ಬೆಂಗಳೂರು ಚಿನ್ನಸ್ವಾಮಿ ಕಾಲ್ತುಳಿತ ದುರಂತ: ಸಿಎಂ ಸಿದ್ದರಾಮಯ್ಯ ವಿರುದ್ಧವೂ ದೂರು ದಾಖಲು
CM Siddaramaiah: ಐಪಿಎಲ್ 2025 ಫೈನಲ್ ಪಂದ್ಯದಲ್ಲಿ ಆರ್‌ಸಿಬಿಯು ಪಂಜಾಬ್ ಕಿಂಗ್ಸ್ ವಿರುದ್ಧ ಗೆದ್ದು 17 ವರ್ಷಗಳ ಬಳಿಕ ಮೊದಲ ಬಾರಿ ಟ್ರೋಫಿಯನ್ನು ತನ್ನದಾಗಿಸಿಕೊಂಡಿತು. ಈ ಹಿನ್ನೆಲೆ ಬುಧವಾರ ಬೆಂಗಳೂರಿನಲ್ಲಿ ವಿಜಯೋತ್ಸವ ಆಯೋಜಿಸಲಾಗಿತ್ತು. ಈ ವೇಳೆ ಎಂ.ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಸಂಭವಿಸಿ 11 ಮಂದಿ ಜೀವ ಕಳೆದುಕೊಂಡಿದ್ದರು. ಘಟನೆ ಸಂಬಂಧ ಈಗಾಗಲೇ ಆರ್‌ಸಿಬಿ, ಕೆಎಸ್‌ಸಿಎ, ಕೊಹ್ಲಿ ವಿರುದ್ಧ ದೂರು ದಾಖಲಾಗಿತ್ತು. ಇದೀಗ ಸಿಎಂ ಸಿದ್ದರಾಮಯ್ಯ ಮೇಲೂ ರಾಜ್ಯಪಾಲರ ಬಳಿ ದೂರು ನೀಡಿದ್ದಾರೆ.
ಬೆಂಗಳೂರು ಕೊಟ್ಟಿಗೆಪಾಳ್ಯದ ನಿವಾಸಿ ಗಿರೀಶ್ ಕುಮಾರ್ ಎಂಬುವವರು ಸುದೀರ್ಘ ಪತ್ರದೊಂದಿಗೆ ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ವಿಜಯೋತ್ಸವಕ್ಕೆ ಸಾರ್ವಜನಿಕರನ್ನು ಸ್ವತಃ ಮುಖ್ಯಮಂತ್ರಿಗಳೇ ಆಹ್ವಾನ ನೀಡಿದ್ದಾಋಎ. ಸರಿಯಾದ ವ್ಯವಸ್ಥೆ ಮಾಡದೇ, ನಿರ್ಲಕ್ಷ್ಯ ವಹಿಸಿದ ಕಾರಣ ಕಾಲ್ತುಳಿತ ಸಂಭವಿಸಿ ಅಮಾಯಕರು ಜೀವ ಕಳೆದುಕೊಂಡಿದ್ದಾರೆ. ಈ ಹಿನ್ನೆಲೆ ಸೂಕ್ತ ಕ್ರಮ ಜರುಗಿಸುವಂತೆ ದೂರಿನಲ್ಲಿ ಮನವಿ ಮಾಡಿದ್ದಾರೆ.

18ನೇ ಸೀಸನ್ ಐಪಿಎಲ್‌ನಲ್ಲಿ ಮೊಟ್ಟ ಮೊದಲ ಬಾರಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಟ್ರೋಫಿ ಗೆದ್ದುಕೊಂಡಿದೆ. ಆದರೆ, ರಾಷ್ಟ್ರ, ರಾಜ್ಯಕ್ಕಾಗಿ ಆಡಿ ಪದಕ ಪಡೆದ ಅನೇಕರಿದ್ದಾರೆ. ಈ ಮಟ್ಟದಲ್ಲಿ ಸರ್ಕಾರಗಳಲ್ಲಿ ಆದ್ಯತೆ ಕೊಟ್ಟಿರುವುದಿಲ್ಲ. ಯುದ್ಧದಲ್ಲಿ ಹೋರಾಡಿ ವೀರ ಮರಣ ಹೊಂದಿದ ಯೋಧರ ಮನೆಗೂ ಭೇಟಿ ಕೋಡಲು ಆಸಕ್ತಿ ತೋರಲ್ಲ. ಆದರೆ ಈ ತಂಡಕ್ಕೆ ಸ್ವಾಗತ ಕೋರಿರುವುದು ಎಷ್ಟರ ಮಟ್ಟಿದೆ ಸರಿ? ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಅಮಾಯಕರ ಸಾವಿಗೆ ಕಾರಣರಾದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ತಿಳಿಸಿದ್ದಾರೆ.
ಐಪಿಎಲ್ ಟ್ರೋಫಿ ಗೆದ್ದ ತಂಡಗಳು
* 2025 - ಅಹಮದಬಾದ್‌ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪಂಜಾಬ್ ವಿರುದ್ಧ ಗೆಲುವು ಸಾಧಿಸಿತು.
* 2024 - ಕೊಲ್ಕತ್ತಾ ನೈಟ್ ರೈಡರ್ಸ್ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಗೆಲುವು.
* 2023 - ಚೆನ್ನೈ ಸೂಪರ್ ಕಿಂಗ್ಸ್ ಗುಜರಾತ್ ಟೈಟಾನ್ಸ್ ವಿರುದ್ಧ ಗೆಲುವು.
* 2022 - ರಾಜಸ್ಥಾನ್ ರಾಯಲ್ಸ್ ವಿರುದ್ಧ ಗುಜರಾತ್ ಟೈಟಾನ್ಸ್ ಗೆಲುವು.
* 2021 - ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆಲುವು.
* 2020 - ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಗೆಲುವು.
* 2019 - ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಗೆಲುವು.
* 2018 - ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆಲುವು.
* 2017 - ರೈಸಿಂಗ್ ಪುಣೆ ಸೂಪರ್ ಜೈಂಟ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಗೆಲುವು.
* 2016 - ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಸನ್ ರೈಸರ್ಸ್ ಹೈದರಾಬಾದ್ ಗೆಲುವು.
* 2015 - ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಗೆಲುವು.
* 2014 - ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ಕೊಲ್ಕತ್ತಾ ನೈಟ್ ರೈಡರ್ಸ್ ಗೆಲುವು.
* 2013 - ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಗೆಲುವು.
* 2012 - ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಕೊಲ್ಕತ್ತಾ ನೈಟ್ ರೈಡರ್ಸ್ ಗೆಲುವು.
* 2011 - ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆಲುವು.
* 2010 - ಮುಂಬೈ ಇಂಡಿಯನ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆಲುವು.
* 2009 - ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಡೆಕ್ಕನ್ ಚಾರ್ಜಸ್ ಗೆಲುವು.
* 2008 - ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆಲುವು.
ಯಾವ ತಂಡ ಎಷ್ಟು ಬಾರಿ ಗೆದ್ದಿದೆ?
* ಚೆನ್ನೈ ಸೂಪರ್ ಕಿಂಗ್ಸ್ - 5 (2010, 2011, 2018, 2021, 2023)
* ಮುಂಬೈ ಇಂಡಿಯನ್ಸ್ - 5 (2013, 2015, 2017, 2019, 2020)
* ಕೊಲ್ಕತ್ತ ನೈಟ್ ರೈಡರ್ಸ್ - 3 (2012, 2014, 2024)
* ಗುಜರಾತ್ ಟೈಟಾನ್ಸ್ - 1 (2022)
* ರಾಜಸ್ಥಾನ್ ರಾಯಲ್ಸ್ - 1 (2008)
* ಡೆಕ್ಕನ್ ಚಾರ್ಜಸ್ - 1 (2009)
* ಸನ್ ರೈಸರ್ಸ್ ಹೈದರಾಬಾದ್ - 1 (2016)
* ರಾಯಲ್ ಚಾಲೆಂಜರ್ಸ್ ಬೆಂಗಳೂರು - 1 (2025)
-
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
RCB Vs LSG: ಬೆಂಗಳೂರಿನಲ್ಲಿ ಆರ್‌ಸಿಬಿ-ಎಲ್ಎಸ್ಜಿ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
RCB Playing 11 Prediction: ಎಲ್ಎಸ್ಜಿ ವಿರುದ್ಧ ಆರ್‌ಸಿಬಿ ಪ್ಲೇಯಿಂಗ್ 11 ಭವಿಷ್ಯ -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಬೆಂಗಳೂರಲ್ಲಿ RCB ಪಂದ್ಯ: ಏ.15ರಂದು ಸ್ಟೇಡಿಯಂ ಸುತ್ತ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ -
ನಾಸೀರ್ ಅಹ್ಮದ್ ವಜಾ; ಪಕ್ಷದಲ್ಲಿ ಶಿಸ್ತಿಲ್ಲದಿದ್ದರೆ ಕ್ರಮ ಎಂದ ಡಿಕೆ ಶಿವಕುಮಾರ್ -
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ.












Click it and Unblock the Notifications