Girlfriend Swapping: ಬೆಂಗಳೂರಿಗೆ ಕಾಲಿಟ್ಟ ಗರ್ಲ್‌ಫ್ರೆಂಡ್ ಸ್ವಾಪಿಂಗ್ ದಂಧೆ, ಹೇಗೆ ನಡೀತಿದೆ ಗೊತ್ತಾ?
ಪಾಶ್ಚಿಮಾತ್ಯ ದೇಶಗಳಲ್ಲಿ ಚಾಲ್ತಿಯಲ್ಲಿರೋ ಪತ್ನಿಯರನ್ನು ಅದಲು ಬದಲು ಮಾಡಿಕೊಳ್ಳುವ ವೈಫ್ ಸ್ವಾಪಿಂಗ್ (Wife Swapping) ಎನ್ನುವ ಟ್ರೆಂಡ್ ಇತ್ತೀಚೆಗೆ ಭಾರತಕ್ಕೂ ಕಾಲಿಟ್ಟು ಇಲ್ಲಿನ ಸಂಸ್ಕೃತಿ ಸಂಪ್ರದಾಯಗಳನ್ನು ಅವಮಾನಿಸುವ ಕೆಲಸ ಮಾಡಿದೆ ಎನ್ನುವ ಆರೋಪವಿದೆ. ಇದೀಗ ಬೆಂಗಳೂರಿನಲ್ಲಿ ಗೆಳತಿಯರ ವಿನಿಮಯ (girlfriend swapping) ಎನ್ನುವ ಮತ್ತೊಂದು ಟ್ರೆಂಡ್ ಹುಟ್ಟಿಕೊಂಡಿದೆ ಎಂದು ವರದಿಯಾಗಿದೆ.
ಕೇಂದ್ರೀಯ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಈ ಗರ್ಲ್‌ಫ್ರೆಂಡ್ ಸ್ವಾಪಿಂಗ್ ದಂಧೆ ನಡೆಸುತ್ತಿದ್ದವರನ್ನು ಬಂಧಿಸಿದ್ದಾರೆ ಎನ್ನಲಾಗಿದೆ. ಈ ದಂಧೆಯನ್ನ ದೊಡ್ಡಮಟ್ಟದಲ್ಲಿ ನಡೆಸುತ್ತಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಈ ದಂಧೆಯಲ್ಲಿ ಗೆಳತಿಯನ್ನು ಬೇರೊಬ್ಬ ಪುರುಷನೊಂದಿಗೆ ಹಂಚಿಕೊಳ್ಳುವ ನೀಚ ಕೃತ್ಯಕ್ಕೆ ಸಾಕ್ಷಿಯಾಗಿದೆ. ಇದನ್ನು ಇವರ ದಂಧೆಯಲ್ಲಿ ಸ್ವಿಂಗರ್‌ಗಳೆಂದು (swingers) ಕರೆಯುತ್ತಿದ್ದರು ಎಂದು ತಿಳಿದುಬಂದಿದೆ.

ಈ ದಂಧೆಯಲ್ಲಿ ಗರ್ಲ್‌ಫ್ರೆಂಡ್‌ಗಳನ್ನು ಪರಸ್ಪರ ಅಥವಾ ಬಲವಂತವಾಗಿ ವಿನಿಮಯ ಮಾಡಿಕೊಳ್ಳುವ ಮೂಲಕ ಒಬ್ಬರ ಪ್ರೇಯಸಿಯೊಂದಿಗೆ ಮತ್ತೊಬ್ಬ ಕಾಲ ಕಳೆಯುವುದು, ಅವರೊಂದಿಗೆ ಲೈಂಗಿಕ ಚಟುವಟಿಕೆ ನಡೆಸುವುದು ಒಳಗೊಂಡಿರುತ್ತದೆ ಎಂದು ಹೇಳಲಾಗುತ್ತಿದೆ. ಆದರೆ, ಈಗ ಬೆಳಕಿಗೆ ಬಂದಿರುವ ದಂಧೆ ಮೂಲಕ ಕೆಲವರನ್ನು ಬ್ಲಾಕ್‌ಮೇಲ್ ಮಾಡುವುದು, ಮಹಿಳೆಯರನ್ನು ಶೋಷಣೆ ಮಾಡುವ ಕೆಲಸವೂ ನಡೆಯುತ್ತಿದೆ ಎಂದು ವರದಿಯಾಗಿದೆ.
ಬೆಂಗಳೂರಿನಲ್ಲಿ ಮಹಿಳೆಯೊಬ್ಬರು ಈ ದಂಧೆ ಬಗ್ಗೆ ಸಿಸಿಬಿ ಪೊಲೀಸರಿಗೆ ದೂರು ನೀಡಿದ್ದರು. ಈ ದೂರನ್ನು ಆಧರಿಸಿ ಸಿಸಿಬಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದಾಗ ಈ ದಂಧೆ ಬೆಳಕಿಗೆ ಬಂದಿದೆ. ಆರೋಪಿಗಳು ಈ ದಂಧೆಗೆ ಮಹಿಳೆಯನ್ನು ಬಳಸಿಕೊಂಡಿದ್ದು, ಆರೋಪಿಗಳು ಹಾಗೂ ಅವರ ಸಹಚರರೊಂದಿಗೆ ಲೈಂಗಿಕ ಸಂಬಂಧ ಹೊಂದುವಂತೆ ಒತ್ತಾಯಿಸುತ್ತಿದ್ದರು ಎಂದು ಪೊಲೀಸರ ಮುಂದೆ ದಂಧೆಯ ಮುಖ ಬಿಚ್ಚಿಟ್ಟಿದ್ದಾರೆ.

ಇದಕ್ಕೆ ಮಹಿಳೆ ಒಪ್ಪದಿದ್ದಾಗ ಆರೋಪಿಗಳು ಆಕೆಯ ಖಾಸಗಿ ಫೋಟೋಗಳನ್ನು ಹರಿಬಿಡುವುದಾಗಿ ಬೆದರಿಕೆ ಹಾಕಿದ್ದರು ಎನ್ನಲಾಗಿದೆ. ಬೇರೆ ದಾರಿಯಿಲ್ಲದೆ ಅದನ್ನು ಮಾಡಲೇಬೇಕಾದ ಪರಿಸ್ಥಿತಿಯಲ್ಲಿ ಸಿಲುಕಿಸುತ್ತಿದ್ದರು ಎಂದು ರಿವೀಲ್ ಮಾಡಿದ್ದಾರೆ.
ಒಮ್ಮತದ ಲೈಂಗಿಕ ಚಟುವಟಿಕೆಗಳ ನೆಪದಲ್ಲಿ ಮಹಿಳೆಯರನ್ನು ಶೋಷಣೆ ಮಾಡುವ ಕೃತ್ಯಗಳು ಇತ್ತೀಚೆಗೆ ಹೆಚ್ಚಾಗಿ ನಡೆಯುತ್ತಿದ್ದು, ಮಹಿಳೆ ನೀಡಿರುವ ದೂರಿನ ಮೇರೆಗೆ ಸಿಸಿಬಿ ಅಧಿಕಾರಿಗಳು ಈ ದಂಧೆಯ ಬೆನ್ನು ಬಿದ್ದಿದ್ದಾರೆ. ಇದರಲ್ಲಿ ಇನ್ನೂ ಹಲವರು ಶಾಮೀಲಾಗಿರುವ ಮಾಹಿತಿ ಸಿಕ್ಕಿದ್ದು, ಈ ಬಗ್ಗೆಯೂ ಅವರು ತನಿಖೆ ಶುರು ಮಾಡಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.

ಇಂತಹ ದಂಧೆಯಲ್ಲಿ ಸಿಲುಕಿರುವ ಸಂತ್ರಸ್ತರು ಅಥವಾ ಇದೇ ರೀತಿಯ ಚಟುವಟಿಕೆಗಳ ಬಗ್ಗೆ ಮಾಹಿತಿ ಹೊಂದಿರುವ ಯಾರಾದರೂ ಮುಂದೆ ಬಂದು ಧೈರ್ಯವಾಗಿ ಮಾಹಿತಿ ನೀಡುವಂತೆ ಸಿಸಿಬಿ ಅಧಿಕಾರಿಗಳು ಅಭಯ ನೀಡಿದ್ದಾರೆ. ಇಂತಹ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿಯೂ ಅವರು ಭರವಸೆ ನೀಡಿದ್ದಾರೆ.
-
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ












Click it and Unblock the Notifications