ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರು ನಗರದಲ್ಲಿ 2 ಸಾವಿರ ವೈ-ಫೈ ಸ್ಟಾಟ್ ಸ್ಥಾಪನೆ

By Gururaj
|
Google Oneindia Kannada News

ಬೆಂಗಳೂರು, ಆಗಸ್ಟ್ 10 : ಬೆಂಗಳೂರು ನಗರದಲ್ಲಿ ಮೂರು ತಿಂಗಳಿನಲ್ಲಿ 2 ಸಾವಿರ ವೈ-ಫೈ ಸ್ಪಾಟ್‌ಗಳನ್ನು ಸ್ಥಾಪನೆ ಮಾಡಲಾಗುತ್ತದೆ. ಸಾರ್ವಜನಿಕ ಸ್ಥಳದಲ್ಲಿ ಇನ್ನು ಮುಂದೆ ಉಚಿತವಾಗಿ ಇಂಟರ್‌ ನೆಟ್ ಸೌಲಭ್ಯ ಪಡೆಯಬಹುದಾಗಿದೆ.

ಐಟಿ-ಬಿಟಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತಾ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. ನಮ್ಮ ಮೆಟ್ರೋ ನಿಲ್ದಾಣ, ಮಾಲ್, ಬಿಎಂಟಿಸಿ ಬಸ್ ನಿಲ್ದಣ ಸೇರಿದಂತೆ ಸಾರ್ವಜನಿಕ ಪ್ರದೇಶದಲ್ಲಿ ವೈ-ಫೈ ಹಾಟ್ ಸ್ಪಾಟ್ ನಿರ್ಮಾಣ ಮಾಡಲಾಗುತ್ತಿದೆ.

ಬಿಬಿಎಂಪಿ ಶಾಲೆ, ಕಾಲೇಜುಗಳಿಗೆ ಉಚಿತ ವೈ-ಫೈ ಸೌಲಭ್ಯಬಿಬಿಎಂಪಿ ಶಾಲೆ, ಕಾಲೇಜುಗಳಿಗೆ ಉಚಿತ ವೈ-ಫೈ ಸೌಲಭ್ಯ

'ಬೆಂಗಳೂರು ನಗರದಲ್ಲಿ ಈಗಾಗಲೇ 2 ಸಾವಿರ ಸ್ಥಳಗಳನ್ನು ಗುರುತಿಸಲಾಗಿದ್ದು, ವೈ-ಫೈ ಸೌಲಭ್ಯ ಒದಗಿಸಲು ಟೆಂಡರ್ ಕರೆಯಲಾಗಿದೆ. ಮೂರು ತಿಂಗಳಿನಲ್ಲಿ ಈ ಪ್ರಕ್ರಿಯೆ ಪೂರ್ಣಗೊಂಡು ವೈ-ಫೈ ಸೇವೆ ಲಭ್ಯವಾಗಲಿದೆ' ಎಂದು ಗೌರವ್ ಗುಪ್ತಾ ಹೇಳಿದರು.

Bengaluru city will get 2 000 Wi-Fi hotspots soon

'ವೈ-ಫೈ ಸೌಲಭ್ಯ ಒದಗಿಸುವ ಸರ್ಕಾರದ ಚಿಂತನೆಗೆ ಕೆಲವು ಅಡೆ-ತಡೆಗಳು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ಎದುರಾಗಿತ್ತು. ಐಟಿ-ಬಿಟಿ ಸಚಿವ ಕೆ.ಜೆ.ಜಾರ್ಜ್ ಬಿಬಿಎಂಪಿ ಆಯುಕ್ತರ ಜೊತೆ ಮಾತನಾಡಿ ಇದ್ದ ತೊಡಕುಗಳನ್ನು ನಿವಾರಿಸಿದ್ದಾರೆ' ಎಂದರು.

ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಉಚಿತ ವೈ-ಫೈ ಸೌಲಭ್ಯ!ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಉಚಿತ ವೈ-ಫೈ ಸೌಲಭ್ಯ!

2017ರ ಟೆಲಿಕಾಂ ಪಾಲಿಸಿಯಂತೆ ಬಿಬಿಎಂಪಿ ಅನುಮತಿ ನೀಡಲಿದೆಯೇ? ಅಥವ ವೈ-ಫೈ ಸ್ಪಾಟ್ ನಿರ್ಮಾಣಕ್ಕೆ ಹೊಸ ಕಂಬಗಳನ್ನು ನಿಲ್ಲಿಸಬೇಕೆ? ಎಂಬ ಕುರಿತು ಇನ್ನೂ ಚರ್ಚೆಗಳು ನಡೆಯುತ್ತಿವೆ.

English summary
Bengaluru city will get 2,000 Wi-Fi hotspots in 3 months. Hotspots will come up in public places such as mall, Namma Metro station and BMTC bus stand.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X