Bengaluru: ಬೆಂಗಳೂರಿನಲ್ಲಿ ಬೈಕ್‌ ಮೇಲೆ ಯುವ ಜೋಡಿ ಪ್ರಣಯ; ವಿಡಿಯೋ ವೈರಲ್, ಕ್ರಮಕ್ಕೆ ಆಗ್ರಹ

ಬೆಂಗಳೂರಿನಲ್ಲಿ ಟ್ರಾಫಿಕ್ ನಿಭಾಯಿಸುವುದು ಪೊಲೀಸರಿಗೆ ದಿನೇ ದಿನೇ ತಲೆನೋವಾಗಿದೆ. ಇದರ ಜೊತೆಗೆ ಕೆಲವು ಬೇಜವಾಬ್ದಾರಿ ಸವಾರರು ಮತ್ತು ಚಾಲಕರು ಟ್ರಾಫಿಕ್ ನಿಯಮ ಉಲ್ಲಂಘನೆ ಮಾಡುವುದು ಪರಿಸ್ಥಿತಿಯನ್ನು ಮತ್ತಷ್ಟು ಬಿಗಡಾಯಿಸಿದೆ. ಆಗಾಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಬೈಕ್ ಸವಾರರು, ಕಾರು ಚಾಲಕರು ಟ್ರಾಫಿಕ್ ನಿಯಮ ಉಲ್ಲಂಘನೆ ಮಾಡುವ ವಿಡಿಯೋಗಳು ವೈರಲ್ ಆಗುತ್ತಿರುತ್ತವೆ. ಇದೀಗ ಅಂತಹದ್ದೇ ವಿಡಿಯೋವೊಂದು ವೈರಲ್ ಆಗಿದ್ದು ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ನೆಟ್ಟಿಗರು ಟ್ರಾಫಿಕ್ ಪೊಲೀಸರನ್ನು ಒತ್ತಾಯಿಸಿದ್ದಾರೆ.

ಬೆಂಗಳೂರಿನ ರಸ್ತೆಯಲ್ಲಿ ಜೋಡಿಯೊಂದು ಮಿತಿ ಮೀರಿ ವರ್ತನೆ ಮಾಡುತ್ತಾ ಬೈಕ್ ಚಲಾಯಿಸುತ್ತಿರುವ ವಿಡಿಯೋ ಇದೀಗ ವೈರಲ್ ಆಗಿದೆ. ಯುವಕ ಬೈಕ್ ಚಾಲನೆ ಮಾಡುತ್ತಿದ್ದು, ಯುವತಿ ಟ್ಯಾಂಕ್ ಮೇಲೆ ಕೂತಿದ್ದು, ಯುವಕನ ಜೊತೆ ರೊಮ್ಯಾನ್ಸ್ ಮಾಡುತ್ತಿರುವ ದೃಶ್ಯಗಳನ್ನು ವಿಡಿಯೋದಲ್ಲಿ ನೋಡಬಹುದು.

Bengaluru Couple s Dangerous Two-Wheeler Stunts Prompt Legal Action Calls

ಸಾರ್ವಜನಿಕವಾಗಿ ಈ ರೀತಿ ಅಸಭ್ಯವಾಗಿ ವರ್ತಿಸುತ್ತಿರುವುದು ಅಲ್ಲದೆ, ಟ್ರಾಫಿಕ್ ನಿಯಮಗಳನ್ನು ಸಂಪೂರ್ಣವಾಗಿ ಉಲ್ಲಂಘನೆ ಮಾಡಿದ್ದಾರೆ. ಬೈಕ್ ಚಲಾಯಿಸುತ್ತಿರುವ ಯುವಕ ಕೂಡ ಹೆಲ್ಮೆಟ್ ಧರಿಸದೆ ಅಜಾಗರೂಕತೆಯಿಂದ ಯುವತಿಯನ್ನು ಮುದ್ದಾಡುತ್ತಾ ಬೈಕ್ ಚಾಲನೆ ಮಾಡುತ್ತಿದ್ದಾನೆ. ಈ ವಿಡಿಯೋ ನೋಡಿದ ನೆಟ್ಟಿಗರು ಅಸಮಾಧಾನ ವ್ಯಕ್ತಪಡಿಸಿದ್ದು, ಹೀಗೆ ಅಜಾಗರೂಕತೆಯಿಂದ ಬೈಕ್ ಚಾಲನೆ ಮಾಡಿದರೆ ಅಪಘಾತವಾಗದೆ ಇನ್ನೇನಾಗುತ್ತದೆ ಎಂದು ಪ್ರಶ್ನೆ ಮಾಡಿದ್ದಾರೆ.

ಸೂಕ್ತ ಕ್ರಮಕ್ಕೆ ಆಗ್ರಹ

ವಿಡಿಯೋ ವೈರಲ್ ಆಗುತ್ತಿದ್ದಂತೆ ಅನೇಕರು ಟ್ರಾಫಿಕ್ ಪೊಲೀಸರನ್ನು ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದಾರೆ. ಎಲ್ಲಾ ಗೊತ್ತಿದ್ದು ಬೇಜವಾಬ್ದಾರಿಯಿಂದ ವರ್ತಿಸುವ ಇಂತಹವರ ವಿರುದ್ಧ ಕಠಿಣ ಕ್ರಮ ತೆಗೆದುಕೊಂಡರೆ ಮಾತ್ರ ಇಂತಹ ಕೃತ್ಯಗಳಿಗೆ ಕಡಿವಾಣ ಹಾಕಬಹುದು ಎಂದು ಹೇಳಿದ್ದಾರೆ.

ಹೆಲ್ಮೆಟ್ ಇಲ್ಲದ ದ್ವಿಚಕ್ರ ವಾಹನ ಸವಾರರಿಗೆ ದಂಡ ಪ್ರಯೋಗ ಮಾಡಿದರೂ, ಇನ್ನೂ ಅನೇಕ ಮಂದಿ ಹೆಲ್ಮೆಟ್ ಧರಿಸದೆ ಸಂಚರಿಸುವುದು ಸಾಮಾನ್ಯವಾಗಿದೆ. ಹೆಲ್ಮೆಟ್ ಧರಿಸದೆ ವಾಹನ ಚಲಾಯಿಸುವುದೇ ತಪ್ಪು, ಅಂತಹದರಲ್ಲಿ ಯುವತಿಯನ್ನು ಮುಂದೆ ಕೂರಿಸಿಕೊಂಡು ಸಾರ್ವಜನಿಕವಾಗಿ ರೊಮ್ಯಾನ್ಸ್ ಮಾಡಿದರೆ ಅಪಘಾತವಾದರೆ ಯಾರು ಹೊಣೆ ಎನ್ನುವುದು ನೆಟ್ಟಿಗರ ಪ್ರಶ್ನೆ.

ಇತ್ತೀಚೆಗೆ ನಗರದಲ್ಲಿ ವೀಲಿಂಗ್ ಮಾಡುವ ಪುಂಡರ ಹಾವಳಿ ಕೂಡ ಹೆಚ್ಚಾಗಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯಲ್ಲಿ ವ್ಹೀಲಿಂಗ್ ಮಾಡುತ್ತಿದ್ದ 40ಕ್ಕೂ ಹೆಚ್ಚು ಪುಂಡರನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು-ತುಮಕೂರು ರಸ್ತೆಯಲ್ಲಿ ವ್ಹೀಲಿ ಮಾಡುತ್ತಾ ಅಪಘಾತ ಮಾಡಿದ್ದ ಇಬ್ಬರು ಪುಂಡರ ಬೈಕ್‌ಗಳನ್ನು ವಾಹನ ಸವಾರರು ಫ್ಲೈಓವರ್ ನಿಂದ ಕೆಳಗೆ ಎಸೆದಿದ್ದರು. ಇದು ಭಾರಿ ಸುದ್ದಿಯಾಗಿತ್ತು, ಅಂತಹ ಪುಂಡರಿಗೆ ಹೀಗೆ ಮಾಡಬೇಕು ಎಂದು ಸಾರ್ವಜನಿಕರು ಅಭಿಪ್ರಾಯಪಟ್ಟಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+