ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಿನ ಕೃತಿ ಕಾರಂತ್ ಮುಡಿಗೆ ರೋಲೆಕ್ಸ್ ಪ್ರಶಸ್ತಿಯ ಗೌರವ

|
Google Oneindia Kannada News

ಬೆಂಗಳೂರು, ಜೂನ್ 15: ಯಾವುದೇ ಕ್ಷೇತ್ರದಲ್ಲಿ ಅಸಾಮಾನ್ಯ ಸಾಧನೆ ಮೆರೆದ ಸಾಧಕರಿಗೆ ಕೊಡಮಾಡುವ ರೋಲೆಕ್ಸ್ ಪ್ರಶಸ್ತಿಯನ್ನು ಬೆಂಗಳೂರಿನ ವನ್ಯಜೀವಿ ತಜ್ಞೆ ಕೃತಿ ಕಾರಂತ್ ಪಡೆದಿದ್ದಾರೆ.

ವೈಲ್ಡ್ ಸೇವೆ ಮತ್ತು ವೈಲ್ಡ್ ಶಾಲೆ ಎಂಬ ಯೋಜನೆಗಳ ಮೂಲಕ ವನ್ಯ ಬದುಕಿನ ಬಗ್ಗೆ ಅರಿವು ಮೂಡಿಸುವ ಮತ್ತು ಮತ್ತು ಚಿಕ್ಕ ಮಕ್ಕಳಲ್ಲೂ ವನ್ಯ ಪ್ರಾಣಿ, ಕಾಡುಗಳ ಬಗ್ಗೆ ಪ್ರೀತಿ ಬೆಳೆಸುವ ಕಾರ್ಯವನ್ನು ಮಾಡಿದ ಕಾರಣಕ್ಕೆ ಅವರಿಗೆ ಈ ಪ್ರಶಸ್ತಿ ಲಭಿಸಿದೆ.

ರೋಲೆಕ್ಸ್ ಪ್ರಶಸ್ತಿಯ ಹಾದಿಯಲ್ಲಿ ವನ್ಯಜೀವಿ ತಜ್ಞೆ ಕೃತಿ ಕಾರಂತ್ ರೋಲೆಕ್ಸ್ ಪ್ರಶಸ್ತಿಯ ಹಾದಿಯಲ್ಲಿ ವನ್ಯಜೀವಿ ತಜ್ಞೆ ಕೃತಿ ಕಾರಂತ್

ಈ ಕುರಿತು ಫೇಸ್ಬುಕ್ ನಲ್ಲಿ ತಮ್ಮ ಸಂತಸವನ್ನು ವ್ಯಕ್ತಪಡಿಸಿರುವ ಕೃತಿ, ಇದು ನಿಜಕ್ಕೂ ನನಗೆ ಸಿಕ್ಕ ಗೌರವ, ಈ ಪ್ರಶಸ್ತಿ ಲಭಿಸಲು ಕಾರಣರಾದ ಎಲ್ಲರಿಗೂ ನನ್ನ ಧನ್ಯವಾದಗಳು ಎಂದಿದ್ದಾರೆ.

Bengaluru based, Krithi Karnath wins Rolex Award for enterprises

ಬೆಂಗಳೂರು ಮೂಲದ ಸೆಂಟರ್ ಫಾರ್ ವೈಲ್ಡ್ ಲೈಫ್ ಸ್ಟಡೀಸ್ ಎಂಬ ನಾನ್ ಪ್ರಾಫಿಟ್ ಆರ್ಗನೈಸೇಶನ್ ಸಂಸ್ಥೆಯ ಮುಖ್ಯ ಸಂರಕ್ಷಣಾ ವಿಜ್ಞಾನಿ ಮತ್ತು ನಿರ್ದೇಶಕಿಯಾಗಿರುವ ಕೃತಿ ಕಾರಂತ್ ಅವರು ವನ್ಯಜಗತ್ತಿನ ಬಗೆಗಿನ ತಮ್ಮ ಅವಿರತ ಕೆಲಸಕ್ಕಾಗಿ ಪ್ರತಿಷ್ಠಿತ ರೋಲೆಕ್ಸ್ ಪ್ರಶಸ್ತಿಗಾಗಿ ಆಯ್ಕೆಯಾದ ಹತ್ತು ಫೈನಲಿಸ್ಟ್ ಗಳಲ್ಲಿ ಒಬ್ಬರಾಗಿದ್ದರು.

ವನ್ಯಜೀವನದ ಬಗ್ಗೆ ಜಗತ್ತಿನ ಗಮನ ಸೆಳೆದ ಬೆಂಗಳೂರಿನ 'ಕೃತಿ ಕಾರಂತ್'ವನ್ಯಜೀವನದ ಬಗ್ಗೆ ಜಗತ್ತಿನ ಗಮನ ಸೆಳೆದ ಬೆಂಗಳೂರಿನ 'ಕೃತಿ ಕಾರಂತ್'

ಅಂದಹಾಗೆ, ಕೃತಿ ಅವರು ಕನ್ನಡದ ಪ್ರಸಿದ್ಧ ಸಾಹಿತಿ, ಜ್ಞಾನಪೀಠ ಪ್ರಶಸ್ತಿ ವಿಜೇತ, ಕಡಲತೀರದ ಭಾರ್ಗವ ಶಿವರಾಮ ಕಾರಂತರ ಮೊಮ್ಮಗಳು. ಮತ್ತು ವನ್ಯಜೀವಿ ತಜ್ಞ, ಸಾಹಿತಿ ಉಲ್ಲಾಸ್ ಕಾರಂತ್ ಅವರ ಪುತ್ರಿ.

ಅಮೆರಿಕದ ವಾಷಿಂಗ್ಟನ್ ಡಿಸಿಯಲ್ಲಿ ಶುಕ್ರವಾರ ನಡೆದ ಸಮಾರಂಭದಲ್ಲಿ ರೋಲೆಕ್ಸ್ ವಿಜೇತರ ಹೆಸರನ್ನು ಘೋಷಿಸಲಾಯಿತು.

English summary
Krithi Karanth is a conservation biologist based in Bengaluru, India. She has been chosen for 2019 Rolex Award for enterprises. Congratulations to her.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X