘಟನೆಗಳೂ ಸೆಪ್ಟಂಬರ್ 26ರಂದು ಬೆಂಗಳೂರು ಬಂದ್‌ಗೆ ಕರೆ ನೀಡಿವೆ. ಈ ಬಂದ್ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರತಿಭಟನಾಕಾರನ್ನು ಪ್ರಶ್ನೆ ಮಾಡಿದ್ದಾರೆ.

ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರಕ್ಕೆ ಸಂಬಂಧಿಸಿಂತೆ ಆಕ್ರೋಶ ಗೊಂಡಿರುವ ರೈತ ಪರ ಸಂಘಟನೆಗಳು ಮತ್ತು ಕನ್ನಡ ಪರ ಸಂಘಟನೆಗಳು ಮಂಗಳವಾರ ದಿನವಿಡೀ ಬೆಂಗಳೂರು ಬಂದ್‌ ಮಾಡಲಿವೆ. ಈ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಶನಿವಾರ ಪ್ರತಿಭಟನಾಕಾರರನ್ನು ತರಾಟೆಗೆ ತೆಗೆದುಕೊಂಡರು. ಬಂದ್‌ ಮಾಡುವುದರಿಂದ ನಿಮಗೇನು ಲಾಭ? ಎಂದು ಅವರು ಪ್ರಶ್ನಿಸಿದ್ದಾರೆ.

Bengaluru Bandh For Cauvery: DCM DK Shivakumar Reaction About Benaluru Bandh On Sep 26th

ರೈತರು ಸೇರಿದಂತೆ ಬೆಂಗಳೂರು ನಗರದ ನಾಗರಿಕರ ಹಿತಾಸಕ್ತಿಗಳನ್ನು ಕಾಪಾಡುವುದು ನಮ್ಮ ಸರ್ಕಾರದ ಬದ್ಧತೆ. ಇದು ನಿಮಗ ಅರ್ಥವಾಗದಿರಬಹುದು. ಇಂತಹ ಬಂದ್ ಗಳ ಮೂಲಕ 'ಬ್ರಾಂಡ್ ಬೆಂಗಳೂರಿಗೆ' ಯಾವುದೇ ರೀತಿಯ ಹಾನಿ ಉಂಟು ಮಾಡುವುದು 'ನಿಮ್ಮ ಹೃದಯ'ಕ್ಕೆ ಹಾನಿ ಮಾಡಿದಂತೆ ಎಂದು ಅವರು ಹೇಳಿದ್ದಾರೆ. ಇನ್ನೂ ಬಂದ್ ಗೆ ಬೃಹತ್ ಬೆಂಗಳೂರು ಹೋಟೆಲ್ ಮಾಲೀಕರ ಸಂಘದ ಸದಸ್ಯರು ಬಂದ್‌ಗೆ ನೈತಿಕ ಬೆಂಬಲ ವ್ಯಕ್ತಪಡಿಸಿದ್ದಾರೆ.

ಇನ್ನೂ ಈ ಮುಷ್ಕರಕ್ಕೆ ಕನ್ನಡ ಚಿತ್ರರಂಗ (ಸ್ಯಾಂಡಲ್‌ವುಡ್) ನಿರ್ಮಾಪಕರ ಸಂಘವೂ ಬೆಂಬಲ ವ್ಯಕ್ತಪಡಿಸಿದ್ದು, ಪ್ರತಿಭಟನಾಕಾರರನ್ನು ಸೇರಿಕೊಂಡಿದೆ. ಬೆಂಗಳೂರಿನ ಖಾಸಗಿ ಸಾರಿಗೆ ಆಪರೇಟರ್ಸ್ ಫೆಡರೇಶನ್ ಮಂಗಳವಾರ ತನ್ನ ಯಾವುದೇ ಸೇವೆಗಳನ್ನು ನಿರ್ವಹಿಸುವುದಿಲ್ಲ ಎಂದು ತಿಳಿಸಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಸ್ಟಾಫ್ ಮತ್ತು ವರ್ಕರ್ಸ್ ಫೆಡರೇಶನ್ ಜೊತೆಗೆ ಸಂಯೋಜಿತವಾಗಿರುವ ಚಾಲಕರು ಮತ್ತು ನಿರ್ವಾಹಕರು ಅಂದು ಬೆಳಗ್ಗೆ 6 ರಿಂದ ಸಂಜೆ 6 ರವರೆಗೆ ಬಸ್‌ ಕಾರ್ಯಾಚರಣೆ ನಡೆಸುವುದಿಲ್ಲ ಎಂದು ಘೋಷಿಸಿದ್ದಾರೆ.

Bengaluru Bandh For Cauvery: DCM DK Shivakumar Reaction About Benaluru Bandh On Sep 26th

ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ವೇದಿಕೆಯ ಕನ್ನಡ ಪರ ಕಾರ್ಯಕರ್ತರು ಶನಿವಾರ ಬೆಂಗಳೂರು ಹೊರವಲಯದ ಅತ್ತಿಬೆಲೆ ಚೆಕ್ ಪೋಸ್ಟ್ ಬಳಿ ಕರ್ನಾಟಕ ಮತ್ತು ತಮಿಳುನಾಡು ಗಡಿಯನ್ನು ತಡೆದು ಪ್ರತಿಭಟಿಸಲು ಯತ್ನಿಸಿದರು.

ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿ 100ಕ್ಕೂ ಹೆಚ್ಚು ಕಾರ್ಯಕರ್ತರು ಶನಿವಾರ ಕಾವೇರಿ ವಿವಾದ ವಿಚಾರವಾಗಿ ಪ್ರತಿಭಟನೆ ನಡೆಸಿದರು. ಆದರೆ, ಪೊಲೀಸರು ತಕ್ಷಣ ಪ್ರತಿಕ್ರಿಯಿಸಿ, ಪ್ರತಿಭಟನಾಕಾರರನ್ನು ತಡೆಗಟ್ಟಿ ವಶಕ್ಕೆ ಪಡೆದು ಗುಂಪು ಚದುರಿಸುವಲ್ಲಿ ಯಶಸ್ವಿ ಯಾದರು. ಪ್ರತಿಭಟನೆಯಿಂದಾಗಿ ಕೆಲ ಕಾಲ ಕರ್ನಾಟಕ ಸಂಚಾರ ಅಸ್ತವೆಸ್ತವಾಯಿತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+