Bengaluru–Chennai Expressway: ಕರ್ನಾಟಕದ ಭಾಗದಲ್ಲಿ ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ ವೇ ಸಂಚಾರಕ್ಕೆ ಮುಕ್ತ; ಎಲ್ಲೆಲ್ಲಿ?

Bengaluru-Chennai Expressway: ದೇಶಾದ್ಯಂತ ಹಲವು ಎಕ್ಸ್‌ಪ್ರೆಸ್‌ ವೇಗಳ ಕಾಮಗಾರಿ ನಡೆಯುತ್ತಿವೆ. ಇನ್ನು ಕೆಲವು ಈಗಾಗಲೇ ಸಂಚಾರಕ್ಕೆ ಮುಕ್ತವಾಗಿದ್ದು, ಈ ಸಾಲಿಗೆ ಇದೀಗ ಬಹುನಿರೀಕ್ಷಿತ 260 ಕಿಲೋ ಮೀಟರ್ ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ ವೇ ಕೂಡ ಸೇರಿದೆ. ಹಾಗದರ ಈ ಹೆದ್ದಾರಿ ಇದೀಗ ಯಾವ್ಯಾವ ನಗರಗಳಲ್ಲಿ ಸಂಚಾರಕ್ಕೆ ಮುಕ್ತವಾಗಿದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ,

ದೇಶದ ಪ್ರಮುಖ ನಗರಗಳ ನಡುವೆ ಸಂಪರ್ಕ ಕಲ್ಪಿಸುವ ಬೆಂಗಳೂರು-ಚೆನ್ನೈ ಹೆದ್ದಾರಿ ಮಾರ್ಗದ ಕರ್ನಾಟಕ ಭಾಗದಲ್ಲಿ ಕಾಮಗಾರಿ ಪೂರ್ಣ ಆಗಿದ್ದು, ಸಂಚಾರಕ್ಕೆ ಮುಕ್ತವಾಗಿದೆ. ಇದನ್ನು ಲಾಂಗ್ ಡ್ರೈವ್‌ ಮತ್ತು ಜಾಲಿ ರೈಡ್‌ಗಳಿಗೆ ಬಳಕೆ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ. ಈಗಾಗಲೇ ಇಲ್ಲಿನ ಸ್ಥಳೀಯರು ಇದನ್ನು ಬಳಕೆ ಮಾಡುತ್ತಿದ್ಧಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

Bengaluru Chennai Expressway Opens for Vehicles In Karnataka s These Parts Know details

ಆದರೆ ಆಂಧ್ರಪ್ರದೇಶ ಮತ್ತು ತಮಿಳುನಾಡಿನಲ್ಲಿ ಹೆದ್ದಾರಿ ಕಾಮಗಾರಿ ಇನ್ನೂ ಪೂರ್ಣವಾಗಿಲ್ಲ. 60 ಕಿಲೋ ಮೀಟರ್‌ ಎಕ್ಸ್‌ಪ್ರೆಸ್‌ ವೇ ಕಾಮಗಾರಿ ಆಗಸ್ಟ್ 2025ರ ವೇಳೆಗೆ ಸಂಪೂರ್ಣ ಕಾರ್ಯನಿರ್ವಹಿಸಲಿದೆ ಎನ್ನುವ ಭರವಸೆಯನ್ನು ಹೆದ್ದಾರಿ ಪ್ರಧಿಕಾರ ತಿಳಿಸಿದೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಹಾಗಾದರೆ ಇದರ ಒಟ್ಟು ಉದ್ದ ಹಾಗೂ ತಗಲಿದ ವೆಚ್ಚದ ಮಾಹಿತಿಯನ್ನು ಇಲ್ಲಿ ಗಮನಿಸಿ.

ಕರ್ನಾಟಕದಲ್ಲಿ ಈ 71 ಕಿಲೋ ಮೀಟರ್ ಹೆದ್ಧಾರಿ ಸಂಚಾರಕ್ಕೆ ಮುಕ್ತವಾಗಿದ್ದು, ಎಕ್ಸ್‌ಪ್ರೆಸ್‌ವೇ ಸುತ್ತಮುತ್ತಲಿನ ಸ್ಥಳೀಯರು ಮತ್ತು ರಸ್ತೆಯ ಕೊನೆಯವರೆಗೆ ಮತ್ತು ಹಿಂತಿರುಗುವವರೆಗೆ ಲಾಂಗ್ ಡ್ರೈವ್‌ಗೆ ಈ ದ್ದಾರಿಯನ್ನು ಬಳಕೆ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ. ಹೊಸಕೋಟೆ ಸಮೀಪದ ಜಿನ್ನಾಗೇರಾ ಕ್ರಾಸ್‌ನಲ್ಲಿರುವ ದೇವಸ್ಥಾನದಿಂದ ಕಾಮಗಾರಿ ನಿಧಾನಗತಿಯಲ್ಲಿ ಸಾಗಿತ್ತು. ಬಳಿಕ ದೇವಸ್ಥಾನ ಸ್ಥಳಾಂತರಿಸಲಾಗಿದ್ದು, 400 ಮೀಟರ್ ಉದ್ದದ ಕಾಮಗಾರಿ ಇದೀಗ ಮುಕ್ತಯವಾಗಿದೆ. ಕೆಲವು ಸಣ್ಣಪುಟ್ಟ ಕಾಮಗಾರಿಗಳನ್ನ ಹೊರತುಪಡಿಸಿದರೆ ರಸ್ತೆಯು ಸಂಚಾರಕ್ಕೆ ಮುಕ್ತವಾಗಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿ ತಿಳಿಸಿದ್ದಾರೆ.

ಈ ಎಕ್ಸ್‌ಪ್ರೆಸ್‌ವೇ ಮಾಲೂರು, ಬಂಗಾರಪೇಟೆ ಮತ್ತು ಬೇತಮಂಗಲದಲ್ಲಿ ನಿರ್ಗಮನ ಕೇಂದ್ರಗಳನ್ನು ಹೊಂದಿದೆ. ಸಂಪೂರ್ಣ ವಿಸ್ತರಣೆ ಇನ್ನೂ ಪೂರ್ಣಗೊಳ್ಳದ ಹಿನ್ನೆಲೆ ನಾವು ಯಾವುದೇ ಟೋಲ್ ಶುಲ್ಕವನ್ನು ಸಂಗ್ರಹ ಮಾಡುತ್ತಿಲ್ಲ. ಸ್ಥಳೀಯರು ಮತ್ತು ಲಾಂಗ್ ಡ್ರೈವ್‌ಗಳಿಗೆ ಹೋಗುವವರು ಬಳಕೆ ಮಾಡುತ್ತಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅದರಲ್ಲೂ ದಕ್ಷಿಣ ಭಾರತದ ಎರಡು ಪ್ರಮುಖ ನಗರಗಳಾದ ಬೆಂಗಳೂರು-ಚೆನ್ನೈ ನಡುವಿನ ಎಕ್ಸ್‌ಪ್ರೆಸ್‌ ವೇ ಹೆದ್ದಾರಿ ಈ ಹಿಂದೆ ಇದ್ದ ನಗರಗಳ ಅಂತರವನ್ನು 350-288 ಕಿಲೋ ಮೀಟರ್‌ಗೆ ಇಳಿಕೆ ಮಾಡುತಿದೆ. ಕರ್ನಾಟಕ, ಆಂಧ್ರಪ್ರದೇಶ ಮತ್ತು ತಮಿಳುನಾಡು ಈ ಮೂರು ರಾಜ್ಯಗಳ ಮೂಲಕ ಹಾದುಹೋಗುವ ಎಕ್ಸ್‌ಪ್ರೆಸ್‌ವೇಯಲ್ಲಿ ಗಂಟೆಗೆ ಗರಿಷ್ಠ 120 ಕಿಲೋ ಮೀಟರ್‌ ವೇಗದ ಮಿತಿಯನ್ನು ನಿಗದಿಪಡಿಸಲಾಗಿದೆ. ಅಲ್ಲದೆ, ಬೆಂಗಳೂರು ಮತ್ತು ಚೆನ್ನೈ ನಡುವಿನ ಪ್ರಯಾಣದ ಸಮಯವನ್ನು ಮೊದಲು 6 ಗಂಟೆಗಳಿಗಿಂತ ಹೆಚ್ಚು ತೆಗೆದುಕೊಳ್ಳುತ್ತಿತ್ತು. ಇದೀಗ ಈ ಹೆದ್ದಾರಿಯಿಂದ 3 ಗಂಟೆ ಪ್ರಯಾಣದ ಸಂತ ಕಡಿತವಾಗಲಿದೆ.

ಈ ಎಕ್ಸ್‌ಪ್ರೆಸ್‌ವೇಯನ್ನು ಕರ್ನಾಟಕದಲ್ಲಿ ಮೂರು ಪ್ಯಾಕೇಜ್‌ಗಳಾಗಿ ವಿಂಗಡನೆ ಮಾಡಲಾಗಿದೆ. ಮೊದಲ ಪ್ಯಾಕೇಜ್ ಹೊಸಕೋಟೆ-ಮಾಲೂರು ನಡುವೆ 27.1 ಕಿಲೋ ಮೀಟರ್, ಎರಡನೇಯದಾಗು ಮಾಲೂರು-ಬಂಗಾರಪೇಟೆ 27.1 ಕಿಲೋ ಮೀಟರ್ ಮತ್ತು ಮೂರನೇಯದಾಗಿ ಬಂಗಾರಪೇಟೆ-ಬೇತಮಂಗಲ ನಡುವೆ 17.5 ಕಿಲೋ ಮೀಟರ್‌ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+