ಕಸ ಎಸೆಯುವುದನ್ನು ಪ್ರಶ್ನಿಸಿದಕ್ಕೆ ಮಾರ್ಷಲ್ ಮೇಲೆ ಹಲ್ಲೆ; ವ್ಯಕ್ತಿ ವಿರುದ್ಧ FIR ದಾಖಲು

ಬೆಂಗಳೂರು: ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯ ಬ್ಯಾಟರಾಯನಪುರ ವಾರ್ಡ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಾಲಿಕೆ ಮಾರ್ಷಲ್ ಮೇಲೆ ವ್ಯಕ್ತಿಯೊಬ್ಬರು ಹಲ್ಲೆ ನಡೆಸಿದ ಘಟನೆ ನಡೆದಿದೆ. ಮಾರ್ಷಲ್ ಸಮವಸ್ತ್ರ ಹರಿದು ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಲಾಗಿದೆ. ಬೆಂಗಳೂರು ಉತ್ತರ ನಗರ ಪಾಲಿಕೆಯ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ಅವರ ನಿರ್ದೇಶನದಂತೆ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಅಮೃತಳ್ಳಿಯ ಸ್ನೇಹನಗರದ ನಿವಾಸಿಯಾದ ವೆಂಕಟೇಶ್ ಆರ್. ಅವರು ಬ್ಯಾಟರಾಯನಪುರ ವಾರ್ಡ್‌ನಲ್ಲಿ ಮಾರ್ಷಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇಂದು ಭಾನುವಾರ (ಆಗಸ್ಟ್ 23) ಬೆಳಗ್ಗೆ ಸುಮಾರು 5.50ರಿಂದ 6.20ರ ನಡುವೆ ಅಮೃತಹಳ್ಳಿ ಕೆರೆ ಸಮೀಪದ ರಸ್ತೆಯಲ್ಲಿ ಅಮೃತನಗರ ಎ-ಸೆಕ್ಟರ್ ನಿವಾಸಿ ವಿಜಯ್ ಕುಮಾರ್ ಎಂಬ ವ್ಯಕ್ತಿ ರಸ್ತೆಯಲ್ಲಿ ಕಸ ಎಸೆಯುತ್ತಿದ್ದುದನ್ನು ಗಮನಿಸಿದ ಮಾರ್ಷಲ್, ಸಾರ್ವಜನಿಕ ಸ್ಥಳದಲ್ಲಿ ಕಸ ಎಸೆಯದಂತೆ ಪ್ರಶ್ನಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

Bengaluru Civic Marshal

ಈ ವೇಳೆ ವಿಜಯ್ ಕುಮಾರ್ ಅವರು ಅವಾಚ್ಯ ಶಬ್ದಗಳಿಂದ ನಿಂದಿಸಿ, ವೆಂಕಟೇಶ್ ಅವರ ಕೆನ್ನೆಗೆ ಕೈಯಿಂದ ಹೊಡೆದಿದ್ದಾರೆ. ಅವರ ಸಮವಸ್ತ್ರವನ್ನು ಹರಿದು ಹಾಕಿ, ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಕಾನೂನು ಕ್ರಮಕ್ಕೆ ಆಗ್ರಹ, ದೂರು

ಘಟನೆಯ ಹಿನ್ನೆಲೆಯಲ್ಲಿ, ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಗೆ ದೈಹಿಕವಾಗಿ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಹಾಗೂ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ವಿಜಯ್ ಕುಮಾರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ವೆಂಕಟೇಶ್ ಅವರು ಅಮೃತಹಳ್ಳಿ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.

ದೂರಿನ ಆಧಾರದ ಮೇಲೆ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ. ಪೊಲೀಸರು ಘಟನೆಯ ಕುರಿತು ಹೆಚ್ಚಿನ ಮಾಹಿತಿ ಪರಿಶೀಲಿಸುತ್ತಿದ್ದಾರೆ. ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ವಚ್ಛತೆ ಹಾಗೂ ಸಾರ್ವಜನಿಕ ಆರೋಗ್ಯ ಕಾಪಾಡುವ ಕರ್ತವ್ಯ ನಿರ್ವಹಿಸುತ್ತಿರುವ ಪಾಲಿಕೆ ಸಿಬ್ಬಂದಿಗೆ ಸಾರ್ವಜನಿಕರು ಸಹಕರಿಸುವಂತೆ ಹಾಗೂ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಯೊಂದಿಗೆ ಯಾವುದೇ ರೀತಿಯ ಅಸಭ್ಯ ವರ್ತನೆ ಅಥವಾ ಅಡ್ಡಿಪಡಿಸುವ ಕೃತ್ಯಗಳಿಗೆ ಮುಂದಾಗದಂತೆ ಮನವಿ ಮಾಡಲಾಗಿದೆ.

ಕಸ ಎಸೆಯುವವರೇ ಎಚ್ಚರ

ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಾರ್ವಜನಿಕರು ಕಸವನ್ನು ರಸ್ತೆ, ಪಾದಚಾರಿ ಮಾರ್ಗ ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ಎಸೆಯದೆ, ಮನೆ ಬಾಗಿಲಿಗೆ ಬರುವ ಕಸ ಸಂಗ್ರಹಿಸುವ ಆಟೋಗಳಿಗೆ ಮಾತ್ರ ನೀಡಬೇಕು. ನಿಗದಿತ ಸಮಯದಲ್ಲಿ ಕಸ ಸಂಗ್ರಹಿಸುವ ಆಟೋ ಆಗಮಿಸದಿದ್ದಲ್ಲಿ, ಸಾರ್ವಜನಿಕರು 1533 ಸಹಾಯವಾಣಿಗೆ ಕರೆ ಮಾಡಿ ದೂರು ದಾಖಲಿಸುವಂತೆ ಬೆಂಗಳೂರು ಉತ್ತರ ನಗರ ಪಾಲಿಕೆ ಮನವಿ ಮಾಡಿದೆ.

ಕಸವನ್ನು ಸಾರ್ವಜನಿಕ ಸ್ಥಳಗಳಲ್ಲಿ ಎಸೆಯುವ ಮೂಲಕ ಬ್ಲ್ಯಾಕ್‌ಸ್ಪಾಟ್‌ಗಳು ಸೃಷ್ಟಿಯಾಗುವುದನ್ನು ತಪ್ಪಿಸಲು ಸಾರ್ವಜನಿಕರು ಪಾಲಿಕೆಯ ಕಸ ಸಂಗ್ರಹಣಾ ವ್ಯವಸ್ಥೆಯೊಂದಿಗೆ ಸಹಕರಿಸುವಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಪ್ರಕಟಣೆ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+