ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚರ್ಚ್‌ ಸ್ಟ್ರೀಟ್‌ ಸ್ಫೋಟದ ತನಿಖೆಗೆ ವಿಶೇಷ ತಂಡ : ಸಿಎಂ

|
Google Oneindia Kannada News

ಬೆಂಗಳೂರು, ಡಿ. 29 : 'ಹೊಸ ವರ್ಷದ ಹೊಸ್ತಿಲಲ್ಲಿ ಇರುವಾಗ ಶಾಂತಿಯನ್ನು ಕದಡಲು ದುಷ್ಕರ್ಮಿಗಳು ಮಾಡಿದ ಈ ಯತ್ನ ಹೇಡಿತನದ್ದು. ಪ್ರಕರಣದಲ್ಲಿ ಭಾಗಿ­ಯಾದವರನ್ನು ಕೂಡಲೇ ಪತ್ತೆ ಹಚ್ಚಲು ವಿಶೇಷ ತಂಡ ರಚಿಸಲಾಗುವುದು' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರಿನ ಚರ್ಚ್‌ ಸ್ಟ್ರೀಟ್‌ನಲ್ಲಿ ಬಾಂಬ್ ಸ್ಫೋಟಗೊಂಡ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಅವರು ರಾತ್ರಿ 12.45ರ ಸುಮಾರಿಗೆ ಆಗಮಿಸಿ, ಪರಿಶೀಲನೆ ನಡೆಸಿದರು ಮತ್ತು ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಸರ್ಕಾರ ಭರಿಸಲಿದೆ ಎಂದರು. ಮೃತ ಭವಾನಿ ಕುಟುಂಬಕ್ಕೆ 5 ಲಕ್ಷ ರೂ.ಗಳ ಪರಿಹಾರ ಘೋಷಣೆ ಮಾಡಿದರು. [ಬೆಂಗಳೂರು ಬಾಂಬ್ ಸ್ಫೋಟ, ಮಹಿಳೆ ಬಲಿ]

Bomb Blast

ಸ್ಥಳದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, 'ನಗರದ ಬಸ್, ರೈಲು ಹಾಗೂ ವಿಮಾನ ನಿಲ್ದಾಣ ಸೇರಿದಂತೆ ಜನದಟ್ಟಣೆ ಸ್ಥಳಗಳಲ್ಲಿ ಹೆಚ್ಚುವರಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಜನರು ವದಂತಿಗಳಿಗೆ ಕಿವಿಕೊಡಬಾರದು' ಎಂದು ಮನವಿ ಮಾಡಿದರು. [ಬೆಂಗಳೂರಿನಲ್ಲಿ ಬಾಂಬ್ ಸ್ಫೋಟ]

ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ದೂರವಾಣಿ ಕರೆ ಮಾಡಿ ಘಟನೆ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ತನಿಖೆಗೆ ಕೇಂದ್ರ ಸರ್ಕಾರ ಎಲ್ಲಾ ರೀತಿಯ ಸಹಕಾರ ನೀಡಲಿದೆ ಎಂದು ಭರವಸೆ ನೀಡಿದ್ದಾರೆ ಎಂದು ಸಿದ್ದರಾಮಯ್ಯ ಅವರು ತಿಳಿಸಿದರು.

ಗೃಹ ಸಚಿವರ ಭೇಟಿ : ಮಹಾರಾಷ್ಟ್ರ ಪ್ರವಾಸದಲ್ಲಿದ್ದ ಗೃಹ ಸಚಿವ ಕೆ.ಜೆ.ಜಾರ್ಜ್ ಅವರು ತಮ್ಮ ಪ್ರವಾಸವನ್ನು ಮೊಟಕುಗೊಳಿಸಿ ಬೆಂಗಳೂರಿಗೆ ಆಗಮಿಸಿದರು. ರಾತ್ರಿ 1 ಗಂಟೆಯ ಸುಮಾರಿಗೆ ಸ್ಥಳಕ್ಕೆ ಆಗಮಿಸಿದ ಅವರು, ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದರು.

ಸೋಮವಾರ ಬೆಳಗ್ಗೆ 10 ಗಂಟೆಗೆ ಸಿಎಂ ಸಿದ್ದರಾಮಯ್ಯ ಅವರ ಗೃಹ ಕಚೇರಿ ಕೃಷ್ಣಾದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ಕರೆಯಲಾಗಿದೆ. ಘಟನೆ ಬಗ್ಗೆ ತನಿಖೆ ನಡೆಯುತ್ತಿದೆ, ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಿದರು.

English summary
We cannot call it an intelligence failure and the police have done their best said Karnataka Chief Minister Siddaramaiah. On 12.30 am CM visited the Church Street where the blast occurred on Sunday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X