Breaking; ಜಯನಗರದಲ್ಲಿ ಹೊತ್ತಿ ಉರಿದ ಬಿಎಂಟಿಸಿ ಬಸ್
ಬೆಂಗಳೂರು, ಫೆಬ್ರವರಿ 01; ಬೆಂಗಳೂರು ನಗರದಲ್ಲಿ ಮತ್ತೊಂದು ಬಿಎಂಟಿಸಿ ಬಸ್ ಬೆಂಕಿಗೆ ಆಹುತಿಯಾಗಿದೆ. ಸುಮಾರು 30 ಪ್ರಯಾಣಿಕರಿದ್ದ ಬಸ್‌ಗೆ ಜಯನಗರದಲ್ಲಿ ಬೆಂಕಿ ತಗುಲಿದ್ದು, ಯಾರಿಗೂ ಯಾವುದೇ ಅಪಾಯವಾಗಿಲ್ಲ.
ಮಂಗಳವಾರ ಮಧ್ಯಾಹ್ನ 1.15ರ ಸುಮಾರಿಗೆ ಜಯನಗರ ಮೆಟ್ರೋ ಸ್ಟೇಷನ್ ಹತ್ತಿರದಲ್ಲಿ ಬಿಎಂಟಿಸಿ ಬಸ್‌ಗೆ ಬೆಂಕಿ ತಗುಲಿದೆ. ಅಗ್ನಿ ಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದು, ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ.

ಬ್ಯಾಟರಿ ವಿದ್ಯುತ್ ಸೋರಿಕೆಯಿಂದ ಬಿಎಂಟಿಸಿ ಬಸ್‌ಗೆ ಬೆಂಕಿ ಹೊತ್ತಿಕೊಂಡಿದೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಯಾವುದೇ ಪ್ರಯಾಣಿಕರಿಗೆ ತೊಂದರೆಯಾಗಿಲ್ಲ.
ಸುಮಾರು 13:15ಗಂಟೆಗೆ ಬೆಂಗಳೂರಿನ ಜಯನಗರ ಮೆಟ್ರೋ ಸ್ಟೇಷನ್ ಹತ್ತಿರ ಬ್ಯಾಟರಿ ವಿದ್ಯುತ್ ಸೋರಿಕೆಯಿಂದ ಬಿ.ಎಂ.ಟಿ.ಸಿ ಬಸ್ ಗೆ ಬೆಂಕಿಯಾಗಿದ್ದು ಕೂಡಲೇ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿರುತ್ತಾರೆ. ಯಾವುದೇ ಪ್ರಯಾಣಿಕರಿಗೆ ತೊಂದರೆಯಾಗಿರುವುದಿಲ್ಲ. pic.twitter.com/7QUj2mmIh5
— ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳು (@KarFireDept) February 1, 2022
15 ದಿನಗಳ ಹಿಂದೆ ಚಾಮರಾಜಪೇಟೆಯ ಮಕ್ಕಳ ಕೂಟ ಬಳಿ ಬಿಎಂಟಿಸಿ ಬಸ್‌ಗೆ ಬೆಂಕಿ ಹೊತ್ತಿಕೊಂಡಿತ್ತು. ಕೆ. ಆರ್. ಮಾರುಕಟ್ಟೆಗೆ ಸಂಚಾರ ನಡೆಸುತ್ತಿದ್ದ ದೀಪಾಂಜಲಿ ನಗರ ಡಿಪೋಗೆ ಸೇರಿದ ಬಸ್‌ಗೆ ಮಧ್ಯ ರಸ್ತೆಯಲ್ಲಿ ಬೆಂಕಿ ತಗುಲಿತ್ತು. ಪ್ರಯಾಣಿಕರು ಯಾವುದೇ ಅಪಾಯವಿಲ್ಲದೇ ಪಾರಾಗಿದ್ದರು.












Click it and Unblock the Notifications