ನೀತಿ ಸಂಹಿತೆ ಉಲ್ಲಂಘನೆ: ನಟ ಪ್ರಕಾಶ್ ರಾಜ್ ವಿರುದ್ಧ ದೂರು ದಾಖಲು
Recommended Video

ಬೆಂಗಳೂರು, ಮಾರ್ಚ್ 22: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಾರಿಯಲ್ಲಿರುವ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ ಕಾರಣಕ್ಕೆ ನಟ ಪ್ರಕಾಶ್ ರಾಜ್ ವಿರುದ್ಧ ದೂರು ದಾಖಲಿಸಲಾಗಿದೆ.
ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಪ್ರಕಾಶ್ ರಾಜ್ ಅವರು ಮಾರ್ಚ್ 12 ರಂದು ಎಂಜಿ ರಸ್ತೆಯಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಅನುಮತಿ ಇಲ್ಲದೆ ಮೈಕ್ ಉಪಯೋಗಿಸಿ ತಮ್ಮ ಪರವಾಗಿ ಮತ ಹಾಕುವಂತೆ ಪ್ರಚಾರ ಮಾಡುತ್ತಿದ್ದರು ಎಂದು ಆರೋಪಿಸಿ ಮೂರ್ತಿ ಎಂಬುವವರು ಪ್ರಕರಣ ದಾಖಲಿಸಿದ್ದಾರೆ.
ಸಮಗ್ರ ಮಾಹಿತಿಯುಳ್ಳ ಲೋಕಸಭೆ ಚುನಾವಣೆಯ ವಿಶೇಷ ಪುಟ

ಎಂಜಿ ರಸ್ತೆಯಲ್ಲಿ ಬ್ಯಾನರ್ ಮೀಡಿಯಾ ಮತ್ತು ಅಭಿವ್ಯಕ್ತ ಸ್ವಾತಂತ್ರ್ಯದ ಅಡಿಯಲ್ಲಿ ಪ್ರವೀಣ್ ಕೆ ಮತ್ತು ಅಭಿಲಾಶ್ ಸಿಎಸ್ ಎಂಬುವವರು ಕಾರ್ಯಕ್ರಮ ಆಯೋಜಿಸಿದ್ದರು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪ್ರಕಾಶ್ ರಾಜ್, ನೀತಿ ಸಂಹಿತೆ ಜಾರಿಯಲ್ಲಿದ್ದರೂ ತಮ್ಮ ಪರ ಚುನಾವಣಾ ಪ್ರಚಾರ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.
ಕಬ್ಬನ್ ಪಾರ್ಕ್ ಪೊಲೀಸರು ಕರ್ನಾಟಕ ಪೊಲೀಸ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.












Click it and Unblock the Notifications