ಕರ್ನಾಟಕದ ಯಾವ ನಗರಗಳಲ್ಲಿ ಹಾದು ಹೋಗಲಿದೆ ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇ? ಇದರಿಂದ ಯಾರಿಗೆಲ್ಲ ಲಾಭ?

Bengaluru-Chennai Expressway: ಬಹುನಿರೀಕ್ಷಿತ ಚೆನ್ನೈ-ಬೆಂಗಳೂರು ಎಕ್ಸ್‌ಪ್ರೆಸ್‌ವೇ ಕರ್ನಾಟಕ ಭಾಗದಲ್ಲಿ ಬಹುತೇಕ ಪೂರ್ಣವಾಗಿದೆ. ಅಲ್ಲದೆ, ವಾಹನ ಸಂಚಾರಕ್ಕೂ ಮುಕ್ತವಾಗಿದೆ. ಇದು 2024ರಲ್ಲಿ ಉದ್ಘಾಟನೆಯಾಗಬೇಕಿತ್ತು. ಆದರೆ, ಕಾರಣಾಂತರಗಳಿಂದ ಉದ್ಘಾಟನೆ ದಿನಾಂಕ 2025ಕ್ಕೆ ಮುಂದೂಡಿಕೆಯಾಯಿತು. ಹಾಗಾದರೆ ಈ ಹೆದ್ದಾರಿ ಕರ್ನಾಟಕದ ಯಾವೆಲ್ಲಾ ಜಿಲ್ಲೆಗಳ ಮೇಲೆ ಹಾದು ಹೋಗಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದ ಗಮನಿಸಿ.

ದೇಶದ ಪ್ರಮುಖ ನಗರಗಳ ನಡುವೆ ಸಂಪರ್ಕ ಕಲ್ಪಿಸುವ 260 ಕಿಲೋ ಮೀಟರ್ ಉದ್ದದ ಬೆಂಗಳೂರು-ಚೆನ್ನೈ ಹೆದ್ದಾರಿ ಮಾರ್ಗದ ಕರ್ನಾಟಕ ಭಾಗದಲ್ಲಿ ಕಾಮಗಾರಿ ಪೂರ್ಣ ಆಗಿದ್ದು, ಸಂಚಾರಕ್ಕೆ ಮುಕ್ತವಾಗಿದೆ. ಇದನ್ನು ಲಾಂಗ್ ಡ್ರೈವ್‌ ಮತ್ತು ಜಾಲಿ ರೈಡ್‌ಗಳಿಗೆ ಬಳಕೆ ಮಾಡಲಾಗುತ್ತದೆ. ಈಗಾಗಲೇ ಇಲ್ಲಿನ ಸ್ಥಳೀಯರು ಇದನ್ನು ಬಳಕೆ ಮಾಡುತ್ತಿದ್ಧಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

Bengaluru-Chennai Expressway Will Pass in Karnataka s Which Major Cities

ಆದರೆ ಆಂಧ್ರಪ್ರದೇಶ ಮತ್ತು ತಮಿಳುನಾಡಿನಲ್ಲಿ ಹೆದ್ದಾರಿ ಕಾಮಗಾರಿ ಇನ್ನೂ ಪೂರ್ಣವಾಗಿಲ್ಲ. 60 ಕಿಲೋ ಮೀಟರ್‌ ಎಕ್ಸ್‌ಪ್ರೆಸ್‌ ವೇ ಕಾಮಗಾರಿ ಆಗಸ್ಟ್ 2025ರ ವೇಳೆಗೆ ಸಂಪೂರ್ಣ ಕಾರ್ಯನಿರ್ವಹಿಸಲಿದೆ ಎನ್ನುವ ಭರವಸೆಯನ್ನು ಹೆದ್ದಾರಿ ಪ್ರಧಿಕಾರ ಇತ್ತೀಗಷ್ಟೇ ತಿಳಿಸಿಯತ್ತು.

ಕರ್ನಾಟಕದಲ್ಲಿ ಈ 71 ಕಿಲೋ ಮೀಟರ್ ಹೆದ್ಧಾರಿ ಸಂಚಾರಕ್ಕೆ ಮುಕ್ತವಾಗಿದ್ದು, ಎಕ್ಸ್‌ಪ್ರೆಸ್‌ವೇ ಸುತ್ತಮುತ್ತಲಿನ ಸ್ಥಳೀಯರು ಮತ್ತು ರಸ್ತೆಯ ಕೊನೆಯವರೆಗೆ ಮತ್ತು ಹಿಂತಿರುಗುವವರೆಗೆ ಲಾಂಗ್ ಡ್ರೈವ್‌ಗೆ ಈ ದ್ದಾರಿಯನ್ನು ಬಳಕೆ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ.

ಹೊಸಕೋಟೆ ಸಮೀಪದ ಜಿನ್ನಾಗೇರಾ ಕ್ರಾಸ್‌ನಲ್ಲಿರುವ ದೇವಸ್ಥಾನದಿಂದ ಕಾಮಗಾರಿ ನಿಧಾನಗತಿಯಲ್ಲಿ ಸಾಗಿತ್ತು. ಬಳಿಕ ದೇವಸ್ಥಾನ ಸ್ಥಳಾಂತರಿಸಲಾಗಿದ್ದು, 400 ಮೀಟರ್ ಉದ್ದದ ಕಾಮಗಾರಿ ಇದೀಗ ಮುಕ್ತಯವಾಗಿದೆ. ಕೆಲವು ಸಣ್ಣ-ಪುಟ್ಟ ಕಾಮಗಾರಿಗಳನ್ನ ಹೊರತುಪಡಿಸಿದರೆ ರಸ್ತೆಯು ಸಂಚಾರಕ್ಕೆ ಮುಕ್ತವಾಗಿದೆ ಎನ್ನುವ ಮಾಹಿತಿ ಇದೆ.

ಈ ಎಕ್ಸ್‌ಪ್ರೆಸ್‌ವೇ ಮಾಲೂರು, ಬಂಗಾರಪೇಟೆ ಮತ್ತು ಬೇತಮಂಗಲದಲ್ಲಿ ನಿರ್ಗಮನ ಕೇಂದ್ರಗಳನ್ನು ಹೊಂದಿದೆ. ಸಂಪೂರ್ಣ ವಿಸ್ತರಣೆ ಇನ್ನೂ ಪೂರ್ಣಗೊಳ್ಳದ ಹಿನ್ನೆಲೆ ನಾವು ಯಾವುದೇ ಟೋಲ್ ಶುಲ್ಕವನ್ನು ಸಂಗ್ರಹ ಮಾಡುತ್ತಿಲ್ಲ. ಸ್ಥಳೀಯರು ಮತ್ತು ಲಾಂಗ್ ಡ್ರೈವ್‌ಗಳಿಗೆ ಹೋಗುವವರು ಬಳಕೆ ಮಾಡುತ್ತಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದೆ.

ಪ್ರಯಾಣದ ಸಮಯ ಕಡಿತ: ಅದರಲ್ಲೂ ದಕ್ಷಿಣ ಭಾರತದ ಎರಡು ಪ್ರಮುಖ ನಗರಗಳಾದ ಬೆಂಗಳೂರು-ಚೆನ್ನೈ ನಡುವಿನ ಎಕ್ಸ್‌ಪ್ರೆಸ್‌ ವೇ ಹೆದ್ದಾರಿ ಈ ಹಿಂದೆ ಇದ್ದ ಈ ನಗರಗಳ ಅಂತರವನ್ನು 350-288 ಕಿಲೋ ಮೀಟರ್‌ಗೆ ಇಳಿಕೆ ಮಾಡುತಿದೆ. ಕರ್ನಾಟಕ, ಆಂಧ್ರಪ್ರದೇಶ ಮತ್ತು ತಮಿಳುನಾಡು ಈ ಮೂರು ರಾಜ್ಯಗಳ ಮೂಲಕ ಹಾದುಹೋಗುವ ಎಕ್ಸ್‌ಪ್ರೆಸ್‌ವೇಯಲ್ಲಿ ಗಂಟೆಗೆ ಗರಿಷ್ಠ 120 ಕಿಲೋ ಮೀಟರ್‌ ವೇಗದ ಮಿತಿಯನ್ನು ನಿಗದಿಪಡಿಸಲಾಗಿದೆ.

ಅಲ್ಲದೆ, ಬೆಂಗಳೂರು ಮತ್ತು ಚೆನ್ನೈ ನಡುವಿನ ಪ್ರಯಾಣದ ಸಮಯವನ್ನು ಮೊದಲು 6 ಗಂಟೆಗಳಿಗಿಂತ ಹೆಚ್ಚು ತೆಗೆದುಕೊಳ್ಳುತ್ತಿತ್ತು. ಇದೀಗ ಈ ಹೆದ್ದಾರಿಯಿಂದ 3 ಗಂಟೆ ಪ್ರಯಾಣದ ಸಮಯ ಕಡಿತ ಆಗಲಿದೆ. ಈ ಎಕ್ಸ್‌ಪ್ರೆಸ್‌ವೇ ಅನ್ನು ಕರ್ನಾಟಕದಲ್ಲಿ ಮೂರು ಪ್ಯಾಕೇಜ್‌ಗಳಾಗಿ ವಿಂಗಡನೆ ಮಾಡಲಾಗಿದೆ.

* ಮೊದಲ ಪ್ಯಾಕೇಜ್ ಹೊಸಕೋಟೆ-ಮಾಲೂರು ನಡುವೆ 27.1 ಕಿಲೋ ಮೀಟರ್, ಎರಡನೇಯದಾಗಿ ಮಾಲೂರು-ಬಂಗಾರಪೇಟೆ 27.1 ಕಿಲೋ ಮೀಟರ್ ಮತ್ತು ಮೂರನೇಯದಾಗಿ ಬಂಗಾರಪೇಟೆ-ಬೇತಮಂಗಲ ನಡುವೆ 17.5 ಕಿಲೋ ಮೀಟರ್‌ ಇದೆ.

ಯಾವೆಲ್ಲಾ ಮಾರ್ಗಗಳಲ್ಲಿ ಹಾದು ಹೋಗಲಿದೆ?: ಇದು ಹೊಸಕೋಟೆ, ಮುಳಬಾಗಲು, ಚಿತ್ತೂರು, ರಾಣಿಪೇಟೆ, ವಾಲಾಜಪೇಟೆ, ಶ್ರೀಪೆರಂಬದೂರು, ಪೊನ್ನಮಲ್ಲೆ, ಕೋಯಂಬೆಡು ಮೂಲಕ ಹಾದುಹೋಗಲಿದೆ. ಈ ಹೆದ್ದಾರಿ ಬೆಂಗಳೂರಿನ ಹೊರವಲಯದಲ್ಲಿರುವ ಹೊಸಕೋಟೆಯಿಂದ ಆರಂಭವಾಗಿ ಮಾಲೂರು, ಬಂಗಾರಪೇಟೆ, ಕೋಲಾರ, ಪಲಮನೇರ್, ಚಿತ್ತೂರು, ರಾಣಿಪೇಟೆ ಪಟ್ಟಣಗಳ ಮೂಲಕ ಸಾಗಲಿದ್ದು, ತಮಿಳುನಾಡಿನ ಕಾಂಚೀಪುರಂ ಜಿಲ್ಲೆಯ ಶ್ರೀಪೆರಂಬದೂರಿನಲ್ಲಿ ಕೊನೆಗೊಳ್ಳಲಿದೆ.

ಯಾವೆಲ್ಲಾ ನಗರಗಳಿಗೆ ಸಂಪರ್ಕ?

* ಹೊಸಕೋಟೆ - ಕರ್ನಾಟಕ
* ಮಾಲೂರು - ಕರ್ನಾಟಕ
* ವಿ ಕೋಟಾ - ಆಂಧ್ರ ಪ್ರದೇಶ
* ಪಲಮನೇರ್ - ಆಂಧ್ರಪ್ರದೇಶ
* ಗುಡಿಯಾತಂ - ತಮಿಳುನಾಡು
* ಅರಕ್ಕೋಣಂ - ತಮಿಳುನಾಡು
* ಶ್ರೀಪೆರಂಬದೂರ್ - ತಮಿಳುನಾಡು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+