ಬೆಂಗಳೂರು ನಗರ ಘಟಕ ಕಾನ್‌ಸ್ಟೇಬಲ್ ಹುದ್ದೆಗಳಿಗೆ ಜನವರಿ 27ರಂದು ಲಿಖಿತ ಪರೀಕ್ಷೆ
ಬೆಂಗಳೂರು, ಜನವರಿ 22: ಬೆಂಗಳೂರು ನಗರ ಪೊಲೀಸ್ ಘಟಕದಲ್ಲಿ ಖಾಲಿ ಇರುವ ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ (ಪುರುಷ ಮತ್ತು ಮಹಿಳೆ) ಹುದ್ದೆಗಳಿಗೆ ಜನವರಿ 27 ರಂದು ಲಿಖಿತ ಪರೀಕ್ಷೆ ನಡೆಯಲಿದೆ.
64 ಪರೀಕ್ಷಾ ಕೇಂದ್ರಗಳಲ್ಲಿ ಬೆಳಿಗ್ಗೆ 10:30 ರಿಂದ 12 ರವರೆಗೆ ಪರೀಕ್ಷೆ ನಡೆಯಲಿದ್ದು, 41,220 ಮಂದಿ ಅಭ್ಯರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ. ಇಲಾಖೆಯ ವೆಬ್‌ಸೈಟ್‌ನಲ್ಲಿ ಪರೀಕ್ಷೆ ಬಗ್ಗೆ ಮಾಹಿತಿ ನೀಡಲಾಗಿದೆ. ಪರೀಕ್ಷಾ ಪತ್ರವನ್ನು ಸಹ ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.
ಕಾನ್‌ಸ್ಟೇಬಲ್ ಪರೀಕ್ಷಾ ಪ್ರಶ್ನೆ ಪತ್ರಿಕೆ ಬಹಿರಂಗದ ಬಳಿಕ ನಡೆಯುತ್ತಿರುವ ಮೊದಲ ಪೊಲೀಸ್ ಇಲಾಖೆ ಪರೀಕ್ಷೆ ಇದಾಗಿದೆ. ಪ್ರಶ್ನೆ ಪತ್ರಿಕೆ ಬಹಿರಂಗವಾಗದ ಎಚ್ಚರಿಕೆ ವಹಿಸಲಾಗಿದೆ.

ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ್ದ ಕಿಂಗ್‌ಪಿನ್ ಶಿವಕುಮಾರ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಒಟ್ಟು 116 ಆರೋಪಿಗಳನ್ನು ನವೆಂಬರ್ 25ರಂದು ಬಂಧಿಸಿ, ಪ್ರಶ್ನೆ ಪತ್ರಿಕೆ, ಹಣವನ್ನು ವಶಕ್ಕೆ ಪಡೆದುಕೊಳ್ಳಲಾಗಿತ್ತು.












Click it and Unblock the Notifications