• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬೆಂಗಳೂರು; 4 ಸಾವಿರದ ದಾಟಿದ ಕೋವಿಡ್ ಸಾವಿನ ಸಂಖ್ಯೆ

|

ಬೆಂಗಳೂರು, ನವೆಂಬರ್ 16: ಬೆಂಗಳೂರು ನಗರದಲ್ಲಿ ಭಾನುವಾರ 840 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ನಗರದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 3,57,280ಕ್ಕೆ ಏರಿಕೆಯಾಗಿದೆ. ಒಟ್ಟು ಸಾವಿನ ಸಂಖ್ಯೆ 4 ಸಾವಿರದ ಗಡಿ ದಾಟಿದೆ.

ಭಾನುವಾರ ಬೆಂಗಳೂರು ನಗರದಲ್ಲಿ 6 ಕೋವಿಡ್ ಸೋಂಕಿತರು ಮೃತಪಟ್ಟಿದ್ದಾರೆ. ಈ ಮೂಲಕ ನಗರದಲ್ಲಿ ಮೃತಪಟ್ಟವರ ಸಂಖ್ಯೆ 4003ಕ್ಕೆ ಏರಿಕೆಯಾಗಿದೆ. ಕರ್ನಾಟಕದಲ್ಲಿ ಇದುವರೆಗೂ ಮೃತಪಟ್ಟವರ ಸಂಖ್ಯೆ 11,529.

ನಗರದಲ್ಲಿ ಕೋವಿಡ್ ಸೋಂಕಿತರ ಸಾವಿನ ಸಂಖ್ಯೆ 1 ರಿಂದ 2 ಸಾವಿರಕ್ಕೆ ಹೆಚ್ಚಾಗಲು 31 ದಿನ ಬೇಕಾಯಿತು. 2 ರಿಂದ 3 ಸಾವಿರಕ್ಕೆ ಹೆಚ್ಚಾಗಲು 31 ದಿನವಾಗಿತ್ತು. ಈಗ 44 ದಿನಗಳಲ್ಲಿ 3 ರಿಂದ 4 ಸಾವಿರಕ್ಕೆ ಸಾವಿನ ಸಂಖ್ಯೆ ಹೆಚ್ಚಾಗಿದೆ.

ಅಕ್ಟೋಬರ್ ತಿಂಗಳಿನಲ್ಲಿ ಪ್ರತಿದಿನ ಸರಾಸರಿ 28 ಜನರು ಮೃತಪಟ್ಟಿದ್ದರು. ಆದರೆ, ನವೆಂಬರ್‌ನಲ್ಲಿ ಅದು 10ಕ್ಕೆ ಇಳಿಕೆಯಾಗಿದೆ. ಕರ್ನಾಟಕದಲ್ಲಿ ಅತಿ ಹೆಚ್ಚು ಸೋಂಕಿತರು ಮೃತಪಟ್ಟಿರುವ ದಾಖಲೆಯೂ ಬೆಂಗಳೂರಿನ ಹೆಸರಿನಲ್ಲಿದೆ.

ದೇಶದ ಮಹಾನಗರಗಳ ಪೈಕಿ ಅತಿ ಹೆಚ್ಚು ಸೋಂಕಿತರು ಇರುವ ನಗರದಲ್ಲಿ ಬೆಂಗಳೂರು 5ನೇ ಸ್ಥಾನದಲ್ಲಿದೆ. ಮುಂಬೈ, ದೆಹಲಿ, ಪುಣೆ, ಥಾಣೆ ನಗರಗಳು ಮೊದಲ ನಾಲ್ಕು ಸ್ಥಾನದಲ್ಲಿದೆ. ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಬೆಂಗಳೂರು 2ನೇ ಸ್ಥಾನದಲ್ಲಿದೆ.

ಸರ್ಕಾರಕ್ಕೆ ಸಲಹೆ: ಕರ್ನಾಟಕ ಕಾಂಗ್ರೆಸ್ ರಾಜ್ಯ ಬಿಜೆಪಿ ಸರ್ಕಾರಕ್ಕೆ ಸಲಹೆಯನ್ನು ನೀಡಿದೆ. "ಜಗತ್ತನ್ನೇ ಕಾಡುತ್ತಿರುವ ಕೊರೊನ ತೀವ್ರತೆ ಕಡಿಮೆಯಾಗಿದ್ದರೂ ಸಹ ಕೆಲವೆಡೆ ಕೊರೊನ ಅಟ್ಟಹಾಸ ಮೆರೆಯುತ್ತಿದೆ"

"ರಾಜ್ಯದಲ್ಲಿ ಕಲಿಕೆಯ ದೃಷ್ಟಿಯಿಂದ ಕಾಲೇಜುಗಳು ಪ್ರಾರಂಭವಾಗುತ್ತಿದ್ದು, ಅನಾಹುತಕ್ಕೆ ಆಸ್ಪದ‌ ಕೊಡದೆ ಬಿಜೆಪಿ ಸರ್ಕಾರ ಸೂಕ್ತ ಮುಂಜಾಗ್ರತಾ ಕ್ರಮಕ್ಕೆ ಚಾಲನೆ ನೀಡಲಿ" ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

   ದೀಪಾವಳಿ ಸಮಯದಲ್ಲಿ ಮೋದಿ ಮಾಡಿದ್ದಾದರೂ ಏನು? | Oneindia Kannada

   English summary
   COVID death numbers touched 4 thousand in the Bengaluru city. Total number of cases in city 3,57,280 and active cases 18,171.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X