National Dengue Day 2024: ಮೇ ತಿಂಗಳಲ್ಲಿ 172 ಡೆಂಘೀ ಪ್ರಕರಣ ವರದಿ: ವಲಯವಾರು ಅಂಕಿ-ಸಂಖ್ಯೆ
ಬೆಂಗಳೂರು, ಮೇ 16: ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಡೆಂಘೀ ನಿಯಂತ್ರಣಕ್ಕೆ ಈಗಾಗಲೇ ಸಾಕಷ್ಟು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಈಗಾಗಲೇ ಔಷದಿ ಸಿಂಪಡಣೆ ಮಾಡಲಾಗಿದೆ. ಲಾರ್ವಾ ಸಮೀಕ್ಷೆಯನ್ನು ಸಹ ಆರಂಭಿಸಲಾಗಿದೆ ಎಂದು ವಿಶೇಷ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್ ರವರು ತಿಳಿಸಿದರು.
ಇಂದು ಮೇ 16 ರಂದು ರಾಷ್ಟ್ರೀಯ ಡೆಂಘೀ ದಿನಾಚರಣೆಯ (National Dengue Day 2024) ಅಂಗವಾಗಿ ಇಂದು ಪೂರ್ವ ವಲಯದ ರಾಮಸ್ವಾಮಿ ಪಾಳ್ಯದಲ್ಲಿ ಹಮ್ಮಿಕೊಂಡಿದ್ದ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಅವರು ಚಾಲನೆ ನೀಡಿದರು.

ಡೆಂಘೀ ಪ್ರಕರಣಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಬಿಬಿಎಂಪಿ ವ್ಯಾಪ್ತಿಯ ಎಲ್ಲಾ ವಾರ್ಡ್ ಗಳಲ್ಲಿ ಸೊಳ್ಳೆ ನಿಯಂತ್ರಣ ಕುರಿತು ಅರಿವು ಮೂಡಿಸಲಾಗುತ್ತಿದೆ. ಔಷಧಿ ಸಿಂಪಡಣೆ ಮಾಡಲಾಗುತ್ತಿದೆ. ಲಾರ್ವಾ ಸಮೀಕ್ಷೆ ಕೈಗೊಳ್ಳಲಾಗುತ್ತಿದೆ. ಈಡೀಸ್, ಈಜಿಪ್ಟೈ ಎಂಬ ಸೊಳ್ಳೆಗಳಿಂದ ಡೆಂಘೀ ರೋಗ ಹರಡುತ್ತದೆ.
ಲಾರ್ವಾ ಉತ್ಪತ್ತಿ ನಾಶ ಕಾರ್ಯ
ಆ ಸೊಳ್ಳೆಗಳು ತೆರೆಡಿಟ್ಟ ನೀರಿನ ತೊಟ್ಟಿಗಳು, ಏರ್ ಕೂಲರ್ ಗಳು, ಹೂವಿನ ಕುಂಡದ ತಟ್ಟೆಗಳು, ಬಕೆಟ್ ಗಳು, ಸೀಮೆಂಟ್ ತೊಟ್ಟಿಗಳು, ತೆಂಗಿನ ಚಿಪ್ಪುಗಳು, ಒಡೆದ ಟೈರ್ ಗಳಲ್ಲಿ ಉತ್ಪತ್ತಿಯಾಗುತ್ತವೆ. ಈ ಸಂಬಂಧ ಪ್ರಾರಂಭಿಕ ಹಂತದಲ್ಲೇ ಸೊಳ್ಳೆ ನಿಯಂತ್ರಣ ಮಾಡಲು ಲಾರ್ವಾ ಉತ್ಪಿತ್ತಿಯಾಗುವ ತಾಣಗಳನ್ನು ಗುರಿತಿಸಿ ನಾಶಪಡಿಸಲಾಗುತ್ತದೆ ಕೆಲಸ ಆರಂಭವಾಗಿದೆ ಎಂದು ತಿಳಿಸಿದರು.

ಮಳೆ ಬಂದಾಗ ನೀರು ಸಂಗ್ರಹವಾಗಿ ಸೊಳ್ಳೆಗಳ ಸಂತತಿ ಹೆಚ್ವಾಗಲಿದೆ. ಅದನ್ನು ಫಾಗಿಂಗ್ ಮತ್ತು ಔಷಧಿ ಸಿಫಡಿಸುವ ಮೂಲಕ ತಡೆಯಬೇಕು. ಹೂವಿನ ಕುಂಡ, ಬೀಸಾಕಿದ ಟೈರ್, ನೀರು ಸಂಗ್ರಹಿಸುವ ತೊಟ್ಟಿ, ನೀರಿನ ಬಾಟಲ್ ಸೇರಿದಂತೆ ಇನ್ನಿತರೆಡೆ ಸೊಳ್ಳೆಗಳು ಉತ್ಪತ್ತಿಯಾಗುತ್ತವೆ. ಈ ಸಂಬಂಧ ಅಂತಹ ಜಾಗದಲ್ಲಿ ನೀರು ಸಂಗ್ರಹವಾಗದಂತೆ ನೋಡಿಕೊಳ್ಳಲು ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.
ವಾರ್ಡಗಳಲ್ಲಿ ಔಷಧಿ ಸಿಂಪಡಣೆ
ಆಯಾ ವಲಯದ ವಾರ್ಡ್ ಮಟ್ಟದಲ್ಲಿ ಒಂದು ವಾರ್ಡ್ ಗೆ 4 ಔಷಧಿ ಸಿಂಪಡೆಣೆ ಮಾಡುವ ತಂಡಗಳನ್ನು ನಿಯೋಜನೆ ಮಾಡಿದ್ದು, ತಾತ್ಕಾಲಿಕವಾಗಿ ನೀರು ನಿಲ್ಲುವ ಸ್ಥಳ ಹಾಗೂ ಶಾಶ್ವತವಾಗಿ ನೀರು ನಿಲ್ಲುವ ಸ್ಥಳಗಳನ್ನು ಗುರುತಿಸಿ ಫಾಗಿಂಗ್ ಮತ್ತು ಔಷಧಿ ಸಿಂಪಡಣೆ ಮಾಡಲಾಗುತ್ತದೆ.
ಕೊಳಚೆ ಹಾಗೂ ಇನ್ನಿತರೆ ಪ್ರದೇಶಗಳಲ್ಲಿ ಪ್ರಾಥಮಿಕ ಆರೋಗ್ಯ ಸುರಕ್ಷಣಾ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ನಮ್ಮ ಕ್ಲಿನಿಕ್ ವೈದ್ಯರ ತಂಡ ಹಾಗೂ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿ ಮತ್ತು ಸಿಬ್ಬಂದಿಗಳ ತಂಡಗಳನ್ನು ರಚಿಸಿಕೊಂಡು ಮನೆ-ಮನೆ ಭೇಟಿ ನೀಡಿ ಡೆಂಘೀ ಪ್ರಕರಣಗಳ ಪತ್ತೆ ಹಚ್ಚುವ ಸಮೀಕ್ಷೆ ನಡೆಸುವ ಕಾರ್ಯಕ್ಕೆ ಚುರುಕು ನೀಡಲಾಗಿದೆ ಎಂದು ಮಾಹಿತಿ ನೀಡಿದರು.
ಸಾಮಾಜಿಕ ಜಾಲತಾಣದಲ್ಲಿ ಡೆಂಘೀ ಜಾಗೃತಿ, ಅಭಿಯಾನ
ಬೆಂಗಳೂರಿನಲ್ಲಿ ಡೆಂಘೀ ನಿಯಂತ್ರಿಸುವ ನಿಟ್ಟಿನಲ್ಲಿ ಸಾಮಾಜಿಕ ಜಾಲತಾಣ, ಆಯಾ ವಲಯಗಳ ವಾರ್ಡ್ ಮಟ್ಟದಲ್ಲಿ ಜಾಗೃತಿ ಜಾಥಾ, ಕಸದ ವಾಹನಗಳಲ್ಲಿ ಧ್ವನಿವರ್ಧಕಗಳ ಮೂಲಕ ಡೆಂಘೀ ಬಗ್ಗೆ ನಾಗರೀಕರಲ್ಲಿ ಅರಿವು ಮೂಡಿಸಲಾಗುತ್ತಿದೆ. ಮನೆ ಮನೆಗೆ ಡೆಂಗೀ ನಿಯಂತ್ರಣದ ಕುರಿತು ಬಿತ್ತಿಪತ್ರಗಳನ್ನು ವಿತರಿಸಿ ಜಾಗೃತಿ ಮೂಡಿಸುತ್ತಿದ್ದೇವೆ.
ಈ ವೇಳೆ ಮುಖ್ಯ ಆರೋಗ್ಯಾಧಿಕಾರಿಯಾದ ಡಾ. ಮದನಿ, ಪೂರ್ವ ವಲಯ ಆರೊಗ್ಯಾಧಿಕಾರಿಯಾದ ಡಾ. ಭಾಗ್ಯಲಕ್ಷ್ಮಿ, ಡೆಂಗೀ ನೋಡಲ್ ಅಧಿಕಾರಿಯಾದ ಸುಜಾತಾ, ಆರೋಗ್ಯ ವೈದ್ಯಾಧಿಕಾರಿಗಳು, ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಇನ್ನಿತರರು ಜಾಥಾದಲ್ಲಿ ಪಾಲ್ಗೊಂಡಿದ್ದರು.
ಮೇ 1-13ನೇ 172 ಡೆಂಘೀ ಪ್ರಕರಣ ವರದಿ: ವಲಯವಾರು ಮಾಹಿತಿ ಇಲ್ಲಿದೆ
ಬೊಮ್ಮನಹಳ್ಳಿ: 23
ಪೂರ್ವ: 41
ಮಹದೇವಪುರ: 44
ಆರ್.ಆರ್ ನಗರ: 08
ದಕ್ಷಿಣ: 34
ಪಶ್ಚಿಮ: 16
ಯಲಹಂಕ: 06
ದಾಸರಹಳ್ಳಿ: 00
ಒಟ್ಟು: 172 ಪ್ರಕರಣ












Click it and Unblock the Notifications