ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚೆನ್ನೈ-ಬೆಂಗಳೂರು ಸೂಪರ್ ಫಾಸ್ಟ್‌ ರೈಲು ಮೈಸೂರು ವರೆಗೆ ವಿಸ್ತರಣೆ

|
Google Oneindia Kannada News

ಬೆಂಗಳೂರು, ಡಿಸೆಂಬರ್ 27: ಚೆನ್ನೈ-ಬೆಂಗಳೂರು ಸೂಪರ್ ಫಾಸ್ಟ್ ರೈಲು ಇನ್ನುಮುಂದೆ ಮೈಸೂರಿನ ವರೆಗೂ ಚಲಿಸಲಿದೆ. ಹಾಗೆಯೇ ಈಗಾಗಲೇ ಮೈಸೂರು-ಬೆಂಗಳೂರು ನಡುವೆ ಸಂಚರಿಸುತ್ತಿರುವ ಮೂರು ರೈಲುಗಳ ಸೇವೆಯನ್ನು ಮೈಸೂರಿನ ಯಲಹಂಕ, ವೈಟ್‌ಫೀಲ್ಡ್‌ವರೆಗೆ ವಿಸ್ತರಿಸುವ ಭರವಸೆಯನ್ನು ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯೆಲ್ ನೀಡಿದ್ದಾರೆ.

ಸಾಂಸ್ಕೃತಿಕ ನಗರಿ ಮೈಸೂರು ಪ್ರವಾಸೋದ್ಯಮ ಅಭಿವೃದ್ಧಿ ದೃಷ್ಟಿಯಿಂದ ಪ್ರವಾಸಿಗರಿಗೆ ಅನುಕೂಲವಾಗಲು ಚೆನ್ನೈ-ಬೆಂಗಳೂರು ಸೂಪರ್ ಫಾಸ್ಟ್ ಎಕ್ಸ್‌ಪ್ರೆಸ್‌ನ್ನು ಮೈಸೂರಿನ ವರೆಗೂ ವಿಸ್ತರಿಸುವಂತೆ ತಿಳಿಸಲಾಗಿದೆ.

Bengaluru-chennai express train get extension to Mysuru

ಹುಬ್ಬಳ್ಳಿ : ಜೋಡಿಹಳಿ ಕಾಮಗಾರಿಗಾಗಿ ಹಲವು ರೈಲು ಸಂಚಾರ ರದ್ದು ಹುಬ್ಬಳ್ಳಿ : ಜೋಡಿಹಳಿ ಕಾಮಗಾರಿಗಾಗಿ ಹಲವು ರೈಲು ಸಂಚಾರ ರದ್ದು

ಅಲ್ಲದೆ ಈಗಾಗಲೇ ಓಡಾಡುತ್ತಿರುವ ಮೈಸೂರು-ಬೆಂಗಳೂರು ನಡುವೆ ಸಂಚರಿಸುತ್ತಿರುವ ವಿಶ್ವಮಾನವ ಎಕ್ಸ್‌ಪ್ರೆಸ್, ಚಾಮುಂಡಿ, ಟಿಪ್ಪು ಸೂಪರ್ ಫಾಸ್ಟ್ ಎಕ್ಸ್‌ಪ್ರೆಸ್ ಗಳನ್ನು ಯಲಹಂಕ, ವೈಟ್‌ಫೀಲ್ಡ್‌ವರೆಗೆ ವಿಸ್ತರಿಸಬೇಕು ಎಂದು ಸಂಸದ ಪ್ರತಾಪ್ ಸಿಂಹ ಪಿಯುಷ್ ಗೋಯೆಲ್ ಬಳಿ ಮನವಿ ಮಾಡಿದ್ದಾರೆ.

English summary
Bengaluru-chennai express train get extension to Mysuru, and Tippu and Chamundi should be extended to Yelahanka , Whitefield at Bengaluru end.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X