ಬೆಂಗಳೂರು; ಹೊಸ ಕೋವಿಡ್ ಪ್ರಕರಣದಲ್ಲಿ ಭಾರೀ ಕುಸಿತ!

ಬೆಂಗಳೂರು, ಫೆಬ್ರವರಿ 02; ಜನವರಿ ತಿಂಗಳಿನಲ್ಲಿ ಬೆಂಗಳೂರು ನಗರದಲ್ಲಿ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾಗಿ ಆತಂಕ ಮೂಡಿಸಿತ್ತು. ಆದರೆ ಈಗ ನಗರದಲ್ಲಿ ಹೊಸ ಪ್ರಕರಣಗಳ ಸಂಖ್ಯೆ ಶೇ 78ರಷ್ಟು ಕುಸಿತವಾಗಿದೆ.

ಕೋವಿಡ್ 3ನೇ ಅಲೆ ದೂರವಾಯಿತು ಎಂದು ಜನರು ನಿಟ್ಟುಸಿರು ಬಿಡುವ ಹಂತಕ್ಕೆ ಕೋವಿಡ್ ಪ್ರಕರಣಗಳಲ್ಲಿ ಇಳಿಕೆಯಾಗಿದೆ. ಮಂಗಳವಾರದ ಹೆಲ್ತ್ ಬುಲೆಟಿನ್ ಪ್ರಕಾರ ಬೆಂಗಳೂರು ನಗರ ಜಿಲ್ಲೆಯ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ 6,685.

ಜನವರಿ 20ರಂದು ಬೆಂಗಳೂರು ನಗರದಲ್ಲಿ 30,540 ಹೊಸ ಕೋವಿಡ್ ಪ್ರಕರಣ ದಾಖಲಾಗಿತ್ತು. ಮಂಗಳವಾರದ ಬುಲೆಟಿನ್ ಪ್ರಕಾರ ನಗರದಲ್ಲಿ 80,210 ಪರೀಕ್ಷೆಗಳನ್ನು ನಡೆಸಲಾಗಿದೆ. ಪಾಸಿಟಿವಿಟಿ ದರ ಶೇ 8.3ಕ್ಕೆ ಇಳಿಕೆಯಾಗಿದೆ. ನಗರದ ಸಕ್ರಿಯ ಪ್ರಕರಣಗಳ ಸಂಖ್ಯೆ 105125 ಆಗಿದೆ.

Bengaluru City Witness Drop In Daily New Covid Cases

ಬಿಬಿಎಂಪಿಯ ವಿಶೇಷ ಆಯುಕ್ತ (ಆರೋಗ್ಯ) ಡಾ. ತ್ರಿಲೋಕ್ ಚಂದ್ರ ನಗರದಲ್ಲಿ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ ಎಂದು ಹೇಳಿದ್ದಾರೆ. ಒಂದು ವೇಳೆ ಜನರು ಕೋವಿಡ್ ಮಾರ್ಗಸೂಚಿ ಪಾಲನೆ ಮಾಡದಿದ್ದರೆ ಮತ್ತೆ ಪ್ರಕರಣಗಳು ಏರಿಕೆಯಾಗಲಿವೆ ಎಂದು ತಿಳಿಸಿದ್ದಾರೆ.

ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಜನವರಿ ತಿಂಗಳಿನಲ್ಲಿ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ ಅಧಿಕವಾದಾಗ ನೈಟ್, ವಾರಾಂತ್ಯದ ಕರ್ಫ್ಯೂ ಜಾರಿಗೊಳಿಸಲಾಯಿತು. ಇದರ ಪರಿಣಾಮ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದೆ ಎಂದು ಅಂದಾಜಿಸಲಾಗಿದೆ.

ಜನವರಿ 28ರ ಗೂಗಲ್ ಮೊಬೆಲಿಟಿ ಡೇಟಾ ಪ್ರಕಾರ ಬೆಂಗಳೂರಿನಲ್ಲಿ ಜನರು ಹೆಚ್ಚಾಗಿ ಗುಂಪು ಸೇರುವುದು ಕಡಿಮೆಯಾಗಿದೆ. ಸಮೂಹ ಸಾರಿಗೆ ಬಳಕೆ ಶೇ 23ರಷ್ಟು ಕುಸಿತವಾಗಿದೆ. ಪಾರ್ಕ್‌ಗಳಿಗೆ ಭೇಟಿ ನೀಡುವವರ ಸಂಖ್ಯೆ ಶೇ 36ರಷ್ಟು ಕುಸಿತಕಂಡಿದೆ.

ರಾಜ್ಯ ಕೋವಿಡ್ ಟಾಸ್ಕ್ ಫೋರ್ಸ್ ಸದಸ್ಯರಾದ ಡಾ. ಸಿ. ಎನ್. ಮಂಜುನಾಥ್ ನಗರದ ಕೋವಿಡ್ ಪರಿಸ್ಥಿತಿ ಬಗ್ಗೆ ಮಾತನಾಡಿದ್ದು, "ಈ ಅಲೆಯಲ್ಲಿ ಡಿಸೆಂಬರ್‌ನಲ್ಲಿ ಹೆಚ್ಚು ಪ್ರಕರಣಗಳು ಕಂಡುಬಂದು ಬಳಿಕ ಅಬ್ಬರ ತಗ್ಗಿದೆ. ದಕ್ಷಿಣ ಆಫ್ರಿಕಾ, ಮುಂಬೈ, ದೆಹಲಿಗಳಲ್ಲಿಯೂ ಇದೇ ರೀತಿ ಆಗಿದೆ" ಎಂದು ಹೇಳಿದ್ದಾರೆ.

ಮಂಗಳವಾರದ ಹೆಲ್ತ್ ಬುಲೆಟಿನ್‌ನಂತೆ ಕರ್ನಾಟಕದಲ್ಲಿ ಪತ್ತೆಯಾದ ಹೊಸ ಪ್ರಕರಣಗಳು ಕೇವಲ 14,366. ಸಕ್ರಿಯ ಪ್ರಕರಣಗಳ ಸಂಖ್ಯೆ 1,97,725 ಆಗಿದೆ. 24 ಗಂಟೆಯಲ್ಲಿ ರಾಜ್ಯದಲ್ಲಿ 60,914 ಜನರು ಡಿಸ್ಚಾರ್ಜ್ ಆಗಿದ್ದಾರೆ.

ಕೋವಿಡ್ ಕೇರ್ ಸೆಂಟರ್‌ಗೆ ಬೀಗ; ಬೆಂಗಳೂರು ನಗರದಲ್ಲಿ ಕೋವಿಡ್ ಪ್ರಕರಣಗಳ ಏರಿಕೆ ಆತಂಕ ಮೂಡಿಸಿತ್ತು. ಆಗ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹೋಂ ಐಸೋಲೇಷನ್ ವ್ಯವಸ್ಥೆ ಇಲ್ಲದವರು, ಸೋಂಕಿನ ಲಕ್ಷಣಗಳು ಇರುವ ಜನರಿಗೆ ಸಹಾಯಕವಾಗಲಿ ಎಂದು ಕೋವಿಡ್ ಕೇರ್‌ ಸೆಂಟರ್‌ಗಳಲ್ಲಿ ಬೆಡ್‌ಗಳ ಸಂಖ್ಯೆ ಹೆಚ್ಚಿಸಿತ್ತು.

ಸಾಮಾನ್ಯ, ಆಕ್ಸಿಜನ್ ವ್ಯವಸ್ಥೆ ಇರುವ ಬೆಡ್‌ಗಳನ್ನು ಹಾಕಲಾಗಿತ್ತು. ಆದರೆ ಕಳೆದ ವಾರದ ಬಿಬಿಎಂಪಿ ಮಾಹಿತಿಯಂತೆ ನಗರದಲ್ಲಿನ ಕೋವಿಡ್ ಕೇರ್‌ ಸೆಂಟರ್‌ಗಳಲ್ಲಿ 1687 ಹಾಸಿಗೆಗಳು ಲಭ್ಯವಿದೆ. ಇದರಲ್ಲಿ 69 ಬೆಡ್‌ಗಳಲ್ಲಿ ಮಾತ್ರ ಕೋವಿಡ್ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಸೆಂಟರ್‌ಗೆ ದಾಖಲಾಗುವ ರೋಗಿಗಳ ಸಂಖ್ಯೆ ಗಣನೀಯವಾಗಿ ಕುಸಿತ ಕಂಡಿದೆ.

ನಗರದ ಕೋವಿಡ್ ಕೇರ್ ಸೆಂಟರ್‌ಗಳ ಸಂಖ್ಯೆಯನ್ನು 18 ರಿಂದ 9ಕ್ಕೆ ಇಳಿಕೆ ಮಾಡಲಾಗಿದೆ. ನಗರದಲ್ಲಿನ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ ನೋಡಿಕೊಂಡು ಇದನ್ನು ಇನ್ನೂ ಇಳಿಕೆ ಮಾಡಲಾಗುತ್ತದೆ ಎಂದು ಬಿಬಿಎಂಪಿ ಅಧಿಕಾರಿಗಳು ಹೇಳಿದ್ದಾರೆ. ಕೋವಿಡ್ ಕೇರ್ ಸೆಂಟರ್‌ಗಳಲ್ಲಿ ನಿಯೋಜನೆಗೊಂಡಿದ್ದ ಸಿಬ್ಬಂದಿಗಳನ್ನು ಲಸಿಕೆ ನೀಡುವುದು ಸೇರಿದಂತೆ ಇತರ ಕಾರ್ಯಗಳಿಗೆ ನಿಯೋಜನೆ ಮಾಡಲಾಗುತ್ತಿದೆ.

ಬೆಂಗಳೂರು ನಗರದಲ್ಲಿ ಶೇ 19ರಷ್ಟು ಜನರು ಇನ್ನೂ 2ನೇ ಡೋಸ್ ಲಸಿಕೆ ಪಡೆದಿಲ್ಲ. ಇವರನ್ನು ಪತ್ತೆ ಹಚ್ಚಿ ಲಸಿಕೆ ನೀಡುವ ಕಾರ್ಯವನ್ನು ಬಿಬಿಎಂಪಿ ಆರಂಭಿಸಲಿದೆ. ಮುಂದಿನ 10 ದಿನಗಳಲ್ಲಿ ಈ ಕಾರ್ಯವನ್ನು ಪೂರ್ಣಗೊಳಿಸುವ ಗುರಿ ಪಾಲಿಕೆಯದ್ದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+