ಬಿಬಿಎಂಪಿ ಸುತ್ತಾ ಬಜೆಟ್, ಸೂಪರ್ ಸೀಡ್ ಮಾತುಕತೆ

ಬೆಂಗಳೂರು, ಮಾ. 16 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಈ ಆಡಳಿತ ಅವಧಿಯ ಕೊನೆಯ ಬಜೆಟ್ ಮಂಗಳವಾರ ಮಂಡನೆಯಾಗುತ್ತಿದೆ. ಅತ್ತ ಸರ್ಕಾರದ ಮಟ್ಟದಲ್ಲಿ ಬಿಬಿಎಂಪಿಯನ್ನು ಸೂಪರ್ ಸೀಡ್ ಮಾಡುವ ಮಾತುಕತೆ ನಡೆಯುತ್ತಿದ್ದು, ಈ ಬಗ್ಗೆ ಅಂತಿಮ ನಿರ್ಧಾರ ಹೊರಬಿದ್ದಿಲ್ಲ.

ಬಿಜೆಪಿ ಆಡಳಿತದಲ್ಲಿರುವ ಬಿಬಿಎಂಪಿಯ ಐದು ವರ್ಷಗಳ ಅವಧಿಯಲ್ಲಿ ಮಂಡನೆಯಾಗುತ್ತಿರುವ ಆರನೇ ಬಜೆಟ್ ಇದಾಗಿದೆ. ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಅಧ್ಯಕ್ಷ ಆನಂದ್ ಮಾರ್ಚ್ 17ರ ಮಂಗಳವಾರ ಬಜೆಟ್ ಮಂಡನೆ ಮಾಡಲಿದ್ದಾರೆ. ಬಿಬಿಎಂಪಿಯ ಆಡಳಿತ ಅವಧಿ ಏ.22ರಂದು ಕೊನೆಗೊಳ್ಳುತ್ತಿದ್ದು, ನಂತರ ಚುನಾವಣೆ ನಡೆಯಲಿದೆ. [ಸಿದ್ದರಾಮಯ್ಯ ಬಜೆಟ್ ನಲ್ಲಿ ಬೆಂಗಳೂರಿಗೆ ಕೊಟ್ಟಿದ್ದೇನು?]

bbmp

ಸೂಪರ್ ಸೀಡ್ ಮಾತುಕತೆ : ಬಿಬಿಎಂಪಿಯಲ್ಲಿ ನಡೆದಿರುವ ಅಕ್ರಮಗಳ ಕುರಿತು ಐಎಎಸ್‌ ಅಧಿಕಾರಿ ರಾಜೇಂದ್ರ ಕುಮಾರ್ ಕಠಾರಿಯಾ ನೀಡಿರುವ ವರದಿ ಆಧಾರದ ಮೇಲೆ ನಗರಾಭಿವೃದ್ಧಿ ಇಲಾಖೆ ಬಿಬಿಎಂಪಿಯನ್ನು ಸೂಪರ್ ಸೀಡ್ ಮಾಡುವ ಕುರಿತು ಚರ್ಚೆ ನಡೆಸುತ್ತಿದೆ. [ಹಿಂದಿನ ಬಿಬಿಎಂಪಿ ಬಜೆಟ್ ಮುಖ್ಯಾಂಶಗಳು]

ಬಿಬಿಎಂಪಿಗೆ ನಿಗದಿತ ಅವಧಿಯಲ್ಲಿ ಚುನಾವಣೆ ನಡೆಸುವಂತೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿದ್ದು, ಅದರ ವಿಚಾರಣೆ ಮಂಗಳವಾರ ನಡೆಯುವ ಸಾಧ್ಯತೆ ಇದೆ. ಆದರೆ, ಅದಕ್ಕೂ ಮೊದಲೇ ಸರ್ಕಾರ ಬಿಬಿಎಂಪಿಯನ್ನು ಸೂಪರ್‌ಸೀಡ್‌ ಮಾಡಲಿದೆ ಎಂಬ ಸುದ್ದಿ ಹಬ್ಬಿದೆ.

ಅನಂತ್ ಕುಮಾರ್ ಆಕ್ರೋಶ : ಯಾವುದೇ ಕಾರಣಕ್ಕೂ ಬಿಬಿಎಂಪಿಯನ್ನು ಸೂಪರ್‌ಸೀಡ್ ಮಾಡಲು ಬಿಡುವುದಿಲ್ಲ. ಸರ್ಕಾರ ಸೂಪರ್ ಸೀಡ್ ಮಾಡಿದರೆ ಬಿಜೆಪಿ ಕಾನೂನು ಹೋರಾಟ ನಡೆಸಲಿದೆ ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+