• search
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬೆಂಗಳೂರು ಸೈಬರ್ ಕ್ರೈಂ ಪೊಲೀಸ್ ಠಾಣೆ ಹೇಗಿದೆ ಗೊತ್ತಾ?

|

ಬೆಂಗಳೂರು, ಅಕ್ಟೋಬರ್ 20 : ಐಟಿ ಸಿಟಿ ಬೆಂಗಳೂರಿನಲ್ಲಿ ಸೈಬರ್ ಕ್ರೈಂ ಪೊಲೀಸ್ ಠಾಣೆ ಆರಂಭವಾಗಿದೆ. ಗೃಹ ಸಚಿವರ ಸಲಹೆಗಾರ ಕೆಂಪಯ್ಯ ಹಾಗೂ ಪೊಲೀಸ್‌ ಮಹಾನಿರ್ದೇಶಕ (ಡಿಜಿಪಿ) ಓಂ ಪ್ರಕಾಶ್‌ ಅವರು ಸೋಮವಾರ ಪೊಲೀಸ್ ಠಾಣೆಯನ್ನು ಉದ್ಘಾಟಿಸಿದ್ದಾರೆ.

ಇಷ್ಟು ದಿನ ಸಿಐಡಿ ಸೈಬರ್ ಕ್ರೈಂ ವಿಭಾಗ ಬೆಂಗಳೂರು ನಗರದಲ್ಲಿ ದಾಖಲಾಗುವ ಸೈಬರ್ ಕ್ರೈಂ ದೂರುಗಳ ಪ್ರಕರಣಗಳ ತನಿಖೆಯನ್ನು ನಡೆಸುತ್ತಿತ್ತು. ನಗರದ ಯಾವುದೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾದ ತಕ್ಷಣ ಅದನ್ನು ಸಿಐಡಿ ವಿಭಾಗಕ್ಕೆ ಹಸ್ತಾಂತರ ಮಾಡಲಾಗುತ್ತಿತ್ತು. [ಸೈಬರ್ ಕ್ರೈಂ ಅಪರಾಧಕ್ಕೆ 2 ವರ್ಷ ಜೈಲು]

ಸದ್ಯ, ನಗರದಲ್ಲಿ ನೂತನ ಸೈಬರ್ ಕ್ರೈಂ ಪೊಲೀಸ್ ಠಾಣೆ ಆರಂಭವಾಗಿದೆ. ಇನ್‌ಫೆಂಟ್ರಿ ರಸ್ತೆಯಲ್ಲಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿ ಆವರಣದಲ್ಲಿಯೇ ಬೆಂಗಳೂರು ನಗರ ಮತ್ತು ಕೇಂದ್ರ ವಲಯದ ನೂತನ ಸೈಬರ್ ಕ್ರೈಂ ಪೊಲೀಸ್ ಠಾಣೆಯನ್ನು ಸ್ಥಾಪನೆ ಮಾಡಲಾಗಿದೆ. [ಸಿಲಿಕಾನ್ ಸಿಟಿ ಬೆಂಗಳೂರು ಈಗ 'ಸೈಬರ್ ಕ್ರೈಂ' ರಾಜಧಾನಿ]

ಈ ಠಾಣೆಯಲ್ಲಿ ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ತುಮಕೂರು ಜಿಲ್ಲಾ ವ್ಯಾಪ್ತಿಯಲ್ಲಿನ ಸೈಬರ್ ಕ್ರೈಂ ದೂರುಗಳ ತನಿಖೆಯನ್ನು ನಡೆಸಲಾಗುತ್ತದೆ. ಸಿಐಡಿ ಅಧೀನದಲ್ಲಿ ರಾಜ್ಯದ ಐದು ಕೇಂದ್ರ ವಲಯಗಳಾದ ಮೈಸೂರು, ಕಲಬುರ್ಗಿ, ದಾವಣಗೆರೆ, ಧಾರವಾಡ ಹಾಗೂ ಮಂಗಳೂರಿನಲ್ಲಿ ಈಗಾಗಲೇ ಸೈಬರ್ ಕ್ರೈಂ ಠಾಣೆಗಳು ಕಾರ್ಯನಿರ್ವಹಣೆ ಮಾಡುತ್ತಿವೆ.

ಸೈಬರ್ ಕ್ರೈಂ ಪೊಲೀಸ್ ಠಾಣೆ ಉದ್ಘಾಟನೆ

ಸೈಬರ್ ಕ್ರೈಂ ಪೊಲೀಸ್ ಠಾಣೆ ಉದ್ಘಾಟನೆ

ಬೆಂಗಳೂರು ನಗರ ಮತ್ತು ಕೇಂದ್ರ ವಲಯದ ನೂತನ ಸೈಬರ್ ಕ್ರೈಂ ಪೊಲೀಸ್ ಠಾಣೆಯನ್ನು ಗೃಹ ಸಚಿವರ ಸಲಹೆಗಾರ ಕೆಂಪಯ್ಯ ಹಾಗೂ ಪೊಲೀಸ್‌ ಮಹಾನಿರ್ದೇಶಕ (ಡಿಜಿಪಿ) ಓಂ ಪ್ರಕಾಶ್‌ ಅವರು ಸೋಮವಾರ ಉದ್ಘಾಟಿಸಿದ್ದಾರೆ.

ಎಲ್ಲಿದೆ ಸೈಬರ್ ಕ್ರೈಂ ಪೊಲೀಸ್ ಠಾಣೆ?

ಎಲ್ಲಿದೆ ಸೈಬರ್ ಕ್ರೈಂ ಪೊಲೀಸ್ ಠಾಣೆ?

ಇನ್‌ಫೆಂಟ್ರಿ ರಸ್ತೆಯಲ್ಲಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿ ಆವರಣದಲ್ಲಿಯೇ ಬೆಂಗಳೂರು ನಗರ ಮತ್ತು ಕೇಂದ್ರ ವಲಯದ ನೂತನ ಸೈಬರ್ ಕ್ರೈಂ ಪೊಲೀಸ್ ಠಾಣೆಯನ್ನು ಸ್ಥಾಪನೆ ಮಾಡಲಾಗಿದೆ.

ಯಾವ ದೂರು ದಾಖಲಿಸಬಹುದು?

ಯಾವ ದೂರು ದಾಖಲಿಸಬಹುದು?

'ಈ ಠಾಣೆಯಲ್ಲಿ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಅನ್ವಯ ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗುತ್ತದೆ. ಡೆಬಿಟ್ ಕಾರ್ಡ್‌ ಮತ್ತು ಕ್ರೆಡಿಟ್‌ ಕಾರ್ಡ್‌ಗಳಿಗೆ ಸಂಬಂಧಿಸಿದಂತೆ ರೂ 1 ಲಕ್ಷ ಹಾಗೂ ರೂ 5 ಲಕ್ಷ ಮೀರಿದ ಆನ್‌ಲೈನ್‌ ವಂಚನೆಗೆ ಸಂಬಂಧಿಸಿದ ದೂರುಗಳನ್ನು ಸಾರ್ವಜನಿಕರು ನೀಡಬಹುದಾಗಿದೆ; ಎಂದು ಡಿಜಿಪಿ ಓಂ ಪ್ರಕಾಶ್‌ ಹೇಳಿದರು.

ಪ್ರಕರಣಗಳ ವರ್ಗಾವಣೆ

ಪ್ರಕರಣಗಳ ವರ್ಗಾವಣೆ

ಬೆಂಗಳೂರು ನಗರ ಪೊಲೀಸ್ ಆಯುಕ್ತ ಎನ್‌.ಎಸ್‌. ಮೇಘರಿಕ್ ಅವರು, 'ನಗರದ ಇತರ ಠಾಣೆಗಳಲ್ಲಿ ಈಗಾಗಲೇ ಆನ್‌ಲೈನ್‌ ವಂಚನೆಗೆ ಸಂಬಂಧಿಸಿದಂತೆ ಪ್ರಕರಣಗಳು ದಾಖಲಾಗಿವೆ. ಇವುಗಳ ತನಿಖೆ ಪ್ರಗತಿಯ ಆಧಾರದ ಮೇಲೆ, ನೂತನ ಠಾಣೆಗೆ ವರ್ಗಾಯಿಸಬೇಕೇ? ಬೇಡವೇ? ಎಂಬುದನ್ನು ಠಾಣಾಧಿಕಾರಿಗಳು ನಿರ್ಧರಿಸುತ್ತಾರೆ' ಎಂದು ಹೇಳಿದ್ದಾರೆ.

'ಎಚ್ಚರಿಕೆಯಿಂದ ವ್ಯವಹಾರ ನಡೆಸಿ'

'ಎಚ್ಚರಿಕೆಯಿಂದ ವ್ಯವಹಾರ ನಡೆಸಿ'

'ಬೆಂಗಳೂರು ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಆನ್‌ಲೈನ್ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿವೆ. ಆದ್ದರಿಂದ ಎಚ್ಚರಿಕೆಯಿಂದ ವ್ಯವಹಾರ ನಡೆಸಿ' ಎಂದು ಡಿಜಿಪಿ ಓಂ ಪ್ರಕಾಶ್‌ ಜನರಿಗೆ ಕಿವಿಮಾತು ಹೇಳಿದರು.

ವಿವಿಧ ಜಿಲ್ಲೆಗಳ ದೂರು ಸ್ವೀಕಾರ

ವಿವಿಧ ಜಿಲ್ಲೆಗಳ ದೂರು ಸ್ವೀಕಾರ

ಈ ಠಾಣೆಯಲ್ಲಿ ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ತುಮಕೂರು ಜಿಲ್ಲಾ ವ್ಯಾಪ್ತಿಯಲ್ಲಿನ ಸೈಬರ್ ಕ್ರೈಂ ದೂರುಗಳ ತನಿಖೆಯನ್ನು ನಡೆಸಲಾಗುತ್ತದೆ.

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

ಇನ್ನಷ್ಟು ಬೆಂಗಳೂರು ಸುದ್ದಿಗಳುView All

English summary
Bengaluru : Cyber crime police station has been set up at the Bengaluru police commissioner office at Infantry road. DG&IGP Om Prakash inaugurated it on Monday, October 19, 2015.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

Notification Settings X
Time Settings
Done
Clear Notification X
Do you want to clear all the notifications from your inbox?
Settings X
X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more