ಅಲ್ ಖೈದಾ ಪರ ಪ್ರಚಾರ : ಬೆಂಗಳೂರಲ್ಲಿ ಮೌಲ್ವಿ ಬಂಧನ
ಬೆಂಗಳೂರು, ಜನವರಿ 08 : ಅಲ್ ಖೈದಾ ಭಯೋತ್ಪಾದಕ ಸಂಘಟನೆಗೆ ಸಹಕಾರ ನೀಡಿದ ಆರೋಪದ ಮೇಲೆ ಮೌಲ್ವಿಯೊಬ್ಬನನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ. ದೆಹಲಿ ಪೊಲೀಸರು ಗುರುವಾರ ತಡರಾತ್ರಿ ಮೌಲ್ವಿಯನ್ನು ಬಂಧಿಸಿದ್ದು, ಜನವರಿ 20ರ ತನಕ ಪೊಲೀಸರ ವಶಕ್ಕೆ ಒಪ್ಪಿಸಿ ಕೋರ್ಟ್ ಆದೇಶ ನೀಡಿದೆ.
ಬಂಧಿತನನ್ನು ಮೌಲಾನಾ ಅನ್ಸರ್ ಶಾ ಎಂದು ಗುರುತಿಸಲಾಗಿದೆ. ಕುಮಾರಸ್ವಾಮಿ ಲೇಔಟ್‌ನಲ್ಲಿರುವ ಮದರಸಾದಲ್ಲಿ ಮೌಲ್ವಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಅನ್ಸರ್ ಇಲಿಯಾಸ್ ನಗರದಲ್ಲಿ ವಾಸವಾಗಿದ್ದ. ಗುರುವಾರ ರಾತ್ರಿ ದೆಹಲಿ ಪೊಲೀಸರು ಅನ್ಸರ್‌ನನ್ನು ಬಂಧಿಸಿದ್ದಾರೆ. [ಮುಸ್ಲಿಂ ವಿರೋಧಿ ಮೋದಿ, ಅಲ್ ಖೈದಾ ವಿಡಿಯೋ ಬಗ್ಗೆ ತನಿಖೆ]

ಶುಕ್ರವಾರ ಪಟಿಯಾಲಾ ಕೋರ್ಟ್‌ಗೆ ಅನ್ಸರ್‌ನನ್ನು ಹಾಜರುಪಡಿಸಿದ್ದು, ಜನವರಿ 20ರ ತನಕ ಪೊಲೀಸರ ವಶಕ್ಕೆ ಒಪ್ಪಿಸಿ ಕೋರ್ಟ್ ಆದೇಶ ಹೊರಡಿಸಿದೆ. ಅನ್ಸರ್ ಜೊತೆ ಆಟೋ ಚಾಲಕ ಜಬ್ಬಾರ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ವಿಚಾರಣೆ ನಡೆಸಿ ಬಿಡುಗಡೆ ಮಾಡಿದ್ದಾರೆ. [ಮಕ್ಕಳ ಹತ್ಯಾಕಾಂಡ : ಅಲ್-ಖೈದಾ ದುಃಖದಲ್ಲಿದೆಯಂತೆ..!]
ಅಲ್ ಖೈದಾ ಪರವಾಗಿ ಪ್ರಚಾರ ಮಾಡುತ್ತಿದ್ದ ಮೌಲ್ವಿಯನ್ನು ಕಟಕ್‌ನಲ್ಲಿ ದೆಹಲಿ ಪೊಲೀಸರು ಕಳೆದ ತಿಂಗಳು ಬಂಧಿಸಿದ್ದರು. ಉತ್ತರ ಪ್ರದೇಶದಲ್ಲಿಯೂ ಮೌಲ್ವಿಯೊಬ್ಬನನ್ನು ಬಂಧಿಸಲಾಗಿತ್ತು. ಇವರ ವಿಚಾರಣೆ ಬಳಿಕ ಬೆಂಗಳೂರಿನಲ್ಲಿ ಮೌಲ್ವಿಯನ್ನು ಬಂಧಿಸಲಾಗಿದೆ.
ತನಿಖೆ ಮುಂದುವರೆದಿದೆ : ಮೌಲ್ವಿಗಳು ಅಲ್ ಖೈದಾ ಪರವಾಗಿ ಪ್ರಚಾರ ಮಾಡುತ್ತಿದ್ದ ಬಗ್ಗೆ ತನಿಖೆ ಮುಂದುವರೆದಿದೆ ಎಂದು ದೆಹಲಿ ಪೊಲೀಸರು ಹೇಳಿದ್ದಾರೆ. ಯುವಕರಿಗೆ ಅಲ್ ಖೈದಾ ಸೇರುವಂತೆ ಅನ್ಸರ್ ಪ್ರಚೋದನೆ ನೀಡುತ್ತಿದ್ದ ಎಂಬ ಮಾಹಿತಿ ಲಭ್ಯವಾಗಿದೆ.
ಅನ್ಸರ್ ಮೊದಲು ಬನಶಂಕರಿಯ ಮಸೀದಿಯಲ್ಲಿ ಪ್ರವಚನ ನಡೆಸುತ್ತಿದ್ದ. ತಿಂಗಳ ಹಿಂದಷ್ಟೆ ಇಲಿಯಾಸ್ ನಗರಕ್ಕೆ ವಾಸ್ತವ್ಯ ಬದಲಿಸಿದ್ದ. ಗುರುವಾರ ರಾತ್ರಿ 9.30ರ ಸುಮಾರಿಗೆ ಅನ್ಸರ್ ಆಸೀಫ್ ಎಂಬುವವರ ಮನೆಯಲ್ಲಿ ಊಟ ಮಾಡುತ್ತಿದ್ದಾಗ, ಆಗಮಿಸಿದಾಗ ಅಧಿಕಾರಿಗಳು ಅನ್ಸರ್ ವಶಕ್ಕೆ ಪಡೆದಿದ್ದಾರೆ. ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿ ವಿಚಾರಣೆ ನಡೆಸಿ, ನಂತರ ದೆಹಲಿಗೆ ಕರೆದುಕೊಂಡು ಹೋಗಿದ್ದಾರೆ.
-
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
Sleeper Vande Bharat; ಬೆಂಗಳೂರು-ಮುಂಬೈ ಸ್ಲೀಪರ್ ವಂದೇ ಭಾರತ್ಗೆ ಕೇಂದ್ರ ಅಸ್ತು, ಕರ್ನಾಟಕಕ್ಕೆ ಏನೆಲ್ಲ ಲಾಭ? -
Ramya: ಬೀದಿ ನಾಯಿಗಳ ಮೇಲಿನ ಕ್ರೌರ್ಯಕ್ಕೆ ನಟಿ ರಮ್ಯಾ ಕಣ್ಣೀರು: ಬೆಂಗಳೂರಿನ ಫ್ರೀಡಂಪಾರ್ಕ್ ಪ್ರತಿಭಟನೆಯಲ್ಲಿ ಭಾಗಿ -
UGCET ಅಭ್ಯರ್ಥಿಗಳ ಗಮನಕ್ಕೆ: ಇದೇ ತಿಂಗಳು CET ಪರೀಕ್ಷೆ, ರಿಲೀಸಾದ ನಕಲಿ ಲಿಂಕ್ ಬಗ್ಗೆ ಎಚ್ಚರ -
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ












Click it and Unblock the Notifications