ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರು ಸೆಂಟ್ರಲ್ ಕಾಂಗ್ರೆಸ್‌ ಟಿಕೆಟ್‌ಗೆ ಹೊಸ ಆಕಾಂಕ್ಷಿ!

|
Google Oneindia Kannada News

ಬೆಂಗಳೂರು, ಜನವರಿ 31 : ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್‌ಗೆ ಮತ್ತೊಬ್ಬರು ಆಕಾಂಕ್ಷಿಗಳು ಬಂದಿದ್ದಾರೆ. ಬಿಜೆಪಿ ವಶದಲ್ಲಿರುವ ಕ್ಷೇತ್ರದ ಟಿಕೆಟ್‌ಗಾಗಿ ಈಗಾಗಲೇ ನಾಲ್ವರು ಕಾಂಗ್ರೆಸ್‌ ನಾಯಕರು ಪೈಪೋಟಿ ನಡೆಸುತ್ತಿದ್ದಾರೆ.

2008ರಲ್ಲಿ ರಚನೆಯಾದ ಬೆಂಗಳೂರು ಸೆಂಟ್ರಲ್ ಕ್ಷೇತ್ರ ಎರಡು ಚುನಾವಣೆಯನ್ನು ಎದುರಿಸಿದೆ. ಎರಡು ಬಾರಿಯೂ ಬಿಜೆಪಿಯ ಪಿ.ಸಿ.ಮೋಹನ್ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಪ್ರತಿ ಚುನಾವಣೆಗೂ ಅಭ್ಯರ್ಥಿಗಳನ್ನು ಕ್ಷೇತ್ರದಲ್ಲಿ ಬದಲಾವಣೆ ಮಾಡುತ್ತಿದೆ.

ಬೆಂಗಳೂರು ಸೆಂಟ್ರಲ್ ಟಿಕೆಟ್‌ಗೆ ನಾಲ್ಕು ಕಾಂಗ್ರೆಸ್‌ ನಾಯಕರ ಪೈಪೋಟಿ!ಬೆಂಗಳೂರು ಸೆಂಟ್ರಲ್ ಟಿಕೆಟ್‌ಗೆ ನಾಲ್ಕು ಕಾಂಗ್ರೆಸ್‌ ನಾಯಕರ ಪೈಪೋಟಿ!

2009ರಲ್ಲಿ ಎಚ್.ಟಿ.ಸಾಂಗ್ಲಿಯಾ, 2014ರಲ್ಲಿ ರಿಜ್ವಾನ್ ಅರ್ಷದ್ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರು. ಈ ಬಾರಿ ನಾಲ್ವರು ನಾಯಕರು ಈಗಾಗಲೇ ಟಿಕೆಟ್‌ಗಾಗಿ ಪೈಪೋಟಿ ನಡೆಸುತ್ತಿದ್ದಾರೆ. ಇದರ ನಡುವೆಯೇ ಸಲೀಂ ಅಹಮದ್ ಅವರ ಹೆಸರು ಕೇಳಿಬರುತ್ತಿದೆ.

ಪ್ರಕಾಶ್ ರಾಜ್ ಸ್ಪರ್ಧೆ : ಬೆಂಗಳೂರು ಸೆಂಟ್ರಲ್‌ನ ರಾಜಕೀಯ ಚಿತ್ರಣಪ್ರಕಾಶ್ ರಾಜ್ ಸ್ಪರ್ಧೆ : ಬೆಂಗಳೂರು ಸೆಂಟ್ರಲ್‌ನ ರಾಜಕೀಯ ಚಿತ್ರಣ

ವಿವಿಧ ಕಾರಣಗಳಿಗಾಗಿ ಬೆಂಗಳೂರು ಸೆಂಟ್ರಲ್ ಕ್ಷೇತ್ರ ಈ ಬಾರಿಯ ಚುನಾವಣೆಯಲ್ಲಿ ಗಮನ ಸೆಳೆಯುತ್ತಿದೆ. ಕ್ಷೇತ್ರದಿಂದ ನಟ, ನಿರ್ದೇಶಕ ಪ್ರಕಾಶ್ ರಾಜ್ ಅವರು ಈ ಬಾರಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿದ್ದಾರೆ.

ಪ್ರಕಾಶ್ ರಾಜ್ ಜತೆಗೆ ಒನ್ ಇಂಡಿಯಾ ಕನ್ನಡ ಎಕ್ಸ್ ಕ್ಲೂಸಿವ್ ಸಂದರ್ಶನಪ್ರಕಾಶ್ ರಾಜ್ ಜತೆಗೆ ಒನ್ ಇಂಡಿಯಾ ಕನ್ನಡ ಎಕ್ಸ್ ಕ್ಲೂಸಿವ್ ಸಂದರ್ಶನ

ಹಾವೇರಿಯಲ್ಲಿ ಸೋತಿದ್ದಾರೆ

ಹಾವೇರಿಯಲ್ಲಿ ಸೋತಿದ್ದಾರೆ

ಮಾಜಿ ವಿಧಾನಪರಿಷತ್ ಸದಸ್ಯ ಸಲೀಂ ಅಹಮದ್ ಅವರು ಹಾವೇರಿ-ಗದಗ ಲೋಕಸಭಾ ಕ್ಷೇತ್ರದಲ್ಲಿ ಈಗಾಗಲೇ ಎರಡು ಬಾರಿ ಚುನಾವಣೆಗೆ ಸ್ಪರ್ಧಿಸಿ ಸೋತಿದ್ದಾರೆ. 2009ರ ಚುನಾವಣೆಯಲ್ಲಿ 342373 ಮತ್ತು 2014ರ ಚುನಾವಣೆಯಲ್ಲಿ479219 ಮತಗಳನ್ನು ಪಡೆದು ಬಿಜೆಪಿಯ ಶಿವಕುಮಾರ್ ಉದಾಸಿ ವಿರುದ್ಧ ಸೋಲುಕಂಡಿದ್ದಾರೆ.

ಬೆಂಗಳೂರು ಸೆಂಟ್ರಲ್‌ನಿಂದ ಸ್ಪರ್ಧೆ

ಬೆಂಗಳೂರು ಸೆಂಟ್ರಲ್‌ನಿಂದ ಸ್ಪರ್ಧೆ

2019ರ ಲೋಕಸಭಾ ಚುನಾವಣೆಯಲ್ಲಿ ಸಲೀಂ ಅಹಮದ್ ಅವರು ಬೆಂಗಳೂರು ಸೆಂಟ್ರಲ್ ಕ್ಷೇತ್ರದಿಂದ ಕಣಕ್ಕಿಳಿಯಲು ಬಯಸಿದ್ದಾರೆ. ಎರಡು ಬಾರಿ ಬಿಜೆಪಿ ವಶವಾಗಿರುವ ಕ್ಷೇತ್ರವನ್ನು ಈ ಬಾರಿ ಉಳಿಸಿಕೊಳ್ಳಬೇಕು ಎಂದು ಕಾಂಗ್ರೆಸ್ ತಂತ್ರ ರೂಪಿಸುತ್ತಿದೆ.

ಹಲವು ಟಿಕೆಟ್ ಆಕಾಂಕ್ಷಿಗಳು

ಹಲವು ಟಿಕೆಟ್ ಆಕಾಂಕ್ಷಿಗಳು

ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್‌ಗಾಗಿ ಭಾರಿ ಪೈಪೋಟಿ ನಡೆದಿದೆ. ರಾಜ್ಯಸಭಾ ಸದಸ್ಯ ಬಿ.ಕೆ.ಹರಿಪ್ರಸಾದ್, ವಿಧಾನ ಪರಿಷತ್ ಸದಸ್ಯ ರಿಜ್ವಾನ್ ಅರ್ಷದ್, ಮಾಜಿ ಸಚಿವ ರೋಷನ್ ಬೇಗ್, ನಿವೃತ್ತ ಐಎಎಸ್ ಅಧಿಕಾರಿ ಎಚ್.ಟಿ.ಸಾಂಗ್ಲಿಯಾನ ಅವರು ಈಗಾಗಲೇ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ. ಈ ಪಟ್ಟಿಗೆ ಸಲೀಂ ಅಹಮದ್ ಅವರು ಹೊಸ ಸೇರ್ಪಡೆಯಾಗಿದ್ದಾರೆ.

ಅಲ್ಪ ಸಂಖ್ಯಾತ ಮತಗಳು ಹೆಚ್ಚು

ಅಲ್ಪ ಸಂಖ್ಯಾತ ಮತಗಳು ಹೆಚ್ಚು

ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದಲ್ಲಿ ಅಲ್ಪ ಸಂಖ್ಯಾತಮತಗಳು ಹೆಚ್ಚು. 5.5 ಲಕ್ಷ ಲಕ್ಷ ತಮಿಳು, 4.5 ಲಕ್ಷ ಮುಸ್ಲಿಂ, 2 ಲಕ್ಷ ಕ್ರಿಶ್ಚಿಯನ್ ಮತದಾರರು ಇದ್ದಾರೆ. ಚಿಕ್ಕಪೇಟೆ, ಗಾಂಧಿನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಜೈನ ಮತ್ತು ಮಾರ್ವಾಡಿ ಸಮುದಾಯದ ಮತಗಳಿವೆ. ಅಲ್ಪ ಸಂಖ್ಯಾತರನ್ನು ಸೆಳೆದವರು ಚುನಾವಣೆಯಲ್ಲಿ ಜಯಗಳಿಸುತ್ತಾರೆ.

ಪಕ್ಷೇತರ ಅಭ್ಯರ್ಥಿ

ಪಕ್ಷೇತರ ಅಭ್ಯರ್ಥಿ

ಬೆಂಗಳೂರು ಸೆಂಟ್ರಲ್ ಕ್ಷೇತ್ರದಿಂದ ಈ ಬಾರಿಯ ಚುನಾವಣೆಗೆ ಪ್ರಕಾಶ್ ರಾಜ್ ಅವರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತಿದ್ದಾರೆ. ಈಗಾಗಲೇ ಕ್ಷೇತ್ರದಲ್ಲಿ ಸಂಚಾರ ನಡೆಸಿ ಪ್ರಣಾಳಿಕೆ ರಚನೆ ಮಾಡಲು ಮಾಹಿತಿ ಸಂಗ್ರಹಿಸುತ್ತಿದ್ದಾರೆ.

English summary
Bengaluru Central Lok Sabha constituency likely to witness a new face from the Congress party in the upcoming general elections. According to sources former MLC Saleem Ahmed is keen to contest.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X