Bengaluru Centre Lok Sabha Election 2024 Results LIVE: ಬೆಂಗಳೂರು ಕೇಂದ್ರದಲ್ಲಿ ಪಿ ಸಿ ಮೋಹನ್ ಭರ್ಜರಿ ಗೆಲುವು
ಬೆಂಗಳೂರು, ಜೂನ್ 04: ನಾಡಿನ ಶಕ್ತಿಕೇಂದ್ರ ವಿಧಾನಸೌಧ ಸುತ್ತ ವ್ಯಾಪಿಸಿಕೊಂಡಿರುವ ಬೆಂಗಳೂರು ಕೇಂದ್ರ ಲೋಕಸಭಾ ಅಧಿಪತಿ ಯಾರು ಎಂಬ ಕುತೂಹಲ ಹೆಚ್ಚಾಗಿದೆ. ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ ಜಾತಿ, ಧರ್ಮ, ಭಾಷೆ ಎಲ್ಲವೂ ಮೀರಿ ಫಲಿತಾಂಶ ಬಂದಿದೆ. ಈ ಬಾರಿಯೂ ಅಂತಹ ಕೌತುಕ ಬೆಂಗಳೂರು ಕೇಂದ್ರ ಕ್ಷೇತ್ರ ಕಾಪಾಡಿಕೊಂಡಿದೆ. ಈ ಬಾರಿ ಬೆಂಗಳೂರು ಅಧಿಪತಿ ಯಾರು ಎಂಬ ಕುತೂಹಲ ಹೆಚ್ಚಾಗಿದೆ.
ಬಿಜೆಪಿ ಹಾಲಿ ಸಂಸದ ಪಿ ಸಿ ಮೋಹನ ಮತ್ತೊಮ್ಮೆ ಜಯ ದಾಖಲಿಸುವ ವಿಶ್ವಾಸದಲ್ಲಿದ್ದು, ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಅಲಿಖಾನ್ ಅವರಿಗೆ ಸಹ ಗೆಲುವ ನಮ್ಮದೇ ಎನ್ನುವ ಭರವಸೆ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ಉತ್ತರ ಹಾಗೂ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಕೆಲವು ಕ್ಷೇತ್ರಗಳನ್ನು ವಿಭಜಿಸಿ, ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ ಸೃಷ್ಟಿಯಾಗಿದೆ. 2014 ಮತ್ತು 2019 ರ ಎರಡು ಚುನಾವಣೆಯಲ್ಲಿ ಕಾಂಗ್ರೆಸ್ ನ ರಿಜ್ವಾನ್ ಅರ್ಷದ್ ವಿರುದ್ದ ಪಿ ಸಿ ಮೋಹನ್ ಜಯಗಳಿಸಿದ್ದಾರೆ.

2024 ರ ಲೋಕಸಭಾ ಚುಣಾವಣೆಯಲ್ಲಿಯೂ ಮತ್ತೊಂದು ಅದೃಷ್ಟ ಪರೀಕ್ಷೆಗೆ ಪಿ ಸಿ ಮೋಹನ್ ಮುಂದಾಗಿದ್ರೆ, ಇತ್ತ ಕಾಂಗ್ರೆಸ್ ಹೈಕಮಾಂಡ್ ಮುಸ್ಲಿಂ ನಾಯಕ ಮನ್ಸೂರ್ ಅಲಿಖಾನ್ ಅವರನ್ನ ಕಣಕ್ಕಿಳಿಸಿದ್ದು, ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರವನ್ನ ವಶಪಡಿಸಿಕೊಳ್ಳಲು ಬಿಜೆಪಿ ಹಾಗೂ ಕಾಂಗ್ರೆಸ್ ಹಲವು ತಂತ್ರಗಾರಿಕೆಯನ್ನ ನಡೆಸಿದೆ.ಈ ಕ್ಷೇತ್ರದ ಅತೀ ಹೆಚ್ಚು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರಿರುವುದರಿಂದ ಕಾಂಗ್ರೆಸ್ ಗೆ ಈ ಕ್ಷೇತ್ರವನ್ನ ಪಡೆಯುವುದು ಪ್ರತಿಷ್ಠೆಯಾಗಿದೆ.
ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪಿ. ಸಿ. ಮೋಹನ್ ಅಚ್ಚರಿ ರೀತಿಯಲ್ಲಿ ಸತತ ನಾಲ್ಕನೇ ಬಾರಿಗೆ ಗೆಲುವು ಸಾಧಿಸಿದ್ದಾರೆ. ಆರಂಭದಲ್ಲಿ ಮುನ್ನಡೆಯಲ್ಲಿದ್ದ ಪಿ. ಸಿ. ಮೋಹನ್ ನಂತರ ಸುತ್ತಿನಲ್ಲಿ ಹಿನ್ನೆಡೆ ಅನುಭವಿಸಿದ್ದರು. ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಅಲಿಖಾನ್ ಗೆದ್ದೆ ಗೆಲ್ಲುತ್ತಾರೆ ಎನ್ನಲಾಗುತಿತ್ತು. ಆದರೆ ಕೊನೆ ಕ್ಷಣದಲ್ಲಿ ಪಿ.ಸಿ.ಮೋಹನ್ ಗೆ ಹೆಚ್ಚಿನ ಮತಗಳು ಸಿಕ್ಕಿದ್ದು 35 ರಿಂದ 40 ಸಾವಿರ ಲೀಡ್ ನಿಂದ ಗೆಲುವು ಸಾಧಿಸಿದ್ದಾರೆ.
* ಸಮಯ 11:30: ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಮತ ಎಣಿಕೆಯಲ್ಲಿ ಕಾಂಗ್ರೆಸ್ ನ ಮನ್ಸೂರ್ ಅಲಿ ಖಾನ್ ಅವರು 44349 ಮತಗಳಿಂದ ಮುನ್ನಡೆಯಲ್ಲಿದ್ದಾರೆ.ಕಾಂಗ್ರೆಸ್ ನ ಮನ್ಸೂರ್ ಅಲಿ ಖಾನ್- 236213 ಬಿಜೆಪಿಯ ಪಿ.ಸಿ. ಮೋಹನ್-191864 ಮತಗಳನ್ನ ಪಡೆದುಕೊಂಡಿದ್ದಾರೆ.
* ಸಮಯ 10;30: ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಮತ ಎಣಿಕೆಯಲ್ಲಿ ಕಾಂಗ್ರೆಸ್ ನ ಮನ್ಸೂರ್ ಅಲಿ ಖಾನ್ ಅವರು 3818 ಮತಗಳಿಂದ ಮುನ್ನಡೆಯಲ್ಲಿದ್ದಾರೆ. ಕಾಂಗ್ರೆಸ್ ನ ಮನ್ಸೂರ್ ಅಲಿ ಖಾನ್-105617 ಮತಗಳನ್ನ ಗಳಿಸಿದ್ದು, ಬಿಜೆಪಿಯ ಪಿ.ಸಿ. ಮೋಹನ್-101799 ಮತಗಳನ್ನ ಪಡೆದಿದ್ದಾರೆ.
* ಸಮಯ 10: ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಮತ ಎಣಿಕೆಯಲ್ಲಿ ಬಿಜೆಪಿಯ ಪಿ.ಸಿ. ಮೋಹನ್ ಅವರು 1862 ಮತಗಳಿಂದ ಮುನ್ನಡೆಯಲ್ಲಿದ್ದಾರೆ. ಬಿಜೆಪಿ ಅಭ್ಯರ್ಥಿ ಪಿ.ಸಿ. ಮೋಹನ್ 67573 ಮತಗಳಿಂದ ಮುನ್ನಡೆಯಲ್ಲಿದ್ದಾರೆ ಕಾಂಗ್ರೆಸ್ ನ ಮನ್ಸೂರ್ ಅಲಿ ಖಾನ್ 65711 ಮತಗಳನ್ನ ಪಡೆದಿದ್ದಾರೆ.
* ಸಮಯ 9;30: ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪಿ ಸಿ ಮೋಹನ್ ಅವರು 27993 ಮತಗಳನ್ನ ಪಡೆದಿದ್ರೆ, ಕಾಂಗ್ರೆಸ್ ಅಭ್ಯರ್ಥಿ 25010 ಮತಗಳನ್ನ ಪಡೆದಿದ್ದಾರೆ.
* ಸಮಯ 9;20: ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪಿ ಸಿ ಮೋಹನ್ ಅವರು 403 ಮತಗಳಿಂದ ಮುನ್ನಡೆಯನ್ನ ಕಾಯ್ದುಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಆಲಿ ಖಾನ್ ಹಾಗೂ ಪಿ ಸಿ ಮೋಹನ್ ನಡುವೆ ತೀವ್ರ ಜಟಾಪಟಿ ಏರ್ಪಟ್ಟಿದೆ.
* ಸಮಯ 08: ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಮತ ಎಣಿಕೆ ಆರಂಭವಾಗಲಿದೆ. ಮೊದಲು ಅಂಚೆ ಮತಗಳ ಎಣಿಕೆ ಕಾರ್ಯ ಆರಂಭವಾಗಿದ್ದು, ಆರಂಭದಲ್ಲೇ ಬಿಜೆಪಿ ಅಭ್ಯರ್ಥಿ ಪಿ ಸಿ ಮೋಹನ್ ಮುನ್ನಡೆಯನ್ನ ಕಾಯ್ದುಕೊಂಡಿದ್ದಾರೆ.












Click it and Unblock the Notifications