Bengaluru Weather: 2010ರ ದಾಖಲೆ ಮುರಿದು ಹೊಸ ದಾಖಲೆ ಬರೆಯಲು ಸಜ್ಜಾದ ಬೆಂಗಳೂರು ಚಳಿ

ಈ ವರ್ಷ ಭಾರಿ ಮಳೆಯನ್ನು ಕಂಡಿರುವ ಕರ್ನಾಟಕ ಇದೀಗ ಚಳಿಯನ್ನು ಅನುಭವಿಸಲು ಸಜ್ಜಾಗಿದೆ. ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ತೀವ್ರ ಚಳಿಗೆ ಜನ ಹೈರಾಣಾಗಿದ್ದಾರೆ. ಬೆಂಗಳೂರಿನಲ್ಲಿ ಕೂಡ ಚಳಿ ಹೆಚ್ಚಾಗಿದ್ದು ಜನ ನಡುಗಿತ್ತಿದ್ದಾರೆ. ಈ ಬೆನ್ನಲ್ಲೇ ಬೆಂಗಳೂರು ಚಳಿ ಹೊಸ ದಾಖಲೆ ಬರೆಯಲು ಸಜ್ಜಾಗಿದೆ. ಮಂಗಳವಾರ 2010ರ ಬಳಿಕ ಬೆಂಗಳೂರು ಡಿಸೆಂಬರ್ ತಿಂಗಳ ಅತಿ ಹೆಚ್ಚು ಚಳಿ ದಾಖಲಾಗಲಿದೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿರುವ ಪ್ರಕಾರ, ಮಂಗಳವಾರ (ಡಿಸೆಂಬರ್, 17) ರಾತ್ರಿ ಕನಿಷ್ಠ ತಾಪಮಾನ 12.4 ಡಿಗ್ರಿ ಸೆಲ್ಸಿಯಸ್‌ಗೆ ಕಡಿಮೆಯಾಗಬಹುದು ಎಂದು ಮುನ್ಸೂಚನೆ ಕೊಟ್ಟಿದೆ. ಇದು 14 ವರ್ಷಗಳ ದಾಖಲೆಯನ್ನು ಮುರಿಯಲಿದೆ. 2011 ಡಿಸೆಂಬರ್ 24ರಂದು ಬೆಂಗಳೂರಿನಲ್ಲಿ 12.8 ಡಿಗ್ರಿ ಸೆಲ್ಸಿಯಸ್‌ಗೆ ಕುಸಿದಿದ್ದು ಈವರೆಗಿನ ದಾಖಲೆಯಾಗಿತ್ತು. 1884 ಜನವರಿ 13ರಂದು ಬೆಂಗಳೂರಿನಲ್ಲಿ ತಾಪಮಾನ 7.8 ಡಿಗ್ರಿ ಸೆಲ್ಸಿಯಸ್‌ಗೆ ಕುಸಿದಿದ್ದು ಈವರೆಗಿನ ದಾಖಲೆಯಾಗಿದೆ.

bengaluru coldest december night since 2010

ಈ ಬಾರಿ ಚಳಿ ಕೂಡ ಹೆಚ್ಚು

ಡಿಸೆಂಬರ್ ತಿಂಗಳಿನಲ್ಲಿ ಬೆಂಗಳೂರು ತಾಪಮಾನ ಸರಾಸರಿ ಕನಿಷ್ಠ 15.7 ಡಿಗ್ರಿ ಸೆಲ್ಸಿಯಸ್ ಇರುತ್ತದೆ. ಭಾನುವಾರ ರಾತ್ರಿ 15.5 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದ್ದರೆ, ಎಚ್‌ಎಎಲ್ ವಿಮಾನ ನಿಲ್ದಾಣದ ಪ್ರದೇಶದಲ್ಲಿ 14.7 ಡಿಗ್ರಿ ಸೆಲ್ಸಿಯಸ್ ಮತ್ತು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 14.5 ಡಿಗ್ರಿ ಸೆಲ್ಸಿಯಸ್‌ಗೆ ಕುಸಿದಿತ್ತು.

ಮುಂದಿನ ದಿನಗಳಲ್ಲಿ ಬೆಂಗಳೂರಿನ ಹಲವು ಕಡೆಗಳಲ್ಲಿ ಮುಂಜಾನೆ ವೇಳೆ ಮಂಜು ಕವಿದ ವಾತಾವರಣ ಇರಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರದಲ್ಲಿ ಗರಿಷ್ಠ ತಾಪಮಾನ ಸರಾಸರಿ 27 ಡಿಗ್ರಿ ಸೆಲ್ಸಿಯಸ್ ಆಗಿದ್ದರೆ, ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ಆಗಿರುತ್ತದೆ ಎಂದು ತಿಳಿಸಿದೆ.

ಮತ್ತೆ ಮಳೆ ಮುನ್ಸೂಚನೆ

ಬೆಂಗಳೂರಿನಲ್ಲಿ ಭಾರಿ ಚಳಿಯ ನಡುವೆ ಮತ್ತೆ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಾಯುಭಾರ ಕುಸಿತದ ಪರಿಣಾಮವಾಗಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+