ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ರೌಡಿಶೀಟರ್ ಕಾಲಿಗೆ ಗುಂಡೇಟು!

ಬೆಂಗಳೂರು, ಜೂನ್ 11 : ಕೊಲೆ ಯತ್ನ ಪ್ರಕರಣದಲ್ಲಿ ಬಂಧಿಸಲು ತೆರಳಿದ ಪೊಲೀಸರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ರೌಡಿಶೀಟರ್ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ.

ಕೊಲೆ ಯತ್ನ ಪ್ರಕರಣದಲ್ಲಿ ನಕುಲ್(25) ಅಲಿಯಾಸ್‌ ಕಿರಣ್ ಎಂಬಾತನನ್ನು ವಿದ್ಯಾರಣ್ಯಪುರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಬಂಧಿಸಲು ತೆರಳಿದ ವೇಳೆ ಪೊಲೀಸರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ. ಈ ಸಮಯದಲ್ಲಿ ಪೊಲೀಸರು ಆರೋಪಿ ಮೇಲೆ ಗುಂಡು ಹಾರಿಸಿ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

[ದರೋಡೆಗೆ ಹೊಂಚು ಹಾಕುತ್ತಿದ್ದ ರೌಡಿ ಶೀಟರ್ ಮೇಲೆ ಫೈರಿಂಗ್]

Bengaluru cops open fire on who tried to assaulted him

ದಾಳಿಯಲ್ಲಿ ನಕುಲ್ ನ ಬಲಗಾಲಿಗೆ ಗುಂಡು ತಗುಲಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಆರೋಪಿಯು ಕೊಲೆ ಯತ್ನ, ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪ ಎದುರಿಸುತ್ತಿದ್ದಾನೆ. ಈತನ ವಿರುದ್ಧ ನಗರದ ವಿವಿಧ ಠಾಣೆಗಳಲ್ಲಿ ರೌಡಿಪಟ್ಟಿ ತೆರೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ನಕುಲ್, ಇತ್ತೀಚೆಗಷ್ಟೇ ಬಿಡುಗಡೆಯಾಗಿದ್ದ. ನಂತರ ಮತ್ತೆ ರೌಡಿ ಚಟುವಟಿಕೆಗಳಲ್ಲಿ ತೊಡಗಿದ್ದು, ಶುಕ್ರವಾರ ಸಂಜೆ ಹಳೆ ದ್ವೇಷದ ಹಿನ್ನೆಲೆಯಲ್ಲಿ ಜೋಸೆಫ್ ಎಂಬಾತನ ಕೊಲೆಗೆ ಯತ್ನಿಸಿದ್ದ.

ಈ ಬಗ್ಗೆ ಜೋಸೆಫ್ ಪೊಲೀಸರಿಗೆ ದೂರು ನೀಡಿದ್ದ. ಈ ಸಂಬಂಧ ಶನಿವಾರ ನಸುಕಿನಲ್ಲಿ ಕಾರ್ಯಾಚರಣೆ ನಡೆಸಿದ ವಿದ್ಯಾರಣ್ಯಪುರ ಠಾಣೆ ಇನ್‌ಸ್ಪೆಕ್ಟರ್ ಪುನೀತ್‌ ತಮ್ಮ ತಂಡದೊಂದಿಗೆ ಆರೋಪಿಯ ಬಂಧನಕ್ಕೆ ಬಲೆ ಬೀಸಿದ್ದರು.

ವಿದ್ಯಾರಣ್ಯಪುರದ ರೈನ್ ಬೋ ಕಾಲೋನಿ ಬಳಿ ದರೋಡೆಗೆ ಸಂಚು ರೂಪಿಸಿದ್ದ. ಈ ಮಾಹಿತಿ ಪಡೆದ ಪೊಲೀಸರು ಆರೋಪಿ ಬಂಧಿಸಲು ಮುಂದಾದರು. ಆಗ ನಕುಲ್ ಪೊಲೀಸ್‌ ತಂಡದಲ್ಲಿದ್ದ ಗೃಹ ರಕ್ಷಕ ದಳದ ಸಿಬ್ಬಂದಿ ಸಿದ್ದರಾಜು ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+