ಅಪರಾಧ ಪ್ರಕರಣ ಕುರಿತು ಬೆಂಗಳೂರಿನ ಜನತೆ ಸಿಹಿ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ
ಬೆಂಗಳೂರು, ಜನವರಿ 07: ರಾಜ್ಯ ರಾಜಧಾನಿ ಬೆಂಗಳೂರು ವೇಗವಾಗಿ ಬೆಳೆಯುತ್ತಿರುವ ನಗರಗಳಲ್ಲಿ ಪ್ರಮುಖವಾದದ್ದು. ಕರ್ನಾಟಕದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಬೆಂಗಳೂರಿನಲ್ಲಿ ಅಪರಾಧ ಪ್ರಕರಣಗಳು ಕಡಿಮೆಯಾಗಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.
ಶನಿವಾರದಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಸಿದ್ದರಾಮಯ್ಯ ಭೇಟಿ ಮಾಡಿದ ನಂತರ ಈ ಹೇಳಿಕೆ ಹೊರ ಬಿದ್ದಿದೆ. ಬೆಂಗಳೂರಿನಲ್ಲಿ ಶಾಂತಿ, ನಿರ್ಭೀತಿಯ ವಾತಾವರಣ ನಿರ್ಮಿಸಬೇಕು. ಕಾನೂನು ಸುವ್ಯವಸ್ಥೆ ಕಾಪಾಡಲು ಬೆಂಗಳೂರು ಪೊಲೀಸರು ಕೆಲಸ ಮಾಡಬೇಕು ಎಂದು ಅವರು ಸೂಚಿಸಿದರು.

ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ನಗರದಲ್ಲಿ ಅಪರಾಧ ಪ್ರಕರಣಗಳು ಕಡಿಮೆಯಾಗಿವೆ. ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಅಪರಾಧಗಳ ನಿರ್ಮೂಲನೆ ಸಾಧ್ಯವಾಗದಿದ್ದರೂ, ಅವುಗಳನ್ನು ಕಡಿಮೆ ಮಾಡಬಹುದು. ಈ ನಟ್ಟಿನಿಲ್ಲಿ ಅಪರಾಧ ತಡೆಗೆ ಯಾವೆಲ್ಲ ಯೋಜನೆ ರೂಪಿಸಬೇಕು ಎಂಬೆಲ್ಲ ಅಂಶಗಳಿಗೆ ಪೊಲೀಸರು ಆದ್ಯತೆ ನೀಡಬೇಕು ಎಂದರು.
ಡ್ರಗ್ಸ್ ಮಾಫಿಯಾ ತಡೆಗೆ ಸೂಚನೆ
ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾವನ್ನು ಕೊನೆಗಾಣಿಸಲು, ಒಂಟಿಯಾಗಿ ವಾಸಿಸುವವರನ್ನು ಗುರುತಿಸಿ ಅವರ ರಕ್ಷಣೆಗೆ ಪೊಲೀಸ್ ಇಲಾಖೆಗೆ ಆದ್ಯತೆ ನೀಡಬೇಕು. ಅಲ್ಲದ ಪೊಲೀಸ್ ಬೀಟ್ ವ್ಯವಸ್ಥೆ ಇನ್ನಷ್ಟು ಬಲಪಡಿಸಬೇಕು. ಈ ಮೂಲಕ ಅಪರಾಧಗಳಿಗೆ ಕಡಿವಾಣ ಹಾಕಬೇಕಿದೆ ಎಂದರು.

ನಗರದಲ್ಲಿ ಹೊಯ್ಸಳ ಗಸ್ತು ವ್ಯವಸ್ಥೆಯನ್ನು ಬಲಪಡಿಸಬೇಕು. ನೀವುಗಳು ಹೆಚ್ಚು ಜವಾಬ್ದಾರಿಯಿಂದ ಕೆಲಸ ಮಾಡಬೇಕು. ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ರಿಯಲ್ ಎಸ್ಟೇಟ್ ಉದದ್ಯಮಿಗಳ ಜತೆ ಶಾಮೀಲಾಗಿ ಅಕ್ರಮದಲ್ಲಿ ತೊಡಗುವುದು ಸರಿಯಲ್ಲ. ಇದರಿಂದಾಗಿ ಸಾರ್ವಜನಿಕರು ಪೊಲೀಸ್ ವ್ಯವಸ್ಥೆ ಮೇಲೆ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆ. ಈ ಬಗ್ಗೆ ಎಚ್ಚರಿಕೆ ವಹಿಸುವಂತೆ ಸಿದ್ದರಾಮಯ್ಯ ಹೇಳಿದರು.
ಅಕ್ರಮದಲ್ಲಿ ತೊಡಗುವವ ವಿರುದ್ಧ ಕ್ರಮ
ಒಂದು ವೇಳೆ ಕಾಯಕನಿಷ್ಟೆ ಬಿಟ್ಟು ಅಕ್ರಮದಲ್ಲಿ ತೊಡಗುವವರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಎಚ್ಚರಿಸಿದ ಅವರು, ರೌಡಿಸಂಗೆ ಕಡಿವಾಣ ಹಾಕಬೇಕು. ಇನ್ನೂ ಇತ್ತೀಚೆಗೆ ಸುಲಲಿತವಾಗಿ ಹೊಸ ವರ್ಷಾಚರಣೆ ನಡೆಯಿತು. ಇದಕ್ಕೆ ಕಾರಣರಾದ ಹಾಗೂ ಆಚರಣೆಯಲ್ಲಿ ಸೂಕ್ತ ಬಂದೋಬಸ್ತ್ ಒದಗಿಸಿದ ಪೊಲೀಸ್ ಆಯುಕ್ತರ ಕಾರ್ಯವೈಖರಿಗೆ ಮುಖ್ಯಮಂತ್ರಿಗಳು ಮೆಚ್ಚುಗೆ ವ್ಯಕ್ತಪಡಿಸಿದರು.
ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಹೊಸ ವರ್ಷಾಚರಣೆ ಅದ್ಧೂರಿಯಾಗಿ ನಡೆಯಿತು. ಎಲ್ಲಿಯೂ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಕಟ್ಟೆಚ್ಚರ ವಹಿಸಿತ್ತು. ಸೂಕ್ತ ಮಾರ್ಗ ಸೂಚಿಗಳನ್ನು ಹೊರಡಿಸಿತ್ತು, ಪರಿಣಾಮ ವರ್ಷಾಚರಣೆ ಅತ್ಯುತ್ತಮವಾಗಿ ಜರುಗಿದೆ.












Click it and Unblock the Notifications