Bengaluru Bandh: ಬೆಂಗಳೂರಿನಲ್ಲಿ 20ಕ್ಕೂ ಹೆಚ್ಚು ಪ್ರತಿಭಟನಾಕಾರರ ಬಂಧನ
ಬೆಂಗಳೂರು, ಸೆಪ್ಟೆಂಬರ್ 26: ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುವುದನ್ನು ವಿರೋಧಿಸಿ ಪ್ರತಿಭಟನಾ ಮೆರವಣಿಗೆ ನಡೆಸಲು ಯತ್ನಿಸಿದ 20 ಕ್ಕೂ ಹೆಚ್ಚು ಜನರನ್ನು ಕರ್ನಾಟಕ ಪೊಲೀಸರು ಮಂಗಳವಾರ ಬೆಳಿಗ್ಗೆ ಬೆಂಗಳೂರಿನಲ್ಲಿ ವಶಕ್ಕೆ ಪಡೆದಿದ್ದಾರೆ.
ಬೆಂಗಳೂರಿನಲ್ಲಿ ಸೋಮವಾರ ರಾತ್ರಿಯಿಂದ ಜಾರಿಯಾಗಿದ್ದ ಸೆಕ್ಷನ್ 144 ರ ಆದೇಶವನ್ನು ಉಲ್ಲಂಘಿಸಿ ಪ್ರತಿಭಟನಾಕಾರರು ಮುಷ್ಕರಕ್ಕೆ ಮುಂದಾಗಿದ್ದರು. ತಮಿಳುನಾಡಿಗೆ 5000 ಕ್ಯುಸೆಕ್ ನೀರು ಬಿಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯುಎಂಎ) ನೀಡಿರುವ ಆದೇಶವನ್ನು ವಿರೋಧಿಸಿ ರೈತ ಸಂಘಟನೆಗಳು ಬಂದ್‌ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಮಂಗಳವಾರ ಪೊಲೀಸರು ಸೂಕ್ತ ಬಂದೋಬಸ್ತ್ ಏರ್ಪಡಿಸಿದ್ದು, ಯಾವುದೇ ಪ್ರತಿಭಟನೆ ಅಥವಾ ಮೆರವಣಿಗೆಗೆ ಅವಕಾಶ ನೀಡುವುದಿಲ್ಲ ಎಂದು ತಿಳಿಸಿದ್ದಾರೆ.

ನಾವು ಸಾಕಷ್ಟು ಬಂದೋಬಸ್ತ್ ಮಾಡಿದ್ದೇವೆ. ಪೊಲೀಸ್ ಆಯುಕ್ತರ ಆದೇಶದಂತೆ ಯಾವುದೇ ಪ್ರತಿಭಟನೆ ಅಥವಾ ಮೆರವಣಿಗೆಗೆ ಅವಕಾಶವಿರಲ್ಲ. ಬಿಎಂಟಿಸಿ ಸಂಚಾರ ಸಾಮಾನ್ಯವಾಗಿದೆ'' ಎಂದು ಬೆಂಗಳೂರು ಉಪ ಪೊಲೀಸ್ ಆಯುಕ್ತ (ಕೇಂದ್ರ) ಶೇಖರ್ ಟಿ ತೆಕ್ಕಣ್ಣವರ್ ಎಎನ್‌ಐಗೆ ತಿಳಿಸಿದ್ದಾರೆ.
ಕಾನೂನು ಸುವ್ಯವಸ್ಥೆ ಕಾಪಾಡಲು ನಗರದ ವೈಟ್‌ಫೀಲ್ಡ್ ಮತ್ತು ಕಾಟನ್‌ಪೇಟೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದ್ದು, ಅಗತ್ಯ ಸೇವೆಗಳನ್ನು ಒದಗಿಸುವ ಅಂಗಡಿಗಳನ್ನು ಹೊರತುಪಡಿಸಿ ಎಲ್ಲಾ ಅಂಗಡಿಗಳನ್ನು ಮುಚ್ಚಲಾಗಿದೆ.
ನೆರೆಯ ರಾಜ್ಯವಾದ ತಮಿಳುನಾಡಿಗೆ 5000 ಕ್ಯೂಸೆಕ್ ನೀರು ಬಿಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (ಸಿಡಬ್ಲ್ಯುಎಂಎ) ಆದೇಶವನ್ನು ವಿರೋಧಿಸಿ ರೈತ ಸಂಘಟನೆಗಳು, ಕನ್ನಡಪರ ಸಂಘಟನೆಗಳು ಮತ್ತು ವಿರೋಧ ಪಕ್ಷಗಳು ಇಂದು ನಗರದಲ್ಲಿ ಬಂದ್‌ಗೆ ಕರೆ ನೀಡಿವೆ. ಸುಪ್ರೀಂ ಆದೇಶ 15 ದಿನಗಳವರೆಗೆ ಸೆಪ್ಟೆಂಬರ್ 13 ರಿಂದ ಜಾರಿಗೆ ಬಂದಿದೆ.
ಮೆಜೆಸ್ಟಿಕ್ ಬೆಂಗಳೂರು ಮೆಟ್ರೋಪಾಲಿಟನ್ ಟ್ರಾನ್ಸ್‌ಪೋರ್ಟ್ ಕಾರ್ಪೊರೇಷನ್ (ಬಿಎಂಟಿಸಿ) ಬಸ್ ನಿಲ್ದಾಣದ ಆಟೋ ಚಾಲಕ ನಸೀರ್ ಖಾನ್ ಅವರು, ವಿವಿಧ ಸಂಘಟನೆಗಳು ಕರೆ ನೀಡಿರುವ ಬಂದ್ ಗೆ ನಮ್ಮ ಬೆಂಬಲವಿದೆ.ಕಾವೇರಿ ನೀರಿನ ವಿಚಾರ ಬಂದಾಗ ಕರ್ನಾಟಕ ಯಾರಿಗೂ ನೀರು ಕೊಡುವುದಿಲ್ಲ ಎಂಬ ಸ್ಪಷ್ಟ ನಿಲುವನ್ನು ಹೊಂದಿದ್ದೇವೆ.ಇಂದು ಆಟೋಗಳು ಓಡುವುದಿಲ್ಲ, ಬಂದ್ ಗೆ ಬೆಂಬಲ ನೀಡುತ್ತೇವೆ ಎಂದು ತಿಳಿಸಿದ್ದಾರೆ.
ಬಸ್ ಕಂಡಕ್ಟರ್ ಮಂಜು, "ಬಂದ್‌ಗೆ ಕರೆ ನೀಡಿರುವುದರಿಂದ, ಸಾಮಾನ್ಯವಾಗಿ ರಾಜ್ಯದ ಅತ್ಯಂತ ಜನನಿಬಿಡ ಬಸ್ ನಿಲ್ದಾಣಗಳಲ್ಲಿ ಒಂದಾದ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಯಾವುದೇ ಪ್ರಯಾಣಿಕರು ಕಂಡುಬರುತ್ತಿಲ್ಲ," ಎಂದು ಹೇಳಿದ್ದಾರೆ. ಬಂದ್ ಕಾರಣದಿಂದ ಮಹಾರಾಷ್ಟ್ರದ ಪ್ರಯಾಣಿಕರೊಬ್ಬರಿಗೆ 12 ಕಿಲೋಮೀಟರ್ ಪ್ರಯಾಣಕ್ಕೆ 300-500 ರೂಪಾಯಿ ನೀಡಿದ್ದಾರೆ ಎಂದು ವರದಿಯಾಗಿದೆ.
ಕ್ಯಾಬ್‌ಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ ಮತ್ತು ನಗರದಲ್ಲಿ ರೆಸ್ಟೋರೆಂಟ್‌ಗಳು ಕೆಲವೆಡೆ ಬಾಗಿಲು ಹಾಕಿವೆ. ಪ್ರಯಾಣಿಕರಿಗೆ ಅನಾನುಕೂಲತೆಯನ್ನು ತಪ್ಪಿಸಲು ಏರ್‌ಲೈನ್ ವಿಸ್ತಾರಾ ಮಂಗಳವಾರ ಅಪಡೇಟ್ ಬಿಡುಗಡೆ ಮಾಡಿದ್ದು, ಖಾಸಗಿ ಸಾರಿಗೆಗೆ ಅಡ್ಡಿಯಾಗಬಹುದು ಎಂಬ ಕಾರಣದಿಂದ ವಿಮಾನ ನಿಲ್ದಾಣಕ್ಕೆ ಮತ್ತು ಹೊರಗೆ ತಮ್ಮ ಸವಾರಿಯನ್ನು ಯೋಜಿಸಿಕೊಳ್ಳಲು ಜನರಿಗೆ ತಿಳಿಸಿದೆ.
ಸೆಪ್ಟೆಂಬರ್ 26, 2023 ರಂದು 'ಬೆಂಗಳೂರು ಬಂದ್' ಕಾರಣ, ಖಾಸಗಿ ಸಾರಿಗೆಯಲ್ಲಿ ಅಡಚಣೆ ಉಂಟಾಗಬಹುದು. ಬೆಂಗಳೂರಿನಿಂದ ಪ್ರಯಾಣಿಸುವ ಗ್ರಾಹಕರು ತಮ್ಮ ಪ್ರಯಾಣಕ್ಕಾಗಿ ವಿಮಾನ ನಿಲ್ದಾಣಕ್ಕೆ ಹೆಚ್ಚಿನ ಸಮಯವನ್ನು ಅನುಮತಿಸುವಂತೆ ಸೂಚಿಸಲಾಗಿದೆ" ಎಂದು ವಿಮಾನಯಾನ ಸಂಸ್ಥೆ 'ಎಕ್ಸ್' ನಲ್ಲಿ ಪೋಸ್ಟ್‌ನಲ್ಲಿ ತಿಳಿಸಿದೆ.












Click it and Unblock the Notifications