ಬೆಂಗಳೂರು ಸ್ವಚ್ಛತಾ ಅಭಿಯಾನ: 14 ಮೇಲ್ಸೇತುವೆ, ಅಂಡರ್‌ಪಾಸ್‌ಗಳಿಂದ 292 ಕೆ.ಜಿ. ತ್ಯಾಜ್ಯ ತೆರವು

ಬೆಂಗಳೂರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹಾಗೂ ಪಾಲಿಕೆಯ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಛತಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರಿಗೆ ಶುಚಿತ್ವಯುತ ವಾತಾವರಣ ಹಾಗೂ ಸುಗಮ ಸಂಚಾರ ಕಲ್ಪಿಸುವ ನಿಟ್ಟಿನಲ್ಲಿ ಮೇಲ್ಸೇತುವೆ ಹಾಗೂ ಅಂಡರ್ ಪಾಸ್‌ಗಳ ಸುತ್ತಮುತ್ತ ಸ್ವಚ್ಛತೆ ಕಾರ್ಯಾಚರಣೆಯನ್ನು ಆಗಸ್ಟ್‌ 13ರ ಗುರುವಾರ ನಡೆಸಲಾಗಿದೆ. ಬೆಂಗಳೂರಿನ 14 ಮೇಲ್ಸೇತುವೆ ಹಾಗೂ ಅಂಡರ್ ಪಾಸ್‌ಗಳ ಸ್ವಚ್ಛತೆ ನಡೆಸಲಾಗಿದ್ದು, 292 ಕೆ.ಜಿ. ತ್ಯಾಜ್ಯ ತೆರವು ಮಾಡಲಾಗಿದ್ದು, ಒಟ್ಟು 79 ಪೌರಕಾರ್ಮಿಕರು ಹಾಗೂ 33 ಸ್ವಚ್ಛತಾ ಸಿಬ್ಬಂದಿ ಇದರಲ್ಲಿ ಭಾಗಿಯಾಗಿದ್ದರು.

ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ವಚ್ಛತೆ ಕಾಪಾಡುವುದು, ತ್ಯಾಜ್ಯ ಮುಕ್ತ ನಗರವನ್ನಾಗಿಸಿ ಸುಂದರ ಹಾಗೂ ಸ್ವಚ್ಛ ನಗರವನ್ನಾಗಿ ರೂಪಿಸುವುದು ಹಾಗೂ ಸ್ವಚ್ಛ ಸರ್ವೇಕ್ಷಣ 2025-26ರ ಶ್ರೇಯಾಂಕ ಪಟ್ಟಿಯಲ್ಲಿ ರಾಷ್ಟ್ರ ಮಟ್ಟದಲ್ಲಿ ಉತ್ತಮ ಸ್ಥಾನ ಗಳಿಸುವ ನಿಟ್ಟಿನಲ್ಲಿ ಬೆಂಗಳೂರು ಕೇಂದ್ರ ನಗರ ಪಾಲಿಕೆ ವತಿಯಿಂದ ಹಮ್ಮಿಕೊಂಡಿರುವ 3ನೇ ಹಂತದ ವಿಶೇಷ ಸ್ವಚ್ಛತಾ ಅಭಿಯಾನದ ಅಂಗವಾಗಿ, ಈಗಾಗಲೇ ರೂಪಿಸಲಾಗಿರುವ ಸ್ವಚ್ಛತಾ ಕಾರ್ಯ ವೇಳಾಪಟ್ಟಿಯಂತೆ (ಆ್ಯಕ್ಷನ್ ಪ್ಲಾನ್‌ನಂತೆ) ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯ ವಿವಿಧ ಮೇಲ್ಸೇತುವೆ ಹಾಗೂ ಅಂಡರ್ ಪಾಸ್ ಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿಶೇಷ ಸ್ವಚ್ಛತಾ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ ಎಂದು ಬೆಂಗಳೂರು ಕೇಂದ್ರ ನಗರ ಪಾಲಿಕೆ ಆಯುಕ್ತರಾದ ಜಗದೀಶ್ ಜಿ. ಅವರು ತಿಳಿಸಿದ್ದಾರೆ.

14 ಮೇಲ್ಸೇತುವೆ - ಅಂಡರ್ ಪಾಸ್‌ಗಳ ಪ್ರದೇಶಗಳ ಸ್ವಚ್ಛತೆ

ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಮೇಲ್ಸೇತುವೆ ಹಾಗೂ ಅಂಡರ್ ಪಾಸ್‌ಗಳ ಸುತ್ತಮುತ್ತಲಿನ ಪ್ರದೇಶಗಳನ್ನು ಸ್ವಚ್ಛ, ಶುಚಿತ್ವಯುತವಾಗಿಡಲು ಹಾಗೂ ಸಾರ್ವಜನಿಕರಿಗೆ ಮತ್ತು ಸುಗಮ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸುವ ಉದ್ದೇಶದಿಂದ ಒಟ್ಟು 14 ಸ್ಥಳಗಳಲ್ಲಿ ವಿಶೇಷ ಸ್ವಚ್ಛತಾ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಈ ಪೈಕಿ 11 ಮೇಲ್ಸೇತುವೆಗಳು ಹಾಗೂ 3 ಅಂಡರ್ ಪಾಸ್‌ಗಳನ್ನು ಸ್ವಚ್ಛ ಮಾಡಲಾಗಿದ್ದು, ಕಾರ್ಯಾಚರಣೆಯ ವೇಳೆ ಸುಮಾರು 292 ಕೆ.ಜಿ. ತ್ಯಾಜ್ಯವನ್ನು ತೆರವುಗೊಳಿಸಲಾಗಿದೆ ಎಂದು ಪಾಲಿಕೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ವಿಭಾಗವಾರು ಮೇಲ್ಸೇತುವೆ ಹಾಗೂ ಅಂಡರ್ ಪಾಸ್ ಭಾಗದಲ್ಲಿ ಸ್ವಚ್ಛತೆ

1. ಶಾಂತಿನಗರ ವಿಭಾಗ ವ್ಯಾಪ್ತಿಯಲ್ಲಿ - 2
2. ಸಿ.ವಿ. ರಾಮನ್ ನಗರ ವಿಭಾಗ ವ್ಯಾಪ್ತಿಯಲ್ಲಿ - 4
3. ಶಿವಾಜಿನಗರ ವಿಭಾಗ ವ್ಯಾಪ್ತಿಯಲ್ಲಿ - 1
4. ಚಾಮರಾಜಪೇಟೆ ವಿಭಾಗ ವ್ಯಾಪ್ತಿಯಲ್ಲಿ - 4
5. ಚಿಕ್ಕಪೇಟೆ ವಿಭಾಗ ವ್ಯಾಪ್ತಿಯಲ್ಲಿ - 2
6. ಗಾಂಧಿನಗರ ವಿಭಾಗ ವ್ಯಾಪ್ತಿಯಲ್ಲಿ - 1

ಒಟ್ಟು - 14 ಮೇಲ್ಸೇತುವೆ ಹಾಗೂ ಅಂಡರ್ ಪಾಸ್‌ಗಳ ಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ ನಡೆದಿದೆ.

79 ಪೌರಕಾರ್ಮಿಕರು ಹಾಗೂ 33 ಸ್ವಚ್ಛತಾ ಸಿಬ್ಬಂದಿ ಭಾಗಿ

ಈ ವಿಶೇಷ ಸ್ವಚ್ಛತಾ ಕಾರ್ಯಾಚರಣೆಯಲ್ಲಿ ಸುಮಾರು 79 ಪೌರಕಾರ್ಮಿಕರು ಹಾಗೂ 33 ಸ್ವಚ್ಛತಾ ಸಿಬ್ಬಂದಿ ಸಕ್ರಿಯವಾಗಿ ಭಾಗವಹಿಸಿ ಸ್ವಚ್ಛತಾ ಕಾರ್ಯವನ್ನು ಯಶಸ್ವಿಗೊಳಿಸಿದ್ದಾರೆ. ಮೇಲ್ಸೇತುವೆ ಹಾಗೂ ಕೆಳಸೇತುವೆಗಳ ಸುತ್ತಮುತ್ತಲಿನ ಪ್ರದೇಶಗಳನ್ನು ಸ್ವಚ್ಛವಾಗಿ ಹಾಗೂ ಸುಂದರವಾಗಿ ಕಾಪಾಡುವುದು ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಪ್ರಮುಖ ಆದ್ಯತೆಯಾಗಿದ್ದು, ಸಾರ್ವಜನಿಕರಿಗೆ ಶುಚಿತ್ವಯುತ ವಾತಾವರಣ ಕಲ್ಪಿಸುವ ಹಾಗೂ ಸುಗಮ ಸಂಚಾರ ಕಲ್ಪಿಸುವ ನಿಟ್ಟಿನಲ್ಲಿ ಇಂತಹ ವಿಶೇಷ ಸ್ವಚ್ಛತಾ ಕಾರ್ಯಾಚರಣೆಗಳು ನಿರಂತರವಾಗಿ ಮುಂದುವರಿಯಲಿವೆ ಎಂದು ಕೇಂದ್ರ ನಗರ ಪಾಲಿಕೆಯ ಆಯುಕ್ತರಾದ ಜಗದೀಶ್ ಜಿ. ಅವರು ತಿಳಿಸಿದ್ದಾರೆ.

ತ್ಯಾಜ್ಯ ತೆರವು ಹಾಗೂ ಸಮಗ್ರ ಸ್ವಚ್ಛತಾ ಕಾರ್ಯಾಚರಣೆ

ಸ್ವಚ್ಛತಾ ಕಾರ್ಯಾಚರಣೆಯ ವೇಳೆ ಮೇಲ್ಸೇತುವೆ ಹಾಗೂ ಅಂಡರ್ ಪಾಸ್ ಗಳ ಸುತ್ತಮುತ್ತ ರಸ್ತೆಯ ಬದಿಯಲ್ಲಿ ಬೆಳೆದಿರುವ ಗಿಡಗಳನ್ನು, ಬಿದ್ದಿದ್ದ ಪ್ಲಾಸ್ಟಿಕ್ ತ್ಯಾಜ್ಯ, ಕಾಗದ, ಆಹಾರ ತ್ಯಾಜ್ಯ, ನೀರಿನ ಬಾಟಲಿಗಳು, ಒಣ ಎಲೆಗಳು, ಹಾಗೂ ಇತರೆ ಘನ ತ್ಯಾಜ್ಯವನ್ನು ಸಂಗ್ರಹಿಸಿ ತೆರವುಗೊಳಿಸಲಾಯಿತು. ಸಂಗ್ರಹಿಸಲಾದ ಸುಮಾರು 292 ಕೆ.ಜಿ. ತ್ಯಾಜ್ಯವನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಲು ಸಂಬಂಧಿಸಿದ ಘಟಕಗಳಿಗೆ ರವಾನಿಸಲಾಗಿದೆ ಎಂದು ಪಾಲಿಕೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+