ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಫೆ.10ರಿಂದ 6 ತಿಂಗಳು ಬೆಂಗ್ಳೂರಿನ ಚರ್ಚ್ ಸ್ಟ್ರೀಟ್ ರಸ್ತೆ ಬಂದ್

ಬೆಂಗಳೂರಿನ ಚರ್ಚ್ ಸ್ಟ್ರೀಟ್ ರಸ್ತೆ ಸಂಪೂರ್ಣವಾಗಿ ಹಾಳಾಗಿರುವುದ್ದರಿಂದ ಬಿಬಿಎಂಪಿ ಹೊಸ ರಸ್ತೆ ನಿರ್ಮಾಣ ಮಾಡಲು ಮುಂದಾಗಿದೆ. ಆದ್ದರಿಂದ ಫೆ.10ರಿಂದ 6ತಿಂಗಳು ಕಾಲ ರಸ್ತಯಲ್ಲಿ ಸಂಚಾರವನ್ನು ನಿಷೇಧಿಸಲಾಗಿದೆ.

By Ramesh
|
Google Oneindia Kannada News

ಬೆಂಗಳೂರು, ಫೆಬ್ರವರಿ. 09 : ಉದ್ಯಾನ ನಗರಿ ಬೆಂಗಳೂರಿನ ಪ್ರಮುಖ ರಸ್ತೆ ಚರ್ಚ್ ಸ್ಟ್ರೀಟ್ ನಲ್ಲಿ 6 ತಿಂಗಳ ಕಾಲ ವಾಹನ ಸಂಚಾರ ಬಂದ್ ಆಗಲಿದೆ. ರಸ್ತೆ ಅಭಿವೃದ್ಧಿಯ ಹಿನ್ನಲೆಯಲ್ಲಿ ಫೆಬ್ರವರಿ 10ರಿಂದ ವಾಹನ ಸಂಚಾರ ನಿಷೇಧಿಸಲಾಗಿದೆ.

ಚರ್ಚ್ ಸ್ಟ್ರೀಟ್ ರಸ್ತೆಯ ಡಾಂಬರ್ ಕಿತ್ತುಹೋಗಿ ಸಂಪೂರ್ಣವಾಗಿ ಹದಗೆಟ್ಟಿದೆ. ತಾತ್ಕಾಲಿಕ ಕಾಮಗಾರಿ ಮೂಲಕ ಅದನ್ನು ಸರಿಪಡಿಸಿದರೂ ಮತ್ತೆ ಹಾಳಾಗಿದೆ. ಆದ್ದರಿಂದ, ಹೊಸ ರಸ್ತೆ ಮತ್ತು ಫುಟ್ ಪಾತ್ ನಿರ್ಮಾಣ ಮಾಡಲು ಬಿಬಿಎಂಪಿ ಮುಂದಾಗಿದೆ.

Bengaluru Church Street to remain closed six months from february 10

ಎಂ.ಜಿ.ರೋಡ್, ಬ್ರಿಗೇಡ್ ರೋಡ್ ನಲ್ಲಿ ವಾಹನ ದಟ್ಟಣೆ ಹೆಚ್ಚಿದೆ. ಆದ್ದರಿಂದ, ವಾಹನ ಸವಾರರು ಚರ್ಚ್ ಸ್ಟ್ರೀಟ್ ಮೂಲಕ ಹಾದು ಹೋಗುತ್ತಿದ್ದಾರೆ. ರಸ್ತೆ ಹಾಳಾಗಿರುವುದರಿಂದ ಸವಾರರು ಕಷ್ಟಪಡುತ್ತಿದ್ದಾರೆ. ಹೀಗಾಗಿ ಬಿಬಿಎಂಪಿ ಹೊಸ ರಸ್ತೆ ನಿರ್ಮಾಣ ಮಾಡುತ್ತಿದೆ.

'ಚರ್ಚ್ ಸ್ಟ್ರೀಟ್ ನಲ್ಲಿ ಸಾಗುವ ವಾಹನಗಳ ಸಂಚಾರಕ್ಕೆ ಪರ್ಯಾಯ ಮಾರ್ಗ ಕಲ್ಪಿಸಿ' ಎಂದು ಬಿಬಿಎಂಪಿ ಅಧಿಕಾರಿಗಳು ಪೂರ್ವ ಸಂಚಾರ ವಿಭಾಗದ ಡಿಸಿಪಿ ಅಭಿಷೇಕ್ ಗೋಯಲ್ ಅವರಿಗೆ ಪತ್ರ ಬರೆದಿದ್ದರು. ಇದರಿಂದ ಕಾಮಗಾರಿ ಆರಂಭಿಸಲು ಅವರು ಅನುಮತಿ ನೀಡಿದ್ದಾರೆ.

English summary
The Bengaluru Church Street road remain closed six months for redevelopment work. The road closed from february 10.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X