ಆಟೋ ಸೀಜ್ ಮಾಡಿ ಕೊಂಡೊಯ್ಯುವಾಗ ಅಪಘಾತ: ಚಿಕಿತ್ಸೆ ಫಲಿಸದೆ ಪೇದೆ ಸಾವು

ಬೆಂಗಳೂರು, ಏಪ್ರಿಲ್ 14: ಲಾಕ್‌ಡೌನ್ ವೇಳೆ ಅನಗತ್ಯವಾಗಿ ತಿರುಗಾಡುತ್ತಿದ್ದ ಆಟೋವನ್ನು ಸೀಜ್ ಮಾಡಿ ಠಾಣೆಗೆ ಕೊಂಡೊಯ್ಯುವ ಸಂದರ್ಭದಲ್ಲಿ ಅಪಘಾತಕ್ಕೀಡಾಗಿದ್ದ ಪೇದೆ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.

ಆಟೋವನ್ನು ಠಾಣೆಗೆ ಕೊಂಡೊಯ್ಯುವಾಗ ಡಿವೈಡರ್‌ಗೆ ಡಿಕ್ಕಿ ಹೊಡೆದಿದ್ದ ಕಾರಣ ಗಂಭೀರವಾಗಿ ಗಾಯಗೊಂಡಿದ್ದರು. ಪೀಣ್ಯ ಪೊಲೀಸ್ ಠಾಣೆ ಕಾನ್‌ಸ್ಟೆಬಲ್ ನಾಗೇಶ್ ಮೃತರು.

ಭಾನುವಾರ ಆಟೋವನ್ನು ವಶಪಡಿಸಿಕೊಂಡಿದ್ದರು. ಬಳಿಕ ಪಕ್ಕದಲ್ಲೇ ಇದ್ದ ಠಾಣೆಗೆ ಚಲಾಯಿಸಿಕೊಂಡು ಹೋಗುವಾಗ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದು ರಸ್ತೆಗೆ ಬಿದ್ದಿದ್ದರು. ಅವರ ತಲೆಗೆ ಬಲವಾದ ಏಟು ಬಿದ್ದಿತ್ತು.

Bengaluru Constable Hurt In Accident On Duty Dies

ತಕ್ಷಣವೇ ಜಾಲಹಳ್ಳಿಯಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಕ್ಷಣವೇ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಆಸ್ಪತ್ರೆಗೆ ಭೇಟಿ ನೀಡಿದ್ದರು.

ನಾಗೇಶ್‌ಗೆ ಇಬ್ಬರು ಮಕ್ಕಳಿದ್ದಾರೆ. ಇಲಾಖೆಯಲ್ಲಿ ಉತ್ತಮ ಹೆಸರಿದೆ. ಕರ್ತವ್ಯದ ವೇಳೆ ಅಪಘಾತಕ್ಕೀಡಾಗಿದ್ದರಿಂದ ಇಲಾಖೆ ಪೊಲೀಸರ ನೆರವಿಗೆ ಧಾವಿಸುತ್ತದೆ. ಸರ್ಕಾರಿಂದ ವಿಮೆ, ಭತ್ಯೆ ಎಲ್ಲವನ್ನೂ ನೀಡಲಾಗುವುದು ಎಂದು ಭರವಸೆ ನೀಡಿದ್ದರು. ಆದರೆ ಕೆಲವೇ ಗಂಟೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+