ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚುನಾವಣೆ ದೂರು ಸಲಹೆ: ಸಹಾಯವಾಣಿ, ದೂರು ನಿರ್ವಹಣಾ ಕೇಂದ್ರ

|
Google Oneindia Kannada News

ಬೆಂಗಳೂರು, ಮಾರ್ಚ್ 30: ಚುನಾವಣೆ ಮತ್ತು ನೀತಿ ಉಲ್ಲಂಘನೆಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ದೂರು, ಸಲಹೆ-ಸೂಚನೆಗಳನ್ನು ಸ್ವೀಕರಿಸಲು ನಗರ ಜಿಲ್ಲಾಡಳಿತವು ಸಹಾಯವಾಣಿ ಮತ್ತು ದೂರು ನಿರ್ವಹಣಾ ಕೇಂದ್ರವನ್ನು ಗುರುವಾರ ಆರಂಭಿಸಿದೆ.

ಜಿಲ್ಲಾಡಳಿತ ಕಚೇರಿ ಆವರಣದಲ್ಲಿ ಸ್ಥಾಪಿಸಲಾಗಿರುವ ಸಹಾಯವಾಣಿ ಮತ್ತು ದೂರು ನಿರ್ವಹಣಾ ಕೇಂದ್ರಕ್ಕೆ ಚಾಲನೆ ನೀಡಿ ಮಾತನಾಡಿದ ಜಿಲ್ಲಾಧಿಕಾರಿ ಕೆ.ಎ.ದಯಾನಂದ್ ಅವರು, ನಗರ ಜಿಲ್ಲಾಡಳಿತದ ವ್ಯಾಪ್ತಿಗೆ 7ವಿಧಾನಸಭಾ ಕ್ಷೇತ್ರಗಳು ಬರಲಿವೆ. ಈ ಕ್ಷೇತ್ರಗಳಲ್ಲಿನ ಜನರು ನೀತಿ ಸಂಹಿತೆ ಉಲ್ಲಂಘನೆ ಮತ್ತು ಚುನಾವಣೆಗೆ ಸಂಬಂಧಿಸಿದ ಯಾವುದೇ ದೂರುಗಳನ್ನು ಕರೆ ಮಾಡಿ ತಿಳಿಸಬಹುದು. ದೂರು ಅಥವಾ ಮಾಹಿತಿ ನೀಡಿದವರ ಹೆಸರನ್ನು ಗೌಪ್ಯವಾಗಿಡಲಾಗುವುದು. ಸಹಾಯವಾಣಿಯು ದಿನದ 24ಗಂಟೆಯೂ ಕಾರ್ಯ ನಿರ್ವಹಿಸಲಿದೆ.

Bengaluru citizen can call about poll related grievances

ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಯಲಹಂಕ, ಬ್ಯಾಟರಾಯನಪುರ, ಮಹದೇವಪುರ, ಬೆಂಗಳೂರು ದಕ್ಷಿಣ, ಯಶವಂತಪುರ, ದಾಸರಹಳ್ಳಿ ಕ್ಷೇತ್ರಗಳು ಜಿಲ್ಲಾಡಳಿತದ ವ್ಯಾಪ್ತಿಯಲ್ಲಿ ಬರಲಿವೆ. ಈ ಕ್ಷೇತ್ರಗಳಲ್ಲಿ 20 ಮತಗಟ್ಟೆಗಳಿಗೆ ಒಬ್ಬರು ಸೆಕ್ಟರ್ ಅಧಿಕಾರಿಯನ್ನು ನೇಮಿಸಲಾಗಿದೆ. ಕಳೆದೆರೆಡು ದಿನಗಳಲ್ಲಿ ಶೇ.99ರಷ್ಟು ಫ್ಲೆಕ್ಸ್, ಬ್ಯಾನರ್ ಗಳನ್ನು ತೆರವುಗೊಳಿಸಲಾಗಿದೆ. ಸಹಾಯವಾಣಿ ಸಂಖ್ಯೆ-18004250138/080-2221157 ಕರೆಮಾಡಬಹುದು.

English summary
Election officer Bengaluru has opened a call centre for poll related grievances of Bengaluru urban district and citizens can call round the clock regarding any poll related issues and complaints.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X