Bengaluru: ಮನೆ-ಮನೆ ಕಸ ಸಂಗ್ರಹಕ್ಕೆ ತಂತ್ರಜ್ಞಾನದ ಟಚ್; 138 ಆಟೋಗಳಿಗೆ GPS ಅಳವಡಿಕೆ

ಬೆಂಗಳೂರು: ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯ ಮನೆ-ಮನೆ ತ್ಯಾಜ್ಯ ಸಂಗ್ರಹಣೆಗೆ ಬಳಸಲಾಗುವ ಸುಮಾರು 138 ಆಟೋ ಟಿಪ್ಪರ್ ಗಳಿಗೆ ಜಿ.ಪಿ.ಎಸ್ ಸಾಧನಗಳನ್ನು ಅಳವಡಿಸುವ ಕಾರ್ಯಕ್ಕೆ ಬೆಂಗಳೂರು ಕೇಂದ್ರ ನಗರ ಪಾಲಿಕೆ ವತಿಯಿಂದ ಇಂದು ಶುಕ್ರವಾರ ಚಾಲನೆ ನೀಡಲಾಯಿತು.

ಬೆಂಗಳೂರು ಕೇಂದ್ರ ನಗರ ಪಾಲಿಕೆ ಆಯುಕ್ತ ಜಗದೀಶ್ ಹಾಗೂ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಲಿಮಿಟೆಡ್ (BSWML) ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕರಿಗೌಡ ಅವರ ಮಾರ್ಗದರ್ಶನದಂತೆ ಕೇಂದ್ರ ನಗರ ಪಾಲಿಕೆಯ ವಲಯದ ಜಂಟಿ ಆಯುಕ್ತ ರಂಗನಾಥ್. ಕೆ ರವರ ನೇತೃತ್ವದಲ್ಲಿ ಟ್ರ್ಯಾಕಿಂಗ್ ಪೈಲಟ್ ಯೋಜನೆಗೆ ಚಾಲನೆ ನೀಡಲಾಗಿದೆ. ತ್ಯಾಜ್ಯ ಸಂಗ್ರಹಣಾ ವಾಹನಗಳ ಕಾರ್ಯ ನಿರ್ವಹಣೆಯನ್ನು ತಂತ್ರಜ್ಞಾನ ಆಧಾರಿತವಾಗಿ ಮೇಲ್ವಿಚಾರಣೆ ಮಾಡುವ ಮೂಲಕ ಸೇವೆಯ ಗುಣಮಟ್ಟ ಮತ್ತಷ್ಟು ಸುಧಾರಿಸುವುದು ಇದರ ಪ್ರಮುಖ ಉದ್ದೇಶವಾಗಿದೆ ಎಂದು ಆಯುಕ್ತರು ತಿಳಿಸಿಸದರು.

Bengaluru

CSR ಸಹಯೋಗದಲ್ಲಿ ಪೈಲಟ್ ಯೋಜನೆ

ಇಂಟೆಲ್ ಟೆಕ್ನಾಲಜಿ ಇಂಡಿಯಾ ಪ್ರೈವೆಟ್ ಲಿಮಿಟೆಡ್ ಸಂಸ್ಥೆಯ CSR ಸಹಕಾರದೊಂದಿಗೆ Let's be The Change (LBTC) ಹಾಗೂ ತಂತ್ರಜ್ಞಾನ ಪಾಲುದಾರರಾದ Brain Above pvt Ltd ರವರ ಸಹಯೋಗದೊಂದಿಗೆ ಶಾಂತಿನಗರ ವಿಭಾಗದಲ್ಲಿ GPS ಆಧಾರಿತ ತ್ಯಾಜ್ಯ ಸಂಗ್ರಹಣೆ ಟ್ರ್ಯಾಕಿಂಗ್ ಪೈಲಟ್ ಯೋಜನೆ ಪ್ರಾರಂಭಿಸಲಾಗಿದೆ.

ಮನೆ-ಮನೆ ತ್ಯಾಜ್ಯ ಸಂಗ್ರಹಣೆಯಲ್ಲಿ ಕಾರ್ಯಕ್ಷಮತೆ ಹೆಚ್ಚಳ

ಜಿ.ಪಿ.ಎಸ್ ಆಧಾರಿತ ಟ್ರ್ಯಾಕಿಂಗ್ ವ್ಯವಸ್ಥೆಯಿಂದ ಮನೆ-ಮನೆ ತ್ಯಾಜ್ಯ ಸಂಗ್ರಹಣಾ ವ್ಯವಸ್ಥೆಯ ಕಾರ್ಯಕ್ಷಮತೆಯನ್ನು ಮತ್ತಷ್ಟು ಹೆಚ್ಚಿಸಲು ಸಾಧ್ಯವಾಗಲಿದೆ. ವಾಹನಗಳು ನಿಗದಿತ ಮಾರ್ಗದಲ್ಲಿ ಸಂಚರಿಸುತ್ತಿವೆಯೇ, ತ್ಯಾಜ್ಯ ಸಂಗ್ರಹಣಾ ಕಾರ್ಯವನ್ನು ಸಮರ್ಪಕವಾಗಿ ನಿರ್ವಹಿಸುತ್ತಿವೆಯೇ ಎಂಬುದನ್ನು ಪರಿಣಾಮಕಾರಿಯಾಗಿ ಮೇಲ್ವಿಚಾರಣೆ ಮಾಡಲು ಈ ವ್ಯವಸ್ಥೆ ಸಹಕಾರಿಯಾಗಲಿದೆ.

ಕೇಂದ್ರೀಕೃತ ಕಮಾಂಡ್ ಸೆಂಟರ್ ನಿಂದ ಮೇಲ್ವಿಚಾರಣೆ

BSWMLನ ಕೇಂದ್ರೀಕೃತ ಕಮಾಂಡ್ ಸೆಂಟರ್ ಮೂಲಕ ತ್ಯಾಜ್ಯ ಸಂಗ್ರಹಣಾ ವಾಹನಗಳ ಚಲನವಲನ ಹಾಗೂ ಕಾರ್ಯನಿರ್ವಹಣೆಯನ್ನು ನೈಜ ಸಮಯದಲ್ಲಿ (Real-time) ಮೇಲ್ವಿಚಾರಣೆ ಮಾಡಲು ಸಾಧ್ಯವಾಗಲಿದೆ. ಇದರಿಂದ ವಾಹನಗಳ ಸಂಚಾರದ ಕುರಿತು ನಿಖರ ಮಾಹಿತಿ ಪಡೆದು, ಅಗತ್ಯವಿರುವ ಸಂದರ್ಭದಲ್ಲಿ ತ್ವರಿತವಾಗಿ ಕ್ರಮ ಕೈಗೊಳ್ಳಲು ಸಹಾಯವಾಗಲಿದೆ.

ಪಾರದರ್ಶಕತೆ ಮತ್ತು ಹೊಣೆಗಾರಿಕೆಗೆ ಆದ್ಯತೆ

ತ್ಯಾಜ್ಯ ಸಂಗ್ರಹಣಾ ವಾಹನಗಳ ಕಾರ್ಯಾಚರಣೆಯನ್ನು ಜಿ.ಪಿ.ಎಸ್ ಮೂಲಕ ನಿರಂತರವಾಗಿ ಟ್ರ್ಯಾಕ್ ಮಾಡುವುದರಿಂದ ಸೇವಾ ವ್ಯವಸ್ಥೆಯಲ್ಲಿ ಪಾರದರ್ಶಕತೆ, ಹೊಣೆಗಾರಿಕೆ ಹಾಗೂ ದಕ್ಷತೆಯನ್ನು ಮತ್ತಷ್ಟು ಬಲಪಡಿಸಲು ಸಾಧ್ಯವಾಗಲಿದೆ. ತ್ಯಾಜ್ಯ ಸಂಗ್ರಹಣೆಯಲ್ಲಿ ಉಂಟಾಗಬಹುದಾದ ಲೋಪಗಳನ್ನು ಗುರುತಿಸಿ ಸೂಕ್ತ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಈ ವ್ಯವಸ್ಥೆ ನೆರವಾಗಲಿದೆ ಎಂದು ಕೇಂದ್ರ ನಗರ ಪಾಲಿಕೆಯ ಆಯುಕ್ತರಾದ ಜಗದೀಶ್.ಜಿ ರವರು ತಿಳಿಸಿರುತ್ತಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+