ದರೋಡೆಗೆ ಹೊಂಚು ಹಾಕುತ್ತಿದ್ದ ರೌಡಿ ಶೀಟರ್ ಮೇಲೆ ಫೈರಿಂಗ್

ಬೆಂಗಳೂರು, ಮಾರ್ಚ್. 01 : ದರೋಡೆಗೆ ಹೊಂಚು ಹಾಕುತ್ತಿದ್ದ ರೌಡಿ ಶೀಟರ್ ಮೇಲೆ ಬೆಂಗಳೂರಿನ ರಾಜಗೋಪಾಲ ನಗರ ಪೊಲೀಸ್ ಠಾಣೆ ಇನ್ಸ್ ಸ್ಪೆಕ್ಟರ್ ಮಿಥುನ್ ಶಿಲ್ಪಿ ಫೈರಿಂಗ್ ಮಾಡಿದ್ದಾರೆ.

ಪವನ್ ಅಲಿಯಾಸ್ ಪಪ್ಪಿರೆಡ್ಡಿ(24)ಪೊಲೀಸರ ಗುಂಡೇಟಿನಿಂದ ಗಾಯಗೊಂಡಿರುವ ರೌಡಿ. ಪಿಳ್ಳಪ್ಪನಕಟ್ಟೆ ಬಳಿಯ ಕೊಡವ ಸಮಾಜದ ಸಮೀಪ ಬುಧವಾರ ರೌಡಿ ಪವನ್ ದರೋಡೆಗೆ ಹೊಂಚು ಹಾಕುತ್ತಿದ್ದಾನೆ ಎಂಬ ಖಚಿತ ಮಾಹಿತಿ ಮೇರೆಗೆ ರಾಜಗೋಪಾಲನಗರ ಇನ್ಸ್ ಪೆಕ್ಟರ್ ಮಿಥುನ್ ಶಿಲ್ಪಿ ನೇತೃತ್ವದ ತಂಡ ದಾಳಿ ಮಾಡಿದೆ.

Bengaluru: Cops Open Fire on Rowdy-Sheeter Who Was Planning for Dacoity

ಪೊಲೀಸರು ದಾಳಿ ವೇಳೆ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ ಪವನ್ ಮೊಣಕಾಲಿಗೆ ಇನ್ಸ್ ಪೆಕ್ಟರ್ ಮಿಥುನ್ ಶಿಲ್ಪಿ ತಮ್ಮ ಪಿಸ್ತೂಲ್ ನಿಂದ ಫೈರಿಂಗ್ ಮಾಡಿದ್ದಾರೆ.

ಇದರಿಂದ ಪವನ್ ಸ್ಥಳದಲ್ಲಿಯೇ ಕುಸಿದು ಬಿದ್ದಿದ್ದಾನೆ. ಸಧ್ಯ ಈತನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈತನ ವಿರುದ್ದ 8-10 ಪ್ರಕರಣಗಳು ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+