Bengaluru Bandh; ವಾಹನ ಸವಾರರಿಗೆ ಪೊಲೀಸರ ಸಲಹೆಗಳು

ಬೆಂಗಳೂರು, ಸೆಪ್ಟೆಂಬರ್ 11; ಖಾಸಗಿ ಸಾರಿಗೆ ಸಂಸ್ಥೆಗಳ ಒಕ್ಕೂಟ ಸೋಮವಾರ ಬೆಂಗಳೂರು ನಗರ ಬಂದ್‌ಗೆ ಕರೆ ನೀಡಿದೆ. ಖಾಸಗಿ ವಾಹನಗಳ ಸಂಚಾರ ಸಂಪೂರ್ಣ ಬಂದ್ ಆಗುವ ಸಾಧ್ಯತೆ ಇದೆ. ಬೆಂಗಳೂರು ನಗರ ಸಂಚಾರಿ ಪೊಲೀಸರು ವಾಹನ ಸಂಚಾರ ಮಾರ್ಗದಲ್ಲಿ ಕೆಲವು ಬದಲಾವಣೆ ಮಾಡಿದ್ದಾರೆ.

ಈ ಕುರಿತು ಪ್ರಕಟಣೆ ಮೂಲಕ ಸಂಚಾರಿ ಪೊಲೀಸರು ಮಾಹಿತಿ ನೀಡಿದ್ದಾರೆ. 11/9/2023ರಂದು ಕರ್ನಾಟಕ ರಾಜ್ಯ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟದ ವತಿಯಿಂದ ಮುಂಜಾನೆಯಿಂದ ರಾತ್ರಿ ವರೆಗೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಬೆಂಗಳೂರು ಬಂದ್‌ಗೆ ಕರೆನೀಡಿದ್ದು ವಾಹನ ಸವಾರರು ಈ ಬದಲಿ ರಸ್ತೆಗಳನ್ನು ಬಳಸುವುದು ಎಂದು ಹೇಳಿದ್ದಾರೆ.

Bengaluru Bandh Traffic Advisory By The Police

ಪರ್ಯಾಯ ಮಾರ್ಗಗಳು

* ಖೋಡೆ ಸರ್ಕಲ್‌ಗೆ ಬರುವ ವಾಹನಗಳು ಆರ್. ಆರ್. ಜಂಕ್ಷನ್ ಮೂಲಕ ಮಲ್ಲೇಶ್ವರಂ ಕಡೆಗೆ ಹೋಗುವುದು.

* ಗೂಡ್ ಶೆಡ್ ರಸ್ತೆ ಕಡೆಯಿಂದ ಬರುವ ವಾಹನಗಳು ಜಿ. ಟಿ. ರಸ್ತೆ ಮುಖಾಂತರ ಸಂಗೊಳ್ಳಿ ರಾಯಣ್ಣ ಸರ್ಕಲ್-ಓಕಳಿಪುರಂ ಸುಜಾತ ಮೂಲಕ ಮುಂದೆ ಹೋಗುವುದು.

* ಆನಂದರಾವ್ ಸರ್ಕಲ್ ಕಡೆಯಿಂದ ಬರುವ ವಾಹನಗಳು ಹಳೇ ಜೆಡಿಎಸ್ ಕಛೇರಿ ರಸ್ತೆ ಹಾಗೂ ಶೇಷಾದ್ರಿಪುರಂ ರಸ್ತೆ ಕಡೆಗೆ ಹೋಗುವುದು.

* ಮೈಸೂರು ಬ್ಯಾಂಕಿನಿಂದ ಬರುವ ವಾಹನಗಳು ಪ್ಯಾಲೇಸ್ ರಸ್ತೆ-ಮಹಾರಾಣಿ ಅಂಡರ್‌ಪಾಸ್- ಬಸವೇಶ್ವರ ಸರ್ಕಲ್ ಮುಖಾಂತರ ಸಂಚರಿಸುವುದು.

ಬಿಎಂಟಿಸಿಯಿಂದ ಹೆಚ್ಚುವರಿ ಬಸ್; ಖಾಸಗಿ ಸಾರಿಗೆ ಸಂಸ್ಥೆಗಳ ಒಕ್ಕೂಟ ಬಂದ್ ಕರೆ ನೀಡಿರುವ ಹಿನ್ನಲೆಯಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಹೆಚ್ಚುವರಿ ಬಸ್‌ಗಳನ್ನು ಓಡಿಸಲಿದೆ.

ಬೆಂಗಳೂರು ನಗರ ಹಾಗೂ ಹೊರವಲಯದ ಪ್ರಯಾಣಿಕರ ಅನುಕೂಲಕ್ಕಾಗಿ ಪ್ರತಿದಿನ 5601ಅನುಸೂಚಿಗಳಿಂದ 57450 ಸುತ್ತುವಳಿಗಳನ್ನು ಕಾರ್ಯಾಚರಣೆಗೊಳಿಸುತ್ತಿದ್ದು, ಭಾನುವಾರ ಮಧ್ಯರಾತ್ರಿಯಿಂದ ಸೋಮವಾರ ಮಧ್ಯರಾತ್ರಿಯವರೆಗೆ ಆಟೋ, ಟ್ಯಾಕ್ಸಿ ಮತ್ತು ವಾಹನಗಳ ಚಾಲಕರ ಒಕ್ಕೂಟವು ತಮ್ಮ ವಿವಿಧ ಬೇಡಿಕಗಳ ಈಡೇರಿಕೆಗಾಗಿ ಬಂದ್ ಕರೆ ಕೊಟ್ಟಿರುವ ಹಿನ್ನೆಲೆಯಲ್ಲಿ ಹೆಚ್ಚುವರಿ ಬಸ್‌ಗಳು ಸಂಚಾರ ನಡೆಸಲಿವೆ ಎಂದು ಸಂಸ್ಥೆ ಹೇಳಿದೆ.

ಬೆಂಗಳೂರು ನಗರದ ಶಾಲಾ/ ಕಾಲೇಜು ಮಕ್ಕಳು ಹಾಗೂ ಜನ ಸಾಮಾನ್ಯರಿಗೆ ತೊಂದರೆಯಾಗದಂತೆ ನಗರದ ಪ್ರಮುಖ ಬಸ್ ನಿಲ್ದಾಣಗಳಾದ ಕೆಂಪೇಗೌಡ ಬಸ್ ನಿಲ್ದಾಣ, ಕೃ. ರಾ. ಮಾರುಕಟ್ಟೆ ಹಾಗೂ ಶಿವಾಜಿನಗರ ಬಸ್ ನಿಲ್ದಾಣಗಳಿಂದ ಕಾಡುಗೋಡಿ, ಸರ್ಜಾಪುರ, ಅತ್ತಿಬೆಲೆ, ಆನೇಕಲ್, ಬನ್ನೇರುಘಟ್ಟ/ ಜಿಗಣಿ, ಹಾರೋಹಳ್ಳಿ, ಬಿಡದಿ, ತಾವರೆಕೆರೆ, ನೆಲಮಂಗಲ, ಹೆಸರಘಟ್ಟ ದೊಡ್ಡಬಳಾಪುರ, ದೇವನಹಳ್ಳಿ, ಬಾಗಲೂರು, ಚನ್ನಸಂದ್ರ, ಹೊಸಕೋಟೆಗೆ ಹಾಗೂ ಹೊರ ವರ್ತುಲ/ ಒಳ ವರ್ತುಲ ರಸ್ತೆಗಳಲ್ಲಿ ಮತ್ತು ನಗರದ ಪ್ರಮುಖ ಸ್ಥಳಗಳನ್ನು ಸಂಪರ್ಕಿಸುವ ಮಾರ್ಗಗಳಲ್ಲಿ ಪ್ರಯಾಣಿಕರ ಬೇಡಿಕೆಗೆ ಅನುಗುಣವಾಗಿ 500 ಅನುಸೂಚಿಗಳಿಂದ ಸುಮಾರು 4000 ಹೆಚ್ಚುವರಿ ಸುತ್ತುವಳಿಗಳನ್ನು ಕಾರ್ಯಾಚರಿಸಲು ಯೋಜಿಸಲಾಗಿದೆ.

ನಗರದ ಪ್ರಮುಖ ರಸ್ತೆ, ಬಸ್ ನಿಲ್ದಾಣ ಹಾಗೂ ಜಂಕ್ಷನ್‌ಗಳಲ್ಲಿ ಸಂಸ್ಥೆಯ ಅಧಿಕಾರಿ/ ಸಿಬ್ಬಂದಿಗಳನ್ನು ಹಾಗೂ ಸಾರಥಿ ಗಸ್ತು ಪಡೆಗಳನ್ನು ನಿಯೋಜಿಸಿ, ಸಂಸ್ಥೆಯ ಸಾರಿಗೆಗಳ ಮೇಲ್ವಿಚಾರಣೆ ಮಾಡಿಸಲಾಗುತ್ತಿದೆ. ಅಲ್ಲದೇ ಪ್ರಯಾಣಿಕರ ಅಧಿಕ ದಟ್ಟಣೆ ಕಂಡುಬಂದ ಮಾರ್ಗಗಳಲ್ಲಿ ಹೆಚ್ಚುವರಿ ಸಾರಿಗೆಗಳ ಕಾರ್ಯಾಚರಣೆಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಬಿಎಂಟಿಸಿ ಹೇಳಿದೆ.

ಬೆಂಗಳೂರು ಬಂದ್ ಹಿನ್ನಲೆಯಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಿಲ್ಲ. ಆದರೆ ನಗರದ ಕೆಲವು ಖಾಸಗಿ ಶಾಲೆಗಳು ರಜೆ ಘೋಷಣೆ ಮಾಡಿದ್ದು, ವಾಟ್ಸಪ್ ಮೂಲಕ ಈ ಕುರಿತು ಪೋಷಕರಿಗೆ ಮಾಹಿತಿ ನೀಡಿವೆ. ಪರಿಸ್ಥಿತಿ ನೋಡಿಕೊಂಡು ರಜೆಯನ್ನು ನೀಡುವ ಅಧಿಕಾರ ಶಾಲೆಗಳ ಆಡಳಿತ ಮಂಡಳಿಗಳಿಗೆ ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+