BodyBuilder Love Tragedy: ಪ್ರೇಯಸಿಗೆ ಬೇರೆಯವರೊಂದಿಗೆ ಮದುವೆ: ಮನನೊಂದು ಸಾವಿಗೆ ಶರಣಾದ ಬಾಡಿ ಬಿಲ್ಡರ್
BodyBuilder Love Tragedy: ಪ್ರೀತಿ ಮಾಡಿದ ಯುವತಿಗೆ ಬೇರೆ ವ್ಯಕ್ತಿಯೊಂದಿಗೆ ಮದುವೆ ನಿಶ್ಚಯವಾಗಿದೆ ಎಂದು ತಿಳಿದ ಬೆಂಗಳೂರಿನ ಬಾಡಿ ಬಿಲ್ಡರ್ ಹಾಗೂ ಜಿಮ್ ತರಬೇತಿದಾರರಾದ ಕಿರಣ್ (26 ವರ್ಷ) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಕಿರಣ್ ಅವರು ಮೂರು ವರ್ಷದಿಂದ ಯುವತಿಯೊಬ್ಬರನ್ನು ಪ್ರೀತಿಸುತ್ತಿದ್ದರು. ಆದರೆ ಪ್ರೇಯಸಿಯ ಮದುವೆ ಬೇರೆ ವ್ಯಕ್ತಿಯೊಂದಿಗೆ ಆಗಿದೆ ಎಂದು ಆ ಯುವತಿ ಲಗ್ನ ಪತ್ರಿಕೆಯನ್ನು ತಂದು ಕಿರಣ್ ಎನ್ನುವವರಿಗೆ ತೋರಿಸಿದ್ದಾರೆ ಎಂದು ಹೇಳಲಾಗಿದೆ. ಇದರಿಂದ ಮನನೊಂದ ಕಿರಣ್ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ದುರಂತ ಸಂಭವಿಸಿದೆ.
ವೃತ್ತಿಯಲ್ಲಿ ಬಾಡಿಬಿಲ್ಡರ್ ಮತ್ತು ಜಿಮ್ ತರಬೇತುದಾರರಾಗಿರುವ ಕಿರಣ್ ಅವರು, ಕಳೆದ ಮೂರು ವರ್ಷಗಳಿಂದ ಯುವತಿಯೊಬ್ಬರನ್ನು ಪ್ರೀತಿ ಮಾಡುತ್ತಿದ್ದರು. ಶನಿವಾರ ಅವರು ತಮ್ಮ ಗೆಳತಿಯನ್ನು ಭೇಟಿಯಾದಾಗ ಅವರಿಗೆ ಬೇರೊಬ್ಬ ಹುಡುಗನೊಂದಿಗಿನ ತನ್ನ ಮದುವೆ ನಿಶ್ಚಯವಾಗಿದೆ ಎಂದು ಮದುವೆ ಆಮಂತ್ರಣ ಪತ್ರಿಕೆ ಹಾಗೂ ಮದುವೆಗೆ ಎಂದು ತಂದಿದ್ದ ಹೊಸ ಸೀರೆಯನ್ನು ತೋರಿಸಿದ್ದಾರೆ ಎಂದು ಹೇಳಲಾಗಿದೆ.

ಸುದ್ದಿ ಕೇಳಿ ಮನನೊಂದ ಕಿರಣ್ ಅವರು, ತಮ್ಮ ಮಹಾಲಕ್ಷ್ಮಿ ಲೇಔಟ್ ಮನೆಗೆ ಹಿಂತಿರುಗಿ ಕೋಣೆಯೊಳಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಎಷ್ಟು ಕೂಗಿದರೂ ಕಿರಣ್ ಹೊರಗೆ ಬರದ ಹಿನ್ನೆಲೆಯಲ್ಲಿ ಬಾಗಿ ಒಡೆದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ.
ಕಿರಣ್ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಕಿರಣ್ ಅವರ ಕೋಣೆಯಿಂದ ಪತ್ತೆಯಾದ ಡೆತ್ ನೋಟ್ ಸೇರಿದಂತೆ ಪ್ರಕರಣದ ವಿವಿಧ ಆಯಾಮಗಳನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಪ್ರಕರಣದ ಹಿನ್ನೆಲೆ ಏನು & ಡೆತ್ನೋಟ್ನಲ್ಲಿ ಏನಿದೆ ?
ಬಾಡಿ ಬಿಲ್ಡರ್ ಹಾಗೂ ಜಿಮ್ ತರಬೇತಿದಾರರಾದ ಕಿರಣ್ ಅವರು ಕಳೆದ ಮೂರು ವರ್ಷಗಳಿಂದಲೂ ಯುವತಿಯೊಬ್ಬರನ್ನು ಪ್ರೀತಿಸುತ್ತಿದ್ದರು. ಇದೇ ಫೆಬ್ರವರಿ 14ರ ಪ್ರೇಮಿಗಳ ದಿನಾಚರಣೆಯಂದು ಗೀಫ್ಟ್ ಕೊಡುವುದಕ್ಕೆ ಸಿದ್ಧತೆ ಮಾಡಿಕೊಂಡಿದ್ದರು ಎನ್ನಲಾಗಿದೆ. ಆದರೆ ಯುವತಿಯು ಮದುವೆ ಪತ್ರಿಕೆಯನ್ನು ತಂದು ತೋರಿಸಿದಾಗ ಕಿರಣ್ ಆಘಾತಕ್ಕೆ ಒಳಗಾಗಿದ್ದಾರೆ.
ಇನ್ನು ಕಿರಣ್ ಆತ್ಮಹತ್ಯೆಗೂ ಮುಂಚೆ ಬರೆದಿದ್ದ ಡೆತ್ನೋಟ್ನಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೆ ಪ್ರೇಯಸಿ ಹಾಗೂ ಆಕೆಯ ತಾಯಿಯೇ ಕಾರಣ ಎಂದು ಬರೆದಿಟ್ಟಿದ್ದಾರೆ. ಅಲ್ಲದೇ ಡೆತ್ನೋಟ್ನಲ್ಲಿ ಅವರ ಮೊಬೈಲ್ನ ಪಾಸ್ವರ್ಡ್ ಅನ್ನು ಸಹ ನಮೂದಿಸಿದ್ದಾರೆ ಎಂದು ಹೇಳಲಾಗಿದೆ. ಕಿರಣ್ ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೇ ಸೋಷಿಯಲ್ ಮೀಡಿಯಾದಲ್ಲಿ ಕಿರಣ್ ಹಾಗೂ ಪ್ರೇಯಸಿಯ ಫೋಟೋ ವೈರಲ್ ಆಗುತ್ತಿದೆ.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ












Click it and Unblock the Notifications