ಚೆಕ್ ಬೌನ್ಸ್ ಪ್ರಕರಣ: ಮಠ ಗುರುಪ್ರಸಾದ್‌ಗೆ ಜಾಮೀನು ಮಂಜೂರು ಮಾಡಿದ ಬೆಂಗಳೂರು ಕೋರ್ಟ್
ಬೆಂಗಳೂರು, ಜನವರಿ, 14: ಚೆಕ್ ಬೌನ್ಸ್ ಪ್ರಕರಣದಲ್ಲಿ ಬಂಧಿತರಾಗಿದ್ದ ಸ್ಯಾಂಡಲ್‌ವುಡ್ ನಿರ್ದೇಶಕ ಗುರುಪ್ರಸಾದ್ ಅವರಿಗೆ ಬೆಂಗಳೂರಿನ ಎಸಿಎಂಎಂ ನ್ಯಾಯಲಯವು ಶುಕ್ರವಾರ (ಜನವರಿ 13) ಜಾಮೀನು ಮಂಜೂರು ಮಾಡಿದೆ.
ನ್ಯಾಯಾಲಯವು ಜಾಮೀನುರಹಿತ ವಾರೆಂಟ್ ಜಾರಿ ಮಾಡಿತ್ತು. ಆದರೂ ಹಾಜರಾಗದ ಹಿನ್ನೆಲೆಯಲ್ಲಿ ಗಿರಿ ನಗರ ಪೊಲೀಸರು ಅವರನ್ನು ಬಂಧಿಸಿ ಬೆಂಗಳೂರಿನ 21ನೇ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಧೀಶರಾದ ಎಚ್.ಕೆ. ರೇಶ್ಮಾ ಅವರ ಮುಂದೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯವು ಗುರುಪ್ರಸಾದ್‌ಗೆ ಜಾಮೀನು ಮಂಜೂರು ಮಾಡಿದೆ.

ಗಿರಿ ನಗರ ಠಾಣೆಯಲ್ಲಿ ದೂರು ದಾಖಲು
2015ರಲ್ಲಿ ಬೆಂಗಳೂರಿನಲ್ಲಿ ತಮ್ಮ ಮನೆ ಹರಾಜಿಗೆ ಬಂದಿದೆ. ಅದನ್ನು ಬಿಡಿಸಿಕೊಳ್ಳಬೇಕು ಎಂದು ಸ್ನೇಹಿತ ಶ್ರೀನಿವಾಸ್ ಬಳಿ ಗುರುಪ್ರಸಾದ್ ಚೆಕ್ ನೀಡಿ 30 ಲಕ್ಷ ರೂಪಾಯಿ ಸಾಲ ಪಡೆದುಕೊಂಡಿದ್ದರು. ಸಾಲವನ್ನು ಹಿಂತಿರುಗುಸುವಂತೆ ಕೇಳಿದಾಗಲೆಲ್ಲ ಶ್ರೀನಿವಾಸ್‌ನನ್ನು ಗುರುಪ್ರಸಾದ್ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದರು. ಇದರಿಂದ ಬೇಸತ್ತ ಶ್ರೀನಿವಾಸ್ ಗಿರಿ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು ಎನ್ನುವ ಮಾಹಿತಿ ತಿಳಿದುಬಂದಿತ್ತು.

ಈ ಸಂಬಂಧ ಪ್ರಕರಣವು ನ್ಯಾಯಾಲಯದ ಮೆಟ್ಟಿಲೇರಿತ್ತು. ನ್ಯಾಯಾಲಯವು ಜಾಮೀನುರಹಿತ ವಾರೆಂಟ್ ಜಾರಿ ಮಾಡಿತ್ತು. ಆಗಲೂ ಕೂಡ ಗುರುಪ್ರಸಾದ್ ವಿಚಾರಣೆಗೆ ಹಾಜರಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಗಿರಿನಗರ ಪೊಲೀಸರು ಅವರನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ಇದೀಗ ನ್ಯಾಯಾಲಯವು ಗುರುಪ್ರಸಾದ್‌ಗೆ ಜಾಮೀನು ಮಂಜೂರು ಮಾಡಿದ್ದು, ವಿಚಾರಣೆಯನ್ನು ಫೆಬ್ರವರಿ 7ಕ್ಕೆ ಮುಂದೂಡಿದೆ.












Click it and Unblock the Notifications