Bengaluru-Chennai Expressway: ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ ವೇ ಉದ್ಘಾಟನೆ ಬಗ್ಗೆ ಮತ್ತೊಂದು ಮಹತ್ವದ ಅಪ್ಡೇಟ್

Bengaluru-Chennai Expressway: ಬಹುನಿರೀಕ್ಷಿತ ಎಕ್ಸ್‌ಪ್ರೆಸ್‌ ವೇಗಳಲ್ಲಿ ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ ವೇ ಕೂಡ ಒಂದಾಗಿದೆ. ಈ ಹೆದ್ದಾರಿ ಇದೇ ವರ್ಷ ಲೋಕಾರ್ಪಣೆಯಾಗಲಿದೆ ಎಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಇತ್ತೀಚೆಗಷ್ಟೇ ತಿಳಿಸಿತ್ತು. ಇದೀಗ ಉದ್ಘಾಟನೆ ದಿನಾಂಕವನ್ನು ಮತ್ತೆ ಮುಂದೂಡಿಕೆ ಮಾಡಲಾಗಿದೆ. ಹಾಗಾದ್ರೆ ಯಾವಾಗ ಹಾಗೂ ಕಾರಣ ಏನು ಎನ್ನವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ ವೇ ಕರ್ನಾಟಕ ಭಾಗದಲ್ಲಿ ಈಗಾಗಲೇ ಕಾಮಗಾರಿ ಸಂಪೂರ್ಣವಾಗಿ ಮುಕ್ತಾಯ ಆಗಿದ್ದು, ವಾಹನ ಸಂಚಾರಕ್ಕೆ ಮುಕ್ತವಾಗಿದೆ. ಆಂಧ್ರಪ್ರದೇಶ ಹಾಗೂ ತಮಿಳುನಾಡಿನ ಭಾಗದಲ್ಲಿ ಮಾತ್ರ ಕಾಮಗಾರಿ ಬಾಕಿ ಉಳಿದಿದೆ. ಆದ್ದರಿಂದ ಇದೇ ವರ್ಷ ಉದ್ಘಾನೆ ಆಗಬೇಕಿದ್ದ ದಿನಾಂಕ ಮತ್ತೆ ಮುಂದೂಡಿಕೆಯಾಗಿದೆ.

Bengaluru-Chennai Expressway Inauguration Date Postponed Again

ಬೆಂಗಳೂರು-ಚೆನ್ನೈ ನಡುವೆ ಸಂಪರ್ಕ ಕಲ್ಪಿಸುವ ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇ ಯೋಜನೆ ಈ ವರ್ಷ ಲೋಕಾರ್ಪಣೆ ಆಗುವುದಿಲ್ಲ. ಈಗಿನ ನಿರೀಕ್ಷೆಯಂತೆ ಜೂನ್‌ 2026ರಲ್ಲಿ ಪೂರ್ಣಗೊಳ್ಳುವ ಸಾಧ್ಯತೆಗಳಿವೆ. ಆರಂಭದಲ್ಲಿ ಭಾರತ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಈ ವರ್ಷದ ಆಗಸ್ಟ್‌ ವೇಳೆಗೆ ಸಂಚಾರಕ್ಕೆ ಮುಕ್ತಗೊಳಿಸುವ ಭರವಸೆ ನೀಡಿತ್ತು. ನಿರ್ಮಾಣ ವಿಳಂಬ ಆಗುತ್ತಿರುವ ಹಿನ್ನೆಲೆ ಈ ಗಡುವು ಮತ್ತೆ ಮುಂದಿನ ವರ್ಷಕ್ಕೆ ಮುಂದೂಡಿಕೆ ಮಾಡಲಾಗಿದೆ.

260 ಕಿಲೋ ಮೀಟರ್ ಉದ್ದದ ಈ ಎಕ್ಟ್‌ಪ್ರೆಸ್‌ವೇನ ರ್ನಾಟಕದ ವ್ಯಾಪ್ತಿಗೆ ಒಳಪಡುವ 71 ಕಿಲೋ ಮೀಟರ್‌ ಸಂಪೂರ್ಣ ಕಾಮಗಾರಿ ಮುಕ್ತಾಯ ಆಗಿದ್ದು, ವಾಹನಗಳ ಸಂವಾರಕ್ಕೂ ಮುಕ್ರವಾಗಿದೆ. ಕಳೆದ ವರ್ಷವೇ ಅನೌಪಚಾರಿಕವಾಗಿ ಸಂಚಾರಕ್ಕೆ ತೆರೆಯಲಾಗಿದೆ. ಹೊಸಕೋಟೆಯ ಇಂಟರ್ ಚೇಂಜ್‌ನಿಂದ ಆರಂಭ ಆಗುವ ಎಕ್ಸ್‌ಪ್ರೆಸ್ ವೇ ಇದಾಗಿದ್ದು, ಸದ್ಯ ಹೊಸಕೋಟೆ ಸ್ಯಾಟ್ ಲೈಟ್ ರಿಂಗ್ ರಸ್ತೆಯಿಂದ ಆಂಧ್ರ ಗಡಿ ಸುಂದರಪಾಳ್ಯವರೆಗೆ ಸಂಚಾರಕ್ಕೆ ರಸ್ತೆ ಸಿದ್ದವಾಗಿದೆ. ಈ ರಸ್ತೆಯಲ್ಲಿ ವೇಗದ ಮಿತಿಯನ್ನು 100 ಕಿಲೋ ಮೀಟರ್‌ಗೆ ಸೀಮಿತ ಮಾಡಲಾಗಿದೆ.

ಆಂಧ್ರಪ್ರದೇಶ, ತಮಿಳುನಾಡು ಭಾಗದಲ್ಲಿ ಎಕ್ಸ್‌ಪ್ರೆಸ್‌ ಹೈವೇ ಕಾಮಗಾರಿ ಪ್ರಗತಿಯಲ್ಲಿದೆ. ಈ ಎಕ್ಸ್‌ಪ್ರೆಸ್‌ ವೇಗೆ ಕರ್ನಾಟಕದಲ್ಲಿ ಮಾಲೂರು, ಬಂಗಾರಪೇಟೆ ಮತ್ತು ಆಂಧ್ರ ಗಡಿ ಸುಂದರ ಪಾಳ್ಯದಲ್ಲಿ ಮೂರು ಇಂಟರ್ ಚೇಂಜ್‌ಗಳಿವೆ. ಸಂಪೂರ್ಣ ಕಾಮಗಾರಿ‌ ಮುಕ್ತಾಯದ ನಂತರ ಟೋಲ್ ಸಂಗ್ರಹಿಸಲಾಗುತ್ತದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಇತ್ತೀಚೆಗಷ್ಟೇ ತಿಳಿಸಿತ್ತು.

ಸರ್ವೀಸ್ ರಸ್ತೆಗಳಿಂದ ಅಪಘಾತಗಳು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ ವೇನಲ್ಲಿ ಸರ್ವೀಸ್ ರಸ್ತೆಗಳನ್ನು ನಿರ್ಮಾಣ ಮಾಡಿಲ್ಲ. ಯಾವುದೇ ಅಡಚಣೆಗಳು ಇಲ್ಲದೆ, ಚೆನ್ನೈವರೆಗೆ ಈ ರಸ್ತೆಯಲ್ಲಿ ಪ್ರಯಾಣ ಮಾಡಬಹುದು. ಬೇರೆ ಹೆದ್ದಾರಿಗಳಿಗೆ ಹೋಲಿಕೆ ಮಾಡಿದರೆ, ಈ ರಸ್ತೆಯ ಟೋಲ್‌ ಶುಲ್ಕ ಸಹ ಅಧಿಕ ಆಗಿರುವ ಸಾಧ್ಯತೆಯಿದೆ.

₹17,900 ಕೋಟಿ ರೂಪಾಯಿ ವೆಚ್ಚದ ಈ ಯೋಜನೆಯಿಂದ ಬೆಂಗಳೂರು-ಚೆನ್ನೈ ನಡುವಿನ ಪ್ರಯಾಣ ಸಮಯ ಕಡಿಮೆ ಆಗಲಿದೆ. ಜೊತೆಗೆ ಇಂಧನ ಉಳಿತಾಯವೂ ಆಗಲಿದೆ. ಇದು ಪೂರ್ಣಗೊಂದರೆ ಬೆಂಗಳೂರು ಮತ್ತು ಚೆನ್ನೈ ನಡುವಿನ ಪ್ರಯಾಣದ ಸಮಯ 7 ಗಂಟೆಗಳಿಂದ ಕೇವಲ 3 ಗಂಟೆಗೆ ಇಳಿಕೆಯಾಗಲಿದೆ. ಆದ್ದರಿಂದ ಗ್ರೀನ್‌ ಫೀಲ್ಡ್‌ ಯೋಜನೆ ಎಂದೇ ಈ ಯೋಜನೆ ಎಂದು ಕರೆಯಲಾಗುತ್ತಿದೆ. ರಾಜ್ಯದ ಹೊಸಕೋಟೆಯಿಂದ ತಮಿಳುನಾಡಿನ ಶ್ರೀಪೆರಂಬದೂರುವರೆಗಿನ ಕೈಗಾರಿಕಾ ಕಾರಿಡಾರ್‌ ಸಹ ಅಭಿವೃದ್ಧಿ ಆಗಲಿದೆ.

ಯಾವೆಲ್ಲಾ ಮಾರ್ಗಗಳಲ್ಲಿ ಹಾದು ಹೋಗಲಿದೆ?: ಹೊಸಕೋಟೆ, ಮುಳಬಾಗಲು, ಚಿತ್ತೂರು, ರಾಣಿಪೇಟೆ, ವಾಲಾಜಪೇಟೆ, ಶ್ರೀಪೆರಂಬದೂರು, ಪೊನ್ನಮಲ್ಲೆ, ಕೋಯಂಬೆಡು ಮೂಲಕ ಹಾದುಹೋಗಲಿದೆ. ಈ ಹೆದ್ದಾರಿ ಬೆಂಗಳೂರಿನ ಹೊರವಲಯದಲ್ಲಿರುವ ಹೊಸಕೋಟೆಯಿಂದ ಆರಂಭವಾಗಿ ಮಾಲೂರು, ಬಂಗಾರಪೇಟೆ, ಕೋಲಾರ, ಪಲಮನೇರ್, ಚಿತ್ತೂರು, ರಾಣಿಪೇಟೆ ಪಟ್ಟಣಗಳ ಮೂಲಕ ಸಾಗಲಿದ್ದು, ತಮಿಳುನಾಡಿನ ಕಾಂಚೀಪುರಂ ಜಿಲ್ಲೆಯ ಶ್ರೀಪೆರಂಬದೂರಿನಲ್ಲಿ ಕೊನೆಗೊಳ್ಳಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+