ಬೆಂಗಳೂರು : ಬಾಂಬ್ ವದಂತಿ ತನಿಖೆಗೆ ವಿಶೇಷ ತಂಡ
ಬೆಂಗಳೂರು, ಜನವರಿ 18 : ಸಂಕ್ರಾಂತಿ ದಿನದಂದು ಬೆಂಗಳೂರಿನ ಕಾವೇರಿ ಜಂಕ್ಷನ್ ಬಳಿ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾದ ಚೀಲದ ಬಗ್ಗೆ ತನಿಖೆ ನಡೆಸಲು ಪೊಲೀಸರು ವಿಶೇಷ ತಂಡವನ್ನು ರಚನೆ ಮಾಡಿದ್ದಾರೆ. ಬ್ಯಾಗ್‌ನಲ್ಲಿ 30 ಎಂಎಲ್ ಮದ್ಯವಿದ್ದ ಬಾಟಲಿ ಪತ್ತೆಯಾಗಿತ್ತು, ಅದನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು.
ಕಾವೇರಿ ಜಂಕ್ಷನ್ ಬಳಿ ಅನುಮಾನಾಸ್ಪದ ರೀತಿಯಲ್ಲಿ ಚೀಲ ಪತ್ತೆಯಾದ ನಂತರ ಅದು ಬಾಂಬ್ ಇರಬಹುದು ಎಂದು ಶಂಕಿಸಲಾಗಿತ್ತು. ಜಂಕ್ಷನ್ ಸುತ್ತಮುತ್ತಲಿನ ವಾಹನ ಸಂಚಾರ ಮಾರ್ಗವನ್ನು ಬದಲಾವಣೆ ಮಾಡಲಾಗಿತ್ತು. ಬಾಂಬ್ ನಿಷ್ಕ್ರೀಯ ದಳದವರು ಪರಿಶೀಲನೆ ನಡೆಸಿ ಚೀಲದಲ್ಲಿರುವುದು ಬಾಂಬ್ ಅಲ್ಲ ಎಂದು ಸ್ಪಷ್ಟಪಡಿಸಿದ್ದರು. [ಬೆಂಗಳೂರನ್ನು ಬೆಚ್ಚಿಸಿದ ಬಾಂಬ್ ವದಂತಿ!]

ಬೆಂಗಳೂರು ಪೊಲೀಸರು ಈ ಪ್ರಕರಣದ ಬಗ್ಗೆ ತನಿಖೆ ನಡೆಸಲು ವಿಶೇಷ ತಂಡವನ್ನು ರಚನೆ ಮಾಡಿದ್ದಾರೆ. ಕಾವೇರಿ ಜಂಕ್ಷನ್ ಸುತ್ತಮುತ್ತಲಿನ ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಚೀಲವನ್ನು ತಂದಿಟ್ಟ ವ್ಯಕ್ತಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. [ಬ್ರೇಕಿಂಗ್ ನ್ಯೂಸೋ, ತಲೆ ಬ್ರೇಕ್ ಮಾಡುವಂಥ ಸುದ್ದಿಯೋ!]
ಬ್ಯಾಗ್‌ನಲ್ಲಿ ಸಿಕ್ಕ ವಸ್ತುಗಳನ್ನು ಪೊರೆನ್ಸಿಕ್ ಲ್ಯಾಬ್‌ಗೆ ಕಳುಹಿಸಲಾಗಿದೆ. ಲ್ಯಾಬ್‌ನಿಂದ ಬಂದ ಪ್ರಾಥಮಿಕ ವರದಿಗಳು ಬ್ಯಾಗ್‌ನಲ್ಲಿ ಕೇವಲ ಮದ್ಯವಿದೆ ಯಾವುದೇ ಸ್ಫೋಟಕಗಳು ಪತ್ತೆಯಾಗಿಲ್ಲ ಎಂದು ಸ್ಪಷ್ಟಪಡಿಸಿವೆ. ಆದರೆ, ಪೊಲೀಸರು ಬ್ಯಾಗ್ ಅನ್ನು ತಂದಿಟ್ಟವರು ಯಾರು? ಎಂದು ತನಿಖೆ ನಡೆಸುತ್ತಿದ್ದಾರೆ.
ಬಾಕ್ಸ್ ಪತ್ತೆಯಾದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ್ದ ಬೆಂಗಳೂರು ನಗರ ಪೊಲೀಸ್ ಆಯುಕ್ತ ಮೇಘರಿಕ್ ಅವರು, 'ಬೆಂಗಳೂರಿಗರು ಆತಂಕ ಪಡುವ ಅವಶ್ಯಕತೆ ಇಲ್ಲ ಬಾಕ್ಸ್ ನಲ್ಲಿ ದ್ರವರೂಪದ ವಸ್ತುಗಳು ಪತ್ತೆಯಾಗಿದೆ. ಬಾಕ್ಸ್ ಮೇಲೆ ಚೀನೀ ಭಾಷೆಯಲ್ಲಿ ಮುದ್ರಿಸಿದ ಕೆಲವು ಕಾಗದಗಳಿವೆ. ಯಾವುದೇ ಸ್ಫೋಟಕಗಳು ಇಲ್ಲ' ಎಂದು ಸ್ಪಷ್ಟಪಡಿಸಿದ್ದರು.
-
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
Gold: ದುಬೈಯಿಂದ ಭಾರತಕ್ಕೆ ಚಿನ್ನದ ಪೂರೈಕೆ ಪುನರಾರಂಭ; ಗ್ರಾಹಕರ ನಿರ್ಧಾರದಿಂದ ಬೆದರಿದ ವ್ಯಾಪಾರಿಗಳು -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
ವೈಭವ್ ಸೂರ್ಯವಂಶಿ ಅದೃಷ್ಟದ ಮೇಲೆ ಸವಾರಿ ಮಾಡುತ್ತಿದ್ದಾರೆ: ಕೊಡಗಿನ ರಾಬಿನ್ ಉತ್ತಪ್ಪ ಎಚ್ಚರಿಕೆಯ ಸಲಹೆ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ












Click it and Unblock the Notifications