ನಿಮ್ಮ ಮನೆ ಬಾಗಿಲಿಗೆ ಬರಲಿದ್ದಾರೆ ಬೆಂಗಳೂರು ಬಿಬಿಎಂಪಿ ಕಮಿಷನರ್!
ಬೆಂಗಳೂರಿನ ಜನರ ಸಮಸ್ಯೆಯನ್ನು ತಪ್ಪಿಸುವುದಕ್ಕೆ ಕೊನೆಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಆಯುಕ್ತರು ಮುಂದಾಗಿದ್ದಾರೆ. ಬೆಂಗಳೂರಿನಲ್ಲಿ ಕಳೆದ 5 ವರ್ಷಗಳಿಂದ ಚುನಾವಣೆ ನಡೆದಿಲ್ಲ. 5 ವರ್ಷಗಳಿಂದ ಚುನಾವಣೆ ನಡೆಯದೆ ಬೆಂಗಳೂರಿನ ಪಾಲಿಕೆ ವ್ಯಾಪ್ತಿಯಲ್ಲಿ ಭಾರೀ ಸಮಸ್ಯೆಗಳು ಎದುರಾಗಿವೆ. ಅಲ್ಲದೇ ಜನರ ಸಮಸ್ಯೆಯನ್ನು ಪರಿಹರಿಸುವುದಕ್ಕೆ ಸಾಧ್ಯವಾಗುತ್ತಿಲ್ಲ. ಇದೀಗ ಬಿಬಿಎಂಪಿಯ ಮುಖ್ಯ ಆಯುಕ್ತರೇ ಈ ಕೆಲಸಕ್ಕೆ ಮುಂದಾಗಿದ್ದಾರೆ.
ಬೆಂಗಳೂರಿನಲ್ಲಿ ಕಸ, ರಸ್ತೆ ಸೇರಿದಂತೆ ಮೂಲಸೌಕರ್ಯ ಸಮಸ್ಯೆ ಎದುರಾಗಿದೆ. ಸಣ್ಣ ಮಳೆ ಬಂದರೂ ಬೆಂಗಳೂರಿನಲ್ಲಿ ಸಮಸ್ಯೆ ಆಗುತ್ತಿದೆ. ಇದರೊಂದಿಗೆ ಬೆಂಗಳೂರಿನ ವಿವಿಧ ಭಾಗದಲ್ಲಿ ಕೆಲವೊಂದು ಸಮಸ್ಯೆಗಳಿದ್ದು. ಜನರಿಗೆ ಯಾರ ಬಳಿ ಹೇಳಿಕೊಳ್ಳಬೇಕು ಎಂದು ತಿಳಿಯುತ್ತಿಲ್ಲ. ಹೀಗಾಗಿ, ಕಳೆದ ಕೆಲವು ತಿಂಗಳುಗಳಿಂದ ಮುಖ್ಯ ಆಯುಕ್ತರ ನಡೆ ವಲಯದ ಕಡೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಯೋಜನೆಯ ಮೂಲಕ ಮುಖ್ಯ ಆಯುಕ್ತರೇ ನಿಮ್ಮ ಬಳಿ ಬಂದು ನಿಮ್ಮ ಸಮಸ್ಯೆಯನ್ನು ಕೇಳಲಿದ್ದಾರೆ ಎಂದು ಬಿಬಿಎಂಪಿ ಹೇಳಿದೆ.

ಮುಖ್ಯ ಆಯುಕ್ತರ ನಡೆ-ವಲಯದ ಕಡೆ ಕಾರ್ಯಕ್ರಮ: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 8 ವಲಯಗಳಲ್ಲಿ ಸಾರ್ವಜನಿಕ ಕುಂದು ಕೊರತೆಗಳನ್ನು ಪರಿಹರಿಸಲು ಸಾರ್ವಜನಿಕರಿಗೆ ಅನುಕೂಲವಾಗಲೆಂದು ಹಾಗೂ ವಲಯ ಮಟ್ಟದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯ ಚಟುವಟಿಕೆಗಳನ್ನು ನಿಯಮಿತವಾಗಿ ಪರಿಶೀಲನೆ ನಡೆಸುವ ಸಲುವಾಗಿ, ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಮುಖ್ಯ ಆಯುಕ್ತರ ನಡೆ-ವಲಯದ ಕಡೆ ಕಾರ್ಯಕ್ರಮ ನಡೆಸಲಿದ್ದಾರೆ.
ಮುಂದುವರಿದು, ಆಯಾ ವಲಯಗಳ ವ್ಯಾಪ್ತಿಯಲ್ಲಿ ಅಧಿಕಾರಿಗಳೊಂದಿಗೆ ಬೆಳಗ್ಗೆ ಬೆಳಗ್ಗೆ 7 ರಿಂದ 10 ಗಂಟೆಯವರೆಗೆ ವಿವಿಧ ಸ್ಥಳಗಳ ಭೆಟಿ ನೀಡಿ ಪರೀಶೀಲಿಸಿದ ಬಳಿಕ ಬೆಳಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಸಾರ್ವಜನಿಕರಿಂದ ಕುಂದು- ಕೊರತೆ /ಅಹವಾಲುಗಳನ್ನು ಪರಿಶೀಲಿಸಲಿದ್ದಾರೆ. ವಲಯಗಳಲ್ಲಿ ನಡೆಯುವ "ಮುಖ್ಯ ಆಯುಕ್ತರ ನಡೆ ವಲಯದ ಕಡೆ" ಕಾರ್ಯಕ್ರಮ ವೇಳಾಪಟ್ಟಿ ಈ ಕೆಳಕಂಡಂತಿದೆ. 👇
* ಪ್ರತಿ ತಿಂಗಳ ಮೊದಲನೇ ಮಂಗಳವಾರ- ಪೂರ್ವ ವಲಯ
* ಪ್ರತಿ ತಿಂಗಳ ಮೊದಲನೇ ಶುಕ್ರವಾರ- ಪಶ್ಚಿಮ ವಲಯ
* ಪ್ರತಿ ತಿಂಗಳ ಎರಡನೇ ಮಂಗಳವಾರ- ಮಹದೇವಪುರ ವಲಯ
* ಪ್ರತಿ ತಿಂಗಳ ಎರಡನೇ ಶುಕ್ರವಾರ- ಯಲಹಂಕ ವಲಯ
* ಪ್ರತಿ ತಿಂಗಳ ಮೂರನೇ ಮಂಗಳವಾರ- ದಾಸರಹಳ್ಳಿ ವಲಯ
* ಪ್ರತಿ ತಿಂಗಳ ಮೂರನೇ ಶುಕ್ರವಾರ- ರಾಜರಾಜೇಶ್ವರಿ ನಗರ ವಲಯ
* ಪ್ರತಿ ತಿಂಗಳ ನಾಲ್ಕನೇ ಮಂಗಳವಾರ- ಬೊಮ್ಮನಹಳ್ಳಿ ವಲಯ
* ಪ್ರತಿ ತಿಂಗಳ ನಾಲ್ಕನೇ ಶುಕ್ರವಾರ - ದಕ್ಷಿಣ ವಲಯ
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications