Bengaluru Bandh; 5 ನಿಮಿಷಕ್ಕೊಂದು ಮೆಟ್ರೋ ರೈಲು
ಬೆಂಗಳೂರು, ಸೆಪ್ಟೆಂಬರ್ 11; ಸೋಮವಾರ ಖಾಸಗಿ ಸಾರಿಗೆ ಸಂಸ್ಥೆಗಳ ಒಕ್ಕೂಟ ಬೆಂಗಳೂರು ನಗರ ಬಂದ್‌ಗೆ ಕರೆ ನೀಡಿದೆ. ಖಾಸಗಿ ವಾಹನಗಳ ಸಂಚಾರ ಸಂಪೂರ್ಣ ಬಂದ್ ಆಗುವ ನಿರೀಕ್ಷೆ ಇದ್ದು, ನಮ್ಮ ಮೆಟ್ರೋ ರೈಲಿನಲ್ಲಿ ಪ್ರಯಾಣಿಕರ ದಟ್ಟಣೆ ಉಂಟಾಗಲಿದೆ. ಬಿಎಂಟಿಸಿ ಸಹ ಹೆಚ್ಚುವರಿ ಬಸ್‌ಗಳನ್ನು ಓಡಿಸುತ್ತಿದ್ದು, ಬಂದ್‌ನಿಂದ ಪ್ರಯಾಣಿಕರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳುತ್ತಿದೆ.
ಆಟೋ, ಟ್ಯಾಕ್ಸಿ ಸೇರಿದಂತೆ ಖಾಸಗಿ ವಾಹನಗಳ ಬಂದ್ ಹಿನ್ನಲೆಯಲ್ಲಿ ಬಿಎಂಆರ್‌ಸಿಎಲ್ ನಮ್ಮ ಮೆಟ್ರೋ ರೈಲುಗಳ ಸಂಚಾರದಲ್ಲಿ ಬದಲಾವಣೆ ಮಾಡಿದೆ. ಮುಂಜಾನೆ ಉಂಟಾಗುವ ದಟ್ಟಣೆ ಕಡಿಮೆ ಮಾಡಲು ಪೀಕರ್ ಅವರ್‌ನಲ್ಲಿ ಪ್ರತಿ 5 ನಿಮಿಷಕ್ಕೊಂದು ರೈಲುಗಳನ್ನು ಓಡಿಸಲಿದೆ.

ಬೆಳಗ್ಗೆ 8 ರಿಂದ 11.30ರ ಪೀಕ್ ಅವರ್‌ನಲ್ಲಿ ಪ್ರತಿ 5 ನಿಮಿಷಕ್ಕೆ ಒಂದು ನಮ್ಮ ಮೆಟ್ರೋ ರೈಲು ಓಡಿಸಲಾಗುತ್ತದೆ ಎಂದು ಬಿಎಂಆರ್‌ಸಿಎಲ್ ಹೇಳಿದೆ. ಅಲ್ಲದೇ ಸಂಜೆಯ ಪೀಕ್ ಅವರ್ ಅನ್ನು ಸಹ 5 ರಿಂದ 8 ಗಂಟೆಯ ತನಕ ವಿಸ್ತರಣೆ ಮಾಡಲಾಗಿದೆ ಎಂದು ತಿಳಿಸಿದೆ.
ಪೀಕ್ ಅವರ್ ಅಲ್ಲದ ಸಮಯಗಳಲ್ಲಿ ನಮ್ಮ ಮೆಟ್ರೋ ರೈಲುಗಳು 10 ನಿಮಿಷದ ಬದಲಾಗಿ 6 ರಿಂದ 8 ನಿಮಿಷದಲ್ಲಿ ಸಂಚಾರ ನಡೆಸಲಿವೆ ಎಂದು ಬಿಎಂಆರ್‌ಸಿಎಲ್ ಹೇಳಿದೆ. ನಮ್ಮ ಮೆಟ್ರೋ, ಬಿಎಂಟಿಸಿ ಬಸ್‌ಗಳ ಸಂಚಾರ ಎಂದಿನಂತೆ ಇರುವುದರಿಂದ ಜನರ ಸಂಚಾರಕ್ಕೆ ಹೆಚ್ಚು ತೊಂದರೆ ಉಂಟಾಗುವ ಸಾಧ್ಯತೆ ಕಡಿಮೆ ಇದೆ.
ಎಂದಿನಂತೆ ಖಾಸಗಿ ವಾಹನಗಳ ಸಂಚಾರ; ಖಾಸಗಿ ಸಾರಿಗೆ ಸಂಸ್ಥೆಗಳ ಒಕ್ಕೂಟ ಕರೆ ನೀಡಿರುವ ಬಂದ್‌ಗೆ ಸುಮಾರು 72 ಸಂಘಟನೆಗಳು ಬೆಂಬಲ ಘೋಷಣೆ ಮಾಡಿವೆ. ಆದರೆ ಮುಂಜಾನೆ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹೆಬ್ಬಾಳದಲ್ಲಿ ಆಟೋ, ಟ್ಯಾಕ್ಸಿಗಳು ಸಂಚಾರ ನಡೆಸುತ್ತಿವೆ.
ಕೆ. ಆರ್. ಮಾರುಕಟ್ಟೆಯಲ್ಲಿ ಆಟೋಗಳು ಸಂಚಾರ ನಡೆಸುತ್ತಿವೆ, ಕೆಲವು ಖಾಸಗಿ ಬಸ್‌ಗಳು ಸಹ ಸಂಚಾರ ನಡೆಸುತ್ತಿವೆ. ವಿಮಾನ ನಿಲ್ದಾಣಕ್ಕೆ ಸಂಚಾರ ನಡೆಸುವ ಟ್ಯಾಕ್ಸಿಯೊಂದಕ್ಕೆ ಕಲ್ಲು ತೂರಾಟ ನಡೆಸಿರುವ ಘಟನೆ ನಡೆದಿದೆ.
ಖಾಸಗಿ ಸಾರಿಗೆ ಸಂಸ್ಥೆಗಳ ಒಕ್ಕೂಟ ಭಾನುವಾರ ಮಧ್ಯರಾತ್ರಿ 12 ರಿಂದ ಸೋಮವಾರ ರಾತ್ರಿ 12ರ ತನಕ ವಾಹನಗಳ ಸಂಚಾರ ಬಂದ್ ಮಾಡಿ ಪ್ರತಿಭಟನೆ ನಡೆಸುತ್ತೇವೆ ಎಂದು ಹೇಳಿದೆ. ಹಲವು ಸಂಘಟನೆಗಳು ನೈತಿಕ ಬೆಂಬಲ ನೀಡಿದ್ದು, ವಾಹನಗಳ ಸಂಚಾರ ಸ್ಥಗಿತಗೊಳಿಸಿಲ್ಲ.
ಮೆಜೆಸ್ಟಿಕ್ ಸೇರಿದಂತೆ ನಗರ ಪ್ರಮುಖ ಬಸ್ ನಿಲ್ದಾಣಗಳಲ್ಲಿ ಜನರ ಸಂಚಾರ ಎಂದಿನಂತೆ ಇದೆ. ಬಂದ್‌ನಿಂದ ಯಾವುದೇ ಬದಲಾವಣೆ ಆಗಿಲ್ಲ. ಮೈಸೂರು ರಸ್ತೆಯ ಸ್ಯಾಟಲೈಟ್ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಸಂಖ್ಯೆ ಸದ್ಯಕ್ಕೆ ಕಡಿಮೆ ಇದೆ.
'ಶಕ್ತಿ ಯೋಜನೆ' ಜಾರಿಗೆ ಬಂದ ಬಳಿಕ ಖಾಸಗಿ ವಾಹನಗಳ ಮಾಲೀಕರಿಗೆ ನಷ್ಟವಾಗುತ್ತಿದೆ. ಆಟೋ, ಟ್ಯಾಕ್ಸಿಗಳ ಚಾಲಕರಿಗೆ ಸಂಕಷ್ಟ ಎದುರಾಗಿದೆ ಸರ್ಕಾರ ಸಮಸ್ಯೆ ಬಗೆಹರಿಸಬೇಕು ಎಂಬುದು ಪ್ರಮುಖ ಬೇಡಿಕೆ. ಖಾಸಗಿ ಸಾರಿಗೆ ಸಂಸ್ಥೆಗಳ ಒಕ್ಕೂಟ ಈ ಕುರಿತು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆಗೆ ಸಭೆ ನಡೆಸಿದೆ. ಆದರೆ ಸರ್ಕಾರ ಸಮಸ್ಯೆ ಬಗೆಹರಿಸಿಲ್ಲ ಎಂಬುದು ಆರೋಪವಾಗಿದೆ.
ಬೇಡಿಕೆಗಳು ಏನು?
* ಚಾಲಕರಿಗೆ ಮಾಸಿಕ 10 ಸಾವಿರ ರೂ. ಪರಿಹಾರ ಧನ ನೀಡಬೇಕು
* ಬೈಕ್ ಟ್ಯಾಕ್ಸಿ ಸೇವೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಬೇಕು
* ಅಸಂಘಟಿತ ವಾಣಿಜ್ಯ ಚಾಲಕರ ಮತ್ತು ಸಾರಿಗೆ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಬೇಕು
* ವೈಟ್ ಬೋರ್ಡ್ ವಾಹನಗಳಲ್ಲಿ ಬಾಡಿಗೆ ಓಡಿಸುವುದು ಸ್ಥಗಿತಗೊಳಿಸಬೇಕು
* ಚಾಲಕರ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಬೇಕು
* ಓಲಾ, ಊಬರ್ ಸೇರಿದಂತೆ ಅಪ್ಲಿಕೇಶನ್ ಆಧಾರಿತ ಸೇವೆಗಳನ್ನು ಬಂದ್ ಮಾಡಬೇಕು
* ಖಾಸಗಿ ವಾಹನಗಳನ್ನು ಸರ್ಕಾರ ಕಿ. ಮೀ. ಆಧಾರದಲ್ಲಿ ಬಾಡಿಗೆ ಪಡೆಯಬೇಕು
* ನಿಯಮ ಬಾಹಿರವಾಗಿ ಖಾಸಗಿ ವಾಹನ ವಶಕ್ಕೆ ಪಡೆಯುವ ಫೈನಾನ್ಸ್‌ಗಳ ವಿರುದ್ಧ ಕ್ರಮ ಕೈಗೊಳ್ಳಬೇಕು.
-
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
RCB: ಆರ್ಸಿಬಿಯಲ್ಲಿ ಜೋಶ್ ಹ್ಯಾಜಲ್ವುಡ್ ಸ್ಥಾನ ತುಂಬುವ ಆಟಗಾರ ಇವರೇ ನೋಡಿ -
ಶೆಲ್ ಬಂಕ್ನಲ್ಲಿ ಪೆಟ್ರೋಲ್ ದರ ಏರಿಕೆ: ಬೆಂಗಳೂರಿನಲ್ಲಿ 10 ದಿನಗಳಲ್ಲಿ 4.50 ರೂಪಾಯಿ ಹೆಚ್ಚಳ; ಇಲ್ಲಿದೆ ದರಪಟ್ಟಿ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು












Click it and Unblock the Notifications