BBMP Election: ಅಕ್ಟೋಬರ್ 27 ರಂದು ಮತದಾರರ ಕರಡು ಪಟ್ಟಿ ಪ್ರಕಟ- ಅಂತಿಮ ಪಟ್ಟಿ ಘೋಷಣೆ ಯಾವಾಗ ತಿಳಿಯಿರಿ
ಬೆಂಗಳೂರು, ಸೆಪ್ಟೆಂಬರ್ 28: ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ದೇಶನದ ಮೇರೆಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಕ್ಟೋಬರ್ 27 ರಂದು ಮತದಾರರ ಕರಡು ಪಟ್ಟಿಯನ್ನು ಬಿಡುಗಡೆ ಮಾಡಲು ಸಿದ್ಧವಾಗಿದೆ. ಅಂತಿಮ ಮತದಾರರ ಪಟ್ಟಿಯನ್ನು ಜನವರಿ 5, 2024 ರಂದು ಪ್ರಕಟಿಸಲು ನಿರ್ಧರಿಸಲಾಗಿದೆ.
ಸೆಪ್ಟೆಂಬರ್ 25 ರ ಇಸಿಐ ನಿರ್ದೇಶನದ ಆಧಾರದ ಮೇಲೆ, ಮತದಾರರ ಕರಡು ಪಟ್ಟಿಯನ್ನು ಬಿಡುಗಡೆ ಮಾಡಲು ಬಿಬಿಎಂಪಿ ಸಿದ್ಧತೆಗಳನ್ನು ಪ್ರಾರಂಭಿಸಿದೆ.
1- ಕರಡು ಚುನಾವಣಾ ಪ್ರಕಟಣೆ: ಅಕ್ಟೋಬರ್ 27
2- ಆಕ್ಷೇಪಣೆಗಳನ್ನು ಸಲ್ಲಿಸಲು ಸಮಯ: ಅಕ್ಟೋಬರ್ 27 ರಿಂದ ಡಿಸೆಂಬರ್ 9
3- ಆಕ್ಷೇಪಣೆಗಳ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ದಿನಾಂಕ: ಡಿಸೆಂಬರ್ 26
4- ಮತದಾರರ ಅಂತಿಮ ಪಟ್ಟಿಯು ಪ್ರಕಟಣೆ: ಜನವರಿ 5, 2024
ಮತದಾರರ ಅಂತಿಮ ಪಟ್ಟಿಯು ಪ್ರಕಟಣೆಯಾದ ಬಳಿಕ ಚುನಾವಣಾ ಆಯೋಗವು ಚುನಾವಣೆ ನಡೆಸಲು ತಯಾರಿ ಮಾಡಿಕೊಳ್ಳಬಹುದು.

ಬಿಬಿಎಂಪಿ ವಾರ್ಡ್ ಮೀಸಲಾತಿ
ಕರ್ನಾಟಕ ಹೈಕೋರ್ಟ್‌ನ ಆದೇಶದ ಮೇರೆಗೆ ನಗರಾಭಿವೃದ್ಧಿ ಇಲಾಖೆ (ಯುಡಿಡಿ) ಸೆಪ್ಟೆಂಬರ್ 25 ರಂದು 225 ವಾರ್ಡ್‌ಗಳ ಅಂತಿಮ ವಿಂಗಡಣೆಯನ್ನು ಪ್ರಕಟಿಸಿತು. ಕಾಂಗ್ರೆಸ್ ನೇತೃತ್ವದ ಸರ್ಕಾರ ಸದ್ಯ ವಾರ್ಡ್ ಮೀಸಲು ನಿಗದಿಗೆ ಮುಂದಾಗಿದ್ದು, ಈ ವರ್ಷ ನವೆಂಬರ್ ವೇಳೆಗೆ ಪೂರ್ಣಗೊಳ್ಳುವ ನಿರೀಕ್ಷೆ ಇದೆ.
ಬಿಜೆಪಿ ಸರ್ಕಾರವು ಈ ಹಿಂದೆ ವಿಂಗಡಣೆ ಮಾಡಿದ 243 ವಾರ್ಡ್‌ಗಳಲ್ಲಿ ಲೋಪದೋಷಗಳಿವೆ ಎಂದು ಕಾಂಗ್ರೆಸ್ ನೇತೃತ್ವದ ಸರ್ಕಾರವು ನ್ಯಾಯಾಲಯಕ್ಕೆ ತಿಳಿಸಿತ್ತು. ಆ ನಂತರ ಕರ್ನಾಟಕ ಹೈಕೋರ್ಟ್ ಜೂನ್‌ನಲ್ಲಿ ಸರ್ಕಾರಕ್ಕೆ ವಿಂಗಡಣೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು 12 ವಾರಗಳ ಕಾಲಾವಕಾಶವನ್ನು ನೀಡಿತು.
ಈ ವರ್ಷಾಂತ್ಯದಲ್ಲಿ ಅಥವಾ ಮುಂದಿನ ವರ್ಷದ ಆರಂಭದಲ್ಲಿ ಚುನಾವಣೆ ನಡೆಸಲು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸುಳಿವು ನೀಡಿದ್ದಾರೆ.

ಬಿಜೆಪಿ ಮತ್ತು ಜೆಡಿಎಸ್‌ನ ಹಲವು ಮಾಜಿ ಕಾರ್ಪೊರೇಟರ್‌ಗಳನ್ನು ಕಣಕ್ಕಿಳಿಸುವ ಮೂಲಕ ಕಾಂಗ್ರೆಸ್ ಪಾಲಿಕೆ ಚುನಾವಣೆಗೆ ಸಿದ್ಧತೆ ಆರಂಭಿಸಿದೆ.
ಸೆಪ್ಟೆಂಬರ್ 2020 ರಿಂದ ಬಿಬಿಎಂಪಿ ಚುನಾಯಿತ ಕೌನ್ಸಿಲ್ ಇಲ್ಲದೆಯೇ ಉಳಿದಿದೆ. ಬಿಬಿಎಂಪಿಯನ್ನು ಪ್ರಸ್ತುತ ಸರ್ಕಾರದಿಂದ ನೇಮಿಸಲ್ಪಟ್ಟ ನಿರ್ವಾಹಕರು ಮತ್ತು ಅಧಿಕಾರಿಗಳು ನಿರ್ವಹಿಸುತ್ತಿದ್ದಾರೆ.












Click it and Unblock the Notifications