Bengaluru: ರಾಗಿಗುಡ್ಡ - ರಾಘವೇಂದ್ರ ಸ್ವಾಮಿ ಮಠ ಜಂಕ್ಷನ್ ಬಳಿ ಅಂಡರ್ ಪಾಸ್ ನಿರ್ಮಾಣ: ಜಿಬಿಎ

Bengaluru: ರಾಗಿಗುಡ್ಡ - ರಾಘವೇಂದ್ರ ಸ್ವಾಮಿ ಮಠ ಜಂಕ್ಷನ್ ಬಳಿ ಅಂಡರ್ ಪಾಸ್ ನಿರ್ಮಾಣಕ್ಕೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮುಂದಾಗಿದೆ. ಬೆಂಗಳೂರು ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಂಚಾರ ದಟ್ಟಣೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಪಾಲಿಕೆ ಆಯುಕ್ತರಾದ ಕೆ.ಎನ್. ರಮೇಶ್ ಅವರು ಕೆಲವೊಂದು ಪ್ರಮುಖ ಸೂಚನೆಗಳನ್ನು ನೀಡಿದ್ದಾರೆ.

ಬೆಂಗಳೂರು ದಕ್ಷಿಣ ನಗರ ಪಾಲಿಕೆಯ ಆಯುಕ್ತರಾದ ಕೆ.ಎನ್. ರಮೇಶ್ ಅವರು ಗುರುವಾರ ನಗರದ ಪ್ರಮುಖ ಸಂಚಾರ ದಟ್ಟಣೆಯ ಪ್ರದೇಶಗಳಿಗೆ ಹಾಗೂ ಮಳೆ ಬಂದಾಗ ಹೆಚ್ಚು ನೀರು ನಿಲ್ಲುವ ಪ್ರದೇಶಗಳಿಗೆ ಭೇಟಿ ನೀಡಿ ಸಾರ್ವಜನಿಕ ಸುಗಮ ಸಂಚಾರಕ್ಕಾಗಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸ್ಥಳ ಪರಿಶೀಲನೆ ನಡೆಸಿ ಅಧಿಕಾರಿಗಳಿಗೆ ಅಗತ್ಯ ನಿರ್ದೇಶನಗಳನ್ನು ನೀಡಿದ್ದಾರೆ.

Bengaluru

ರಾಗಿಗುಡ್ಡ - ರಾಘವೇಂದ್ರ ಸ್ವಾಮಿ ಮಠ ಜಂಕ್ಷನ್: ಅಂಡರ್ ಪಾಸ್ ನಿರ್ಮಾಣ

ರಾಗಿಗುಡ್ಡ ಡಬಲ್ ಡೆಕ್ಕರ್ ಫ್ಲೈಓವರ್‌ನ ಡೌನ್-ರ್ಯಾಂಪ್ ಬಳಿ ಉಂಟಾಗುತ್ತಿರುವ ಸಂಚಾರ ದಟ್ಟಣೆಯನ್ನು ಆಯುಕ್ತರು ಗಮನಿಸಿದರು. ಈ ಭಾಗದಲ್ಲಿ ವಾಹನಗಳ ಸುಗಮ ಸಂಚಾರಕ್ಕಾಗಿ ರಾಘವೇಂದ್ರ ಸ್ವಾಮಿ ಮಠದ ಜಂಕ್ಷನ್ ಬಳಿ ಉದ್ದೇಶಿತ ಕೆಳಸೇತುವೆ ನಿರ್ಮಾಣದ ಕುರಿತು ಟ್ರಾಫಿಕ್ ಪೊಲೀಸ್ ಹಾಗೂ ತಾಂತ್ರಿಕ ತಂಡದೊಂದಿಗೆ ಚರ್ಚಿಸಿ, ಪ್ರಾಥಮಿಕ ವರದಿಯನ್ನು ಪರಿಶೀಲಿಸಿದ್ದಾರೆ.

ಸಿಲ್ಕ್ ಬೋರ್ಡ್ ಜಂಕ್ಷನ್ - ನೀರು ನಿಲ್ಲುವ ಸಮಸ್ಯೆಗೆ ಕಡಿವಾಣ ಹಾಕಿ: ನಗರದ ಪ್ರಮುಖ ಜಂಕ್ಷನ್ ಆದ ಸಿಲ್ಕ್ ಬೋರ್ಡ್‌ನಲ್ಲಿ ಮಳೆಗಾಲದಲ್ಲಿ ಜೋರು ಮಳೆ ಬಂದಾಗ ಉಂಟಾಗುವ ನೀರು ನಿಲ್ಲುವ ಸ್ಥಳಗಳಿಗೆ ಭೇಟಿ ನೀಡಿದ ಆಯುಕ್ತರು, ಅದಕ್ಕೆ ಕಾರಣವಾದ ತಾಂತ್ರಿಕ ಲೋಪಗಳನ್ನು ಶೀಘ್ರ ಪತ್ತೆ ಹಚ್ಚಿ ಮಳೆನೀರು ಸರಾಗವಾಗಿ ಹರಿದು ಹೋಗಲು ರಾಜಕಾಲುವೆ ಹಾಗೂ ಚರಂಡಿಗಳ ದುರಸ್ತಿಗೆ ತಕ್ಷಣದ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ.

ಬನಶಂಕರಿ ದೇವಸ್ಥಾನ ಜಂಕ್ಷನ್ - ವೃತ್ತಾಕಾರದ ಸ್ಕೈವಾಕ್ ನಿರ್ಮಾಣಕ್ಕೆ ಸಿದ್ಧತೆ: ಬನಶಂಕರಿ ಜಂಕ್ಷನ್‌ನಲ್ಲಿ ಪಾದಚಾರಿಗಳ ಸುರಕ್ಷತೆಗಾಗಿ ನಿರ್ಮಿಸಲು ಉದ್ದೇಶಿಸಿರುವ ವೃತ್ತಾಕಾರದ ಸ್ಕೈ ವಾಕ್ ನಿರ್ಮಾಣದ ಕಾಮಗಾರಿ ಸಂಬಂಧ ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಂದ ಜರುಗಲಿರುವ ಶಂಕು ಸ್ಥಾಪನೆ ಕಾರ್ಯಕ್ರಮದ ಅಂಗವಾಗಿ ಕೈಗೊಳ್ಳಲಾದ ಸಿದ್ಧತೆಗಳನ್ನು ವೀಕ್ಷಿಸಿದರು. ಸ್ಥಳದಲ್ಲಿ ಮಾಡಲಾದ ಸಿದ್ಧತೆಗಳನ್ನು ಪರಿಶೀಲಿಸಿ, ಅಧಿಕಾರಿಗಳಿಗೆ ಅಗತ್ಯ ಮಾರ್ಗದರ್ಶನ ನೀಡಿದರು.

ಬೆಂಗಳೂರು ದಕ್ಷಿಣ ಭಾಗವನ್ನು ಟ್ರಾಫಿಕ್ ದಟ್ಟಣೆಯಿಂದ ಮುಕ್ತಗೊಳಿಸಲು ಹಾಗೂ ಸುಸಜ್ಜಿತ ಮೂಲಸೌಕರ್ಯದ ಪ್ರದೇಶವನ್ನಾಗಿ ಮಾಡಲು ಪಾಲಿಕೆಯು ಬದ್ಧವಾಗಿದೆ ಎಂದು ಈ ಸಂದರ್ಭದಲ್ಲಿ ಆಯುಕ್ತರು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಪಾಲಿಕೆಯ ಮುಖ್ಯ ಎಂಜಿನಿಯರರಾದ ಬಸವರಾಜ ಕಬಾಡೆ, ಕೆ ವಿ ರವಿ ಹಾಗೂ ಪೋಲಿಸ್ ಇಲಾಖೆಯ ಹಿರಿಯ ಅಧಿಕಾರಿಗಳು ಇದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+