• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬೆಂಗಳೂರು-ಬೆಳಗಾವಿ ರೈಲು ವೇಳಾಪಟ್ಟಿ ಬದಲಾವಣೆ

|

ಬೆಂಗಳೂರು, ಜೂನ್ 14 : ಬೆಂಗಳೂರು-ಬೆಳಗಾವಿ-ಬೆಂಗಳೂರು ನಡುವೆ ಸಂಚಾರ ನಡೆಸುವ ಸೂಪರ್ ಫಾಸ್ಟ್ ಎಕ್ಸ್‌ಪ್ರೆಸ್ ರೈಲಿನ ವೇಳಾಪಟ್ಟಿಯನ್ನು ಪರಿಷ್ಕರಣೆ ಮಾಡಲಾಗಿದೆ. ಜೂನ್ 13ರಿಂದಲೇ ಹೊಸ ವೇಳಾಪಟ್ಟಿ ಜಾರಿಗೆ ಬಂದಿದೆ.

ವಾರದಲ್ಲಿ ಮೂರು ದಿನ ಬೆಂಗಳೂರು-ಬೆಳಗಾವಿ-ಬೆಂಗಳೂರು ಸೂಪರ್ ಫಾಸ್ಟ್ ಎಕ್ಸ್‌ಪ್ರೆಸ್ ರೈಲು ಉಭಯ ನಗರಗಳ ನಡುವೆ ಸಂಚಾರ ನಡೆಸುತ್ತದೆ. ಪ್ರಯಾಣಿಕರ ಅನುಕೂಲಕ್ಕಾಗಿ ವೇಳಾಪಟ್ಟಿ ಪರಿಷ್ಕರಣೆ ಮಾಡಲಾಗಿದೆ.

ಪರಿಷ್ಕೃತ ವೇಳಾಪಟ್ಟಿಯ ಪ್ರಕಾರ ರೈಲು ರೈಲು ಸಂಖ್ಯೆ 06598 ಬೆಳಗಾವಿಯಿಂದ ಬೆಳಗ್ಗೆ 8 ಗಂಟೆಗೆ ಪ್ರತಿ ಮಂಗಳವಾರ, ಗುರುವಾರ ಮತ್ತು ಶನಿವಾರ ಹೊರಡಲಿದೆ. ಧಾರವಾಡ, ಹುಬ್ಬಳ್ಳಿ, ಹಾವೇರಿ, ರಾಣೆಬೆನ್ನೂರು, ಹರಿಹರ, ದಾವಣಗೆರೆ ಚಿಕ್ಕಜಾಜೂರು, ಬೀರೂರು, ಅರಸೀಕೆರೆ, ತುಮಕೂರು, ಯಶವಂತಪುರ ಮಾರ್ಗವಾಗಿ ಸಂಚಾರ ಮಾಡಲಿದ್ದು, ಸಂಜೆ 7 ಗಂಟೆಗೆ ಬೆಂಗಳೂರು ತಲುಪಲಿದೆ.

ಜೂನ್ 15 ರಿಂದ ಸೋಮವಾರ, ಬುಧವಾರ ಮತ್ತು ಶುಕ್ರವಾರ ಬೆಳಗ್ಗೆ 8 ಗಂಟೆಗೆ ಕೆಎಸ್‌ಆರ್ ರೈಲು ನಿಲ್ದಾಣದಿಂದ ಹೊರಡುವ ರೈಲು ಯಶವಂತಪುರ (8.09), ತುಮಕೂರು (8.59), ಅರಸೀಕೆರೆ (10.25), ಬೀರೂರು (11.13), ಚಿಕ್ಕಜಾಜೂರು (12.09)ಕ್ಕೆ ತಲುಪಲಿದೆ.

ದಾವಣಗೆರೆ (12.48), ಹರಿಹರ (1.09), ರಾಣೆಬೆನ್ನೂರು (1.32), ಹಾವೇರಿ (2.01), ಹುಬ್ಬಳ್ಳಿ (3.25), ಧಾರವಾಡಕ್ಕೆ ಸಂಜೆ 4.04ಕ್ಕೆ ತಲುಪಲಿದೆ. ಸಂಜೆ 7 ಗಂಟೆಗೆ ರೈಲು ಬೆಳಗಾವಿ ತಲುಪಲಿದೆ ಎಂದು ನೈಋತ್ಯ ರೈಲ್ವೆ ಹೇಳಿದೆ.

English summary
South Western Railways (SWR) changed the Bengaluru-Belagavi-Bengaluru tri-weekly super fast express train schedule. New time table in effect from June 13, 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X