RCB: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಪಂದ್ಯಗಳಿಗೆ ಬಿಎಂಟಿಸಿ ವಿಶೇಷ ಬಸ್ ಸೇವೆ

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2025ರ ಆವೃತ್ತಿಯಲ್ಲಿ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ ಪಂದ್ಯಗಳಿಗೆ ಬರುವ ಅಭಿಮಾನಿಗಳಿಗೆ ವಿಶೇಷ ಬಸ್ ಸೇವೆ ಒದಗಿಸುವುದಾಗಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಹೇಳಿದೆ. ತಡರಾತ್ರಿವರೆಗೂ ಪಂದ್ಯಗಳು ನಡೆಯುವ ಕಾರಣ ಅಭಿಮಾನಿಗಳಿಗೆ ಸಹಾಯವಾಗಲೆಂದು ಬಸ್ ಸೇವೆ ಒದಗಿಸಲು ಬಿಎಂಟಿಸಿ ಮುಂದಾಗಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಏಪ್ರಿಲ್ 2, 10, 18, 24 ಮತ್ತು ಮೇ 3, 13 ಮತ್ತು 17 ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ತವರಿನ ಪಂದ್ಯಗಳನ್ನು ಆಡಲಿದೆ. ಬಿಎಂಟಿಸಿ ಕ್ರೀಡಾಂಗಣದಿಂದ ನಗರದ ವಿವಿಧ ಭಾಗಗಳಿಗೆ ಬಸ್ ಸೇವೆ ಒದಗಿಸಲಿದ್ದು, ಪಂದ್ಯ ಮುಗಿದ ಬಳಿಕ ಮನೆಗೆ ಮರಳುವ ಅಭಿಮಾನಿಗಳಿಗೆ ಪ್ರಯಾಣವನ್ನು ಖಚಿತಪಡಿಸುತ್ತದೆ.

bengaluru bmtc special buses ipl 2025 fans rcb matches

ಕಾಡುಗೋಡಿ ಬಸ್ ನಿಲ್ದಾಣ, ಎಚ್‌ಎಎಲ್ ರಸ್ತೆ, ಸರ್ಜಾಪುರ (ಜಿ-2), ಹೊಸೂರು ರಸ್ತೆ ಮೂಲಕ ಎಲೆಕ್ಟ್ರಾನಿಕ್ ಸಿಟಿ (ಜಿ-3), ಬನ್ನೇರುಘಟ್ಟ ಮೃಗಾಲಯ (ಜಿ-4), ಮಾಗಡಿ ರಸ್ತೆ ಮೂಲಕ ಜನಪ್ರಿಯ ಟೌನ್‌ಶಿಪ್ (ಜಿ-7), ಆರ್.ಕೆ. ಸೇರಿದಂತೆ ಪ್ರಮುಖ ಮಾರ್ಗಗಳಿಗೆ ಹೆಗ್ಡೆ ನಗರ ಮೂಲಕ ನಾಗವಾರ ಮತ್ತು ಟ್ಯಾನರಿ ರಸ್ತೆ (ಜಿ-10), ಹೊಸಕೋಟೆ (317ಜಿ), ಮತ್ತು ಬನಶಂಕರಿ (13) ಮೂಲಕ ಬಸ್‌ ಸೇವೆ ಇರಲಿದೆ.

ಪ್ರಯಾಣ ದಟ್ಟಣೆ ಕಡಿಮೆ ಮಾಡುವ ವಿಶ್ವಾಸ

ಬಿಎಂಟಿಸಿ ಬಸ್‌ ಸೇವೆ ಒದಗಿಸುವ ಕಾರಣ ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತಲಿನ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುವ ಮತ್ತು ತೊಂದರೆಯಾಗದಂತೆ ಮುಕ್ತ ಪ್ರಯಾಣವನ್ನು ಖಚಿತಪಡಿಸುತ್ತದೆ. ಪಂದ್ಯದ ದಿನಗಳಲ್ಲಿ ಬೇಡಿಕೆ ಹೆಚ್ಚಾದರೆ ಬಿಎಂಟಿಸಿ ಅಧಿಕಾರಿಗಳು ಹೆಚ್ಚುವರಿ ಬಸ್‌ ಸೇವೆ ಒದಗಿಸಲು ಸಜ್ಜಾಗಿದ್ದಾರೆ. ಐಪಿಎಲ್ ಋತುವಿನಲ್ಲಿ ಸಾರ್ವಜನಿಕ ಸಾರಿಗೆಯನ್ನು ಉತ್ತೇಜಿಸಲು ಮತ್ತು ನಗರದಲ್ಲಿ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಇದು ಸಹಾಯವಾಗುತ್ತದೆ ಎಂದು ನಂಬಲಾಗಿದೆ.

Take a Poll

ಆರ್‌ಸಿಬಿಯ ತವರು ಪಂದ್ಯಗಳಿಗೆ ಇಡೀ ಕ್ರೀಡಾಂಗಣ ಭರ್ತಿಯಾಗಲಿದೆ. ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದ ಟಿಕೆಟ್‌ಗಳು ಈಗಾಗಲೇ ಸೋಲ್ಡ್‌ಔಟ್ ಆಗಿದ್ದು, 35000 ಮಂದಿ ಕ್ರೀಡಾಂಗಣಕ್ಕೆ ಬರಲಿದ್ದಾರೆ. ಪಂದ್ಯಗಳ ದಿನ ನಮ್ಮ ಮೆಟ್ರೋ ಕೂಡ ವಿಶೇಷವಾಗಿ ರೈಲುಗಳನ್ನು ಓಡಿಸಲಿದೆ.

ಏಪ್ರಿಲ್ 2ರಂದು ಆರ್ ಸಿಬಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಪಂದ್ಯ ಆಡಲಿದೆ. ಸಂಜೆ 7.30ಕ್ಕೆ ಪಂದ್ಯ ಆರಂಭವಾಗಲಿದ್ದು, 11 ರಿಂದ 11.30 ರ ವೇಳೆಗೆ ಪಂದ್ಯ ಮುಗಿಯುವ ನಿರೀಕ್ಷೆ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+