Kadalekai Parishe 2025: ಬಸವನಗುಡಿ ಕಡಲೆಕಾಯಿ ಪರಿಷೆ ಈ ಬಾರಿ ಎಷ್ಟು ದಿನ ನಡೆಯುತ್ತೆ?
ಕಾರ್ತಿಕ ಮಾಸದ ಕೊನೆಯ ಸೋಮವಾರದ ಪ್ರಯುಕ್ತ ಬೆಂಗಳೂರಿನ ಬಸವನಗುಡಿಯಲ್ಲಿ ಇಂದಿನಿಂದ ಐತಿಹಾಸಿ ಕಡಲೆಕಾಯಿ ಪರಿಷೆ ಆರಂಭವಾಗಿದೆ. ಇಲ್ಲಿನ ಬಸವನಗುಡಿಯ ದೊಡ್ಡ ಬಸವಣ್ಣನ ದೇಗುಲದಲ್ಲಿ ವಿಶೇಷ ಅಭಿಷೇಕದೊಂದಿಗೆ ಕಡಲೆಕಾಯಿ ಪರಿಷೆಗೆ ಚಾಲನೆ ಸಿಕ್ಕಿದೆ. ಹೆಸರೇ ಹೇಳುವಂತೆ ಇಲ್ಲಿ ಕಡಲೆಕಾಯಿ ಕೇಂದ್ರಬಿಂದುವಾಗಿದೆ. ಪರಿಷೆಯಲ್ಲಿ ಎತ್ತ ಕಣ್ಣುಹಾಯಿಸಿದರೂ ಬಗೆಬಗೆಯ ಕಡಲೆಕಾಯಿಗಳನ್ನು ರಾಶಿ ಹಾಕಲಾಗಿದೆ. ಈ ಬಾರಿ ಎಷ್ಟು ದಿನ ಪರಿಷೆ ನಡೆಯಲಿದೆ? ಹಾಗೂ ಏನೆಲ್ಲ ವಿಶೇಷತೆ ಇರಲಿದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ ನೋಡಿ.
ಬಸವನಗುಡಿ ಕಡಲೆಕಾಯಿ ಪರಿಷೆಯು ಐತಿಹಾಸಿಕ ಹಿನ್ನೆಲೆ ಹೊಂದಿದೆ. ಪ್ರತಿ ವರ್ಷವೂ ಕಾರ್ತಿಕ ಮಾಸದ ಕೊನೆಯ ಸೋಮವಾರದಂದು ಪರಿಷೆ ಶುರುವಾಗುತ್ತದೆ. ಈ ಬಾರಿ ಐದು ದಿನಗಳ ಕಾಲ ಕಡಲೆಕಾಯಿ ಪರಿಷೆ ನಡೆಯಲಿದೆ. ಈ ಬಾರಿಯ ವಿಶೇಷವೆಂದರೆ ಪರಿಷೆ ಪ್ಲಾಸ್ಟಿಕ್ ಮುಕ್ತವಾಗಿರಲಿದ್ದು, ಲಕ್ಷಾಂತರ ಪ್ರವಾಸಿಗರು ಆಗಮಿಸಲಿದ್ದಾರೆ. ಕರ್ನಾಟಕ ಮಾತ್ರವಲ್ಲದೆ ನೆರೆ ರಾಜ್ಯಗಳಿಂದಲೂ ವ್ಯಾಪಾರಿಗಳು ಕೂಡ ಇಲ್ಲಿಗೆ ಕಡಲೆಕಾಯಿ ಮಾರಾಟಕ್ಕೆ ಆಗಮಿಸಿದ್ದು, ರೈತರಿಗೂ ಲಾಭದ ನಿರೀಕ್ಷೆಯಲ್ಲಿದೆ.

ಈಗಾಗಲೇ ಪರಿಷೆಗಾಗಿ ಬಸವನಗುಡಿಯ ಬೀದಿಗಳನ್ನು ಅಲಂಕಾರ ಮಾಡಲಾಗಿದೆ. ರಸ್ತೆಯ ಎರಡೂ ಬದಿ ಕಡಲೆಕಾಯಿ ರಾಶಿ ಹಾಕಿಕೊಂಡು ಭರ್ಜರಿ ಮಾರಾಟ ನಡೆಯುತ್ತಿದೆ. ಲಕ್ಷಾಂತರ ಜನ ಈ ಪರಿಷೆಗೆ ಸೇರುತ್ತಿರುವ ಕಾರಣ ಪ್ರತಿ ವರ್ಷವೂ ಕೇವಲ ಎರಡು ದಿನಕ್ಕೆ ಮಾತ್ರವೇ ಪರಿಷೆಯನ್ನು ಸೀಮಿತಗೊಳಿಸಲಾಗಿತ್ತು. ಆದರೆ ಇದೇ ಮೊದಲ ಬಾರಿಗೆ ಕಡಲೆಕಾಯಿ ಪರಿಷೆಯನ್ನು ಐದು ದಿನಗಳ ಕಾಲ ನಡೆಸಲು ನಿರ್ಧರಿಸಲಾಗಿದೆ. ವ್ಯಾಪಾರಿಗಳು ಸಂತಸದಿಂದ ಕಡಲೆಕಾಯಿ ರಾಶಿ ಹಾಕ್ಕೊಂಡು ಕುಳಿತಿದ್ದಾರೆ.
ಈ ಬಾರಿಯೂ ಬಸವನಗುಡಿಯ ದೊಡ್ಡ ಬಸವಣ್ಣ ಹಾಗೂ ದೊಡ್ಡಗಣಪತಿ ದೇವಾಲಯಗಳಿಗೆ ವಿಶೇಷ ಹೂವಿನ ಅಲಂಕಾರ ಹಾಗೂ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದೆ. ಬೆಂಗಳೂರು ಮಂದಿ ಹೆಚ್ಚಾಗಿ ಈ ಪರಿಷೆಗೆ ಕುಟುಂಬ ಸಮೇತರಾಗಿ ಬರುತ್ತಾರೆ. ಅಲ್ಲದೆ ಅಕ್ಕಪಕ್ಕದ ಜಿಲ್ಲೆಗಳು, ನೆರೆಯ ತಮಿಳುನಾಡು, ಆಂಧ್ರ ಪ್ರದೇಶಗಳ ರೈತರು ಕೂಡ ತಾವು ಬೆಳೆದ ಕಡಲೆಕಾಯಿ ಮಾರಾಟ ಮಾಡಲು ಪ್ರತಿ ವರ್ಷ ಇಲ್ಲಿಗೆ ಬರುತ್ತಾರೆ.

ಏನೆಲ್ಲ ಕಾರ್ಯಕ್ರಮಗಳು ಇರಲಿವೆ?
ಕಡಲೆಕಾಯಿ ಪರಿಷೆಯ ಅಂಗವಾಗಿ ಈ ಬಾರಿ ಕೆಂಪಾಂಬುಧಿ ಕೆರೆಯಲ್ಲಿ ನ.17ರಂದು ಸಂಜೆ 6 ಗಂಟೆಗೆ ತೆಪ್ಪೋತ್ಸವ ನಡೆಯಲಿದೆ. ಇದಲ್ಲದೆ ಸಂಗೀತ, ನೃತ್ಯ ಕಾರ್ಯಕ್ರಮಗಳೂ ಇರಲಿವೆ. ಬ್ಯೂಗಲ್ ರಾಕ್ ಪಾರ್ಕ್‌ನಲ್ಲಿ ಮೂರು ದಿನಗಳ ಕಾಲ ಸಂಜೆ 6ರಿಂದ ಸಂಗೀತ ಸಂಜೆ, ಹಾಸ್ಯ ಸಂಜೆ ಹಾಗೂ ಭರತನಾಟ್ಯ ಪ್ರದರ್ಶನಗಳು ಕೂಡ ಆಯೋಜಿಸಲಾಗಿದೆ. ನವೆಂಬರ್ 17ರಿಂದ ನವೆಂಬರ್ 21ರವರೆಗೆ ಪರಿಷೆ ನಡೆಯಲಿದೆ. ಈವರೆಗೆ ಎರಡು ಅಥವಾ ಮೂರು ದಿನಗಳವರೆಗೆ ಮಾತ್ರ ಪರಿಷೆಗೆ ಅವಕಾಶ ನೀಡಲಾಗುತ್ತಿತ್ತು. ಆದರೆ ಈ ಬಾರಿ ಐದು ದಿನಗಳ ಕಾಲ ನಡೆಯಲಿದೆ.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications